ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.
ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ ಫಿರ್ದೋಸ್ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ ಎಂದು ಹೇಳಲಾಗಿದೆ. ಒಟ್ಟು ಇದರ ಬೆಲೆ ಅಂದಾಜು 18 ಲಕ್ಷ ರೂ ಇರಬಹುದು ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಕೊನೆಗೂ ತುಂಗಾ ನಗರ ಪೊಲೀಸರ ಚಾಣಾಕ್ಷತನದಿಂದ ಈಕೆಯ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ.
ಮದುವೆ ಮನೆಗೆ ಚಿನ್ನಾಭರಣ ಹಾಕಿಕೊಂಡು ಬರುವ ಜನರನ್ನು ಇವಳು ವಾಚ್ ಮಾಡುತ್ತಿದ್ದಳು. ಅವರು ಚಿನ್ನಾಭರಣ ಬ್ಯಾಗ್ ನಲ್ಲಿ ಇಡುವುದನ್ನು ಗಮನಿಸಿದ ಬಳಿಕ ಅದನ್ನು ಗಪ್ ಚುಪ್ ಆಗಿ ಬುರ್ಖಾ ಹಾಕಿಕೊಂಡು ಬಂದು ಎಗರಿಸಿಕೊಂಡು ಹೋಗುತ್ತಿದ್ದಳು.ಕೆಲವು ಸಂದರ್ಭದಲ್ಲಿ ಇವಳ ಕಳ್ಳತನ ಮಾಡುವಾಗ ಸ್ಥಳೀಯರಿಗೆ ಸಿಕ್ಕಿದ್ದಾಳೆ. ಅಲ್ಲಿರುವ ಜನರು ಮಹಿಳೆ ಅಂತಾ ಅನುಕಂಪ ತೋರಿಸಿ ವಾರ್ನ್ ಮಾಡಿ ಬಿಟ್ಟು ಕಳಿಸಿದ್ದಾರೆ. ಇದರ ಬಳಿಕವೂ ಈ ಕಳ್ಳಿಯ ನಡವಳಿಕೆ ಬದಲು ಆಗಲಿಲ್ಲ. ಮತ್ತೆ ಇದೇ ಕಳ್ಳತನ ಮುಂದುವರೆಸಿದ್ದಳು. ಇತ್ತೀಚೆಗೆ ಮತ್ತೆ ನಾಲ್ಕು ಕಳ್ಳತನ ಪ್ರಕರಣವು ದಾಖಲು ಆಗಿದ್ದವು. ಈ ಕಳ್ಳತನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದಾಗ ಈ ಕಿಲಾಡಿ ಕಳ್ಳಿಯು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹೀಗೆ ಮಹಿಳೆಯಾಗಿ ಮದುವೆ ಸಮಾರಂಭದಲ್ಲಿ ಎಂಟ್ರಿಕೊಟ್ಟು ಚಿನ್ನಾಭರಣ ಕದ್ದುಕೊಂಡು ಹೋಗುತ್ತಿದ್ದಳು ಎಂದು ಮ್ಯಾರೇಜ್ ಹಾಲ್ ಮಾಲೀಕ ಮಹ್ಮದ್ ಜುಬೇಲ್ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಿತು. ಉದಯಪುರದಲ್ಲಿ ಮದುವೆ ಶಾಸ್ತ್ರಗಳು ನೆರವೇರಿದವು. ಈ ಫೋಟೋಗಳನ್ನು ರಶ್ಮಿಕಾ ಈ ಮೊದಲು ಹಂಚಿಕೊಂಡಿದ್ದರು.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರು ವಿವಾಹಪೂರ್ವ ಶಾಸ್ತ್ರಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೆಬ್ರವರಿ 25ರಂದು ಒಂದಷ್ಟು ಶಾಸ್ತ್ರಗಳು ನಡೆದಿದ್ದವು. ಅವುಗಳ ಫೋಟೋಗಳನ್ನು ರಶ್ಮಿಕಾ ರಿವೀಲ್ ಮಾಡಿದ್ದಾರೆ.
ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫ್ರೆಂಡ್ಸ್ ಗ್ಯಾಂಗ್ ಜೊತೆ ಒಂದೇ ರೀತಿಯಲ್ಲಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಭಿನ್ನ ಭಿನ್ನ ಫೋಟೋಗಳನ್ನು ಹಂಚಿಕೊಂಡು ಮಿಂಚಿದ್ದಾರೆ.
ರಶ್ಮಿಕಾ ಅವರು ವಿವಾಹದ ಬಗ್ಗೆ ಅನೇಕ ರೀತಿಯ ಕನಸುಗಳನ್ನು ಕಂಡಿದ್ದರು. ಆ ಕನಸುಗಳನ್ನು ಈಡೇರಿಸಿಕೊಂಡಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಮದುವೆಗೆ ಕೋಟಿ ಕೋಟಿ ಖರ್ಚು ಮಾಡಿದ್ದಾರೆ.
ಫೆಬ್ರವರಿ 26 ರಶ್ಮಿಕಾ ಪಾಲಿಗೆ ಯಾವಾಗಲೂ ವಿಶೇಷ ದಿನವಾಗಿಯೇ ಉಳಿಯಲಿದೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿವೆ. ರಶ್ಮಿಕಾ ಯುವರಾಣಿ ರೀತಿ ಕಂಗೊಳಿಸುತ್ತಿದ್ದರು ಎಂದು ಅನೇಕರು ಹೇಳಿದ್ದಾರೆ.
ಮುಂಬೈ, ಮಾರ್ಚ್ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ.
ಮುಂಬೈನ ಆಂಟೋಪ್ ಹಿಲ್ ನೆರೆಹೊರೆಯಲ್ಲಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಅವಳು ತನ್ನ ಕೋಣೆಯಿಂದ ಹೊರಬರದಿದ್ದಾಗ, ಅವಳ ಪೋಷಕರು ಅವಳಿಗೆ ಕರೆ ಮಾಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅವರು ಅವಳ ಕೋಣೆಯ ಬಾಗಿಲು ಒಡೆದು ನೋಡಿದಾಗ, ಆಕೆ ಸೀಲಿಂಗ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವಳು ಸತ್ತಿದ್ದಾಳೆಂದು ಘೋಷಿಸಿದ್ದಾರೆ.
ಯುವತಿ ತನ್ನ ಕೋಣೆಯಲ್ಲಿ ಆರು ಪುಟಗಳ ‘ಆತ್ಮಹತ್ಯೆ ಪತ್ರ’ವನ್ನು ಬರೆದಿಟ್ಟಿದ್ದಾಳೆ. ಅದರಲ್ಲಿ ಅವಳು ಖಾನ್ ಹೆಸರಿಸಿದ್ದಾಳೆ ಮತ್ತು ಅವನು ನಿರಂತರವಾಗಿ ತನಗೆ ಕಿರುಕುಳ ನೀಡುತ್ತಿದ್ದ ಎಂದು ಬರೆದಿದ್ದಾಳೆ ಎಂದು ಆಂಟೋಪ್ ಹಿಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯುವತಿ ಪೋಷಕರು ನೀಡಿರುವ ದೂರಿನ ಮೇಲೆ ಆರೋಪಿಯನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 108 ಸೇರಿದಂತೆ ಸಂಬಂಧಿತ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೃತ ಯುವತಿ ಹಾಗೂ ಆರೋಪಿ ಡೇಟಿಂಗ್ ಆ್ಯಪ್ ಮೂಲಕ ಪರಿಷಯವಾಗಿದ್ದರು, ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂಬುದು ತಿಳಿದುಬಂದಿದೆ.
ಬೆಂಗಳೂರು, ಮಾ.11: ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗಾಳಿಯ ಗುಣಮಟ್ಟವು ‘ತೃಪ್ತಿದಾಯಕ’ ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಧೂಳು ಮತ್ತು ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗುವ ಸಾಧ್ಯತೆ ಎಂದು ತಜ್ಞರು ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ವಾಯು ಮಾಲಿನ್ಯದ ಮಟ್ಟವೂ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 100ರಿಂದ 170ರ ಆಸುಪಾಸಿನಲ್ಲಿದ್ದು, ಹಲವು ಪ್ರದೇಶಗಳಲ್ಲಿ ಗಾಳಿಯು ‘ಕಳಪೆ’ (Poor) ಮತ್ತು ‘ಅನಾರೋಗ್ಯಕರ’ (Unhealthy) ಹಂತಕ್ಕೆ ತಲುಪಿದೆ. ರಸ್ತೆ ಕಾಮಗಾರಿಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಂದ ಏಳುತ್ತಿರುವ ಧೂಳು ಗಾಳಿಯನ್ನು ಕಲುಷಿತಗೊಳಿಸುತ್ತಿದೆ. ಸೂರ್ಯನ ತೀವ್ರ ಬಿಸಿಲಿನಿಂದಾಗಿ ವಾಹನಗಳ ಹೊಗೆಯು ರಾಸಾಯನಿಕ ಕ್ರಿಯೆಗೆ ಒಳಗಾಗಿ ಓಜೋನ್ ಮಾಲಿನ್ಯವನ್ನು ಸೃಷ್ಟಿಸುತ್ತಿದೆ.
ಜಿಲ್ಲೆಯ ವಾಯುಮಾಲಿನ್ಯ ಮಟ್ಟ:
ನಗರ / ಪ್ರದೇಶ
AQI ಸೂಚ್ಯಂಕ
ವರ್ಗೀಕರಣ
ಮುಖ್ಯ ಮಾಲಿನ್ಯಕಾರಕ
ಬೆಂಗಳೂರು (ಸರಾಸರಿ)
172
ಅನಾರೋಗ್ಯಕರ
PM2.5 & Ozone
ಮಂಗಳೂರು
174
ಅನಾರೋಗ್ಯಕರ
PM10
ಮೈಸೂರು
164
ಅನಾರೋಗ್ಯಕರ
PM2.5
ಹುಬ್ಬಳ್ಳಿ-ಧಾರವಾಡ
163
ಅನಾರೋಗ್ಯಕರ
PM10
ಕಲಬುರಗಿ
160
ಅನಾರೋಗ್ಯಕರ
ಧೂಳು (Dust)
ಉಡುಪಿ
162
ಅನಾರೋಗ್ಯಕರ
PM2.5
ಕರಾವಳಿ ತೀರದಲ್ಲಿ ಆರ್ದ್ರತೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ PM2.5 ಕಣಗಳ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕ ತಂದಿದೆ. ಉಡುಪಿಯಲ್ಲಿ AQI 150ರ ಗಡಿ ದಾಟಿದ್ದು, ಸೂಕ್ಷ್ಮ ಆರೋಗ್ಯವುಳ್ಳವರಿಗೆ ಕಿರಿಕಿರಿ ಉಂಟುಮಾಡಬಹುದು.ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಬಿಸಿ ಗಾಳಿ ಮತ್ತು ಧೂಳಿನ ಬಿರುಗಾಳಿ (Dust Storms) ಲಕ್ಷಣಗಳಿರುವುದರಿಂದ ಗಾಳಿ ಹೆಚ್ಚು ಕಲುಷಿತಗೊಂಡಿದೆ. ಕಲಬುರಗಿಯಲ್ಲಿ AQI 160 ದಾಟಿದ್ದು, ಇದು ‘ಕಳಪೆ’ ವಿಭಾಗಕ್ಕೆ ಸೇರುತ್ತದೆ.ಹುಬ್ಬಳ್ಳಿ-ಧಾರವಾಡದಲ್ಲಿ ವಾಯು ಗುಣಮಟ್ಟ ಸದ್ಯಕ್ಕೆ ನಿಯಂತ್ರಣದಲ್ಲಿದ್ದರೂ, ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಮಾಲಿನ್ಯ ಅಧಿಕವಾಗಿದೆ.
ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರು ಈಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರು ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಿಗ್ ಬಾಸ್ನ (Bigg Boss) ಬೆಂಗಾಲಿ ವರ್ಷನ್ಗೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಭಾರತದ ಜನಪ್ರಿಯ ಶೋನ ಭಾಗವಾಗಲು ರೆಡಿ ಆಗಿದ್ದಾರೆ. ಶೀಘ್ರವೇ ಸ್ಟಾರ್ ಜಲ್ಶಾದಲ್ಲಿ ಈ ಶೋ ಪ್ರಸಾರ ಕಾಣಲಿದೆ.
‘ಬಿಗ್ ಬಾಸ್’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್, ನಾಗಾರ್ಜುನ, ವಿಜಯ್ ಸೇತುಪತಿಯಂತಹ ಸ್ಟಾರ್ ನಟರು ಇದರ ಹೋಸ್ಟ್ ಆಗಿ ಮಿಂಚಿದ್ದಾರೆ. ಎಲ್ಲಾ ಭಾಷೆಗಳಲ್ಲೂ ಸಿನಿಮಾ ರಂಗಕ್ಕೆ ಸಂಬಂಧಿಸಿದವರೇ ಇದನ್ನು ಹೋಸ್ಟ್ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಕ್ರಿಕೆಟ್ ಕ್ಷೇತ್ರದ ಹಿನ್ನೆಲೆ ಹೊಂದಿರುವವರು ಬಿಗ್ ಬಾಸ್ ಶೋನ ನಡೆಸಿಕೊಡುತ್ತಿರುವುದು ವಿಶೇಷ.
‘ಬಿಗ್ ಬಾಸ್’ಗೆ ವಿವಿಧ ರೀತಿಯ ಮನಸ್ಥಿತಿ ಇರುವ ವ್ಯಕ್ತಿಗಳು ಬರುತ್ತಾರೆ. ಅವರೆಲ್ಲರನ್ನೂ ಹ್ಯಾಂಡಲ್ ಮಾಡೋದು ಅಷ್ಟು ಸುಲಭ ಅಲ್ಲ. ಅದಕ್ಕೆ ಸಾಕಷ್ಟು ಖಡಕ್ ಆಗಿ ನಡೆದುಕೊಳ್ಳಬೇಕು. ಸೌರವ್ ಗಂಗೂಲಿ ಅವರು ಮೇಲ್ನೋಟಕ್ಕೆ ಸೈಲೆಂಟ್ ಇದ್ದಂತೆ ಕಂಡರೂ ಅವರು ಮೈದಾನದಲ್ಲಿ ತೋರಿಸಿದ ಅಗ್ರೆಷನ್ ಇನ್ನೂ ಜನರ ಕಣ್ಮುಂದೆ ಇದೆ. ಹೀಗಾಗಿ, ಅವರು ಬಿಗ್ ಬಾಸ್ ನಡೆಸಿಕೊಡಲು ಉತ್ತಮ ಆಯ್ಕೆ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ, ಹಿಂದಿ, ತೆಲುಗು ಮೊದಲಾದ ಭಾಷೆಗಳಲ್ಲಿ ಪ್ರತಿ ವರ್ಷವೂ ಬಿಗ್ ಬಾಸ್ ನಡೆಯಲಿದೆ. ಕನ್ನಡದಲ್ಲಿ ಮೊದಲ ಸೀಸನ್ ಆರಂಭ ಆಗಿದ್ದು 2013ರಲ್ಲಿ. ಇಲ್ಲಿ ಈಗಾಗಲೇ 12 ಸೀಸನ್ಗಳು ಪೂರ್ಣಗೊಂಡಿವೆ. ಮಜವಾದ ಸಂಗತಿ ಎಂದರೆ, ಬೆಂಗಾಲಿಯಲ್ಲೂ ಮೊದಲ ಸೀಸನ್ ನಡೆದಿದ್ದು 2013ರಲ್ಲಿ. ಇದಕ್ಕೆ ಮಿಥುನ್ ಚಕ್ರವರ್ತಿ ಹೋಸ್ಟ್ ಆಗಿದ್ದರು. ಎರಡನೇ ಸೀಸನ್ ಪ್ರಸಾರ ಕಂಡಿದ್ದು, 2016ರಲ್ಲಿ. ಇದಕ್ಕೆ ಜೀತ್ ನಿರೂಪಕರಾಗಿದ್ದರು. ಆದರೆ, ಎರಡೂ ಸೀಸನ್ಗಳು ಅಷ್ಟಾಗಿ ಯಶಸ್ಸು ಕಾಣಲಿಲ್ಲ. ಹೀಗಾಗಿ, ಅಲ್ಲಿ ಬಿಗ್ ಬಾಸ್ ನಡೆಯಲೇ ಇಲ್ಲ. ಈಗ 10 ವರ್ಷಗಳ ಬಳಿಕ ಶೋ ಬೆಂಗಾಲಿ ಭಾಷೆಗೆ ಮರಳುತ್ತಿದೆ.
ಬೆಂಗಳೂರು, ಮಾ.11: ನಿತ್ಯ ಭಕ್ತಿ ಕಾರ್ಯಕ್ರಮಕ್ಕೆ ಸುಸ್ವಾಗತ. ಯಾವುದೇ ಶುಭ ಸಮಾರಂಭ, ಉದ್ಘಾಟನೆ ಅಥವಾ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮೊದಲು ದೀಪ ಬೆಳಗುವುದು ನಮ್ಮ ಸನಾತನ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಈ ಪದ್ಧತಿಯ ಹಿಂದಿನ ಮಹತ್ವವನ್ನು ನಾವು ಅರಿಯಬೇಕು. ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ ಎಂಬ ಶ್ಲೋಕ ದೀಪದ ಆಧ್ಯಾತ್ಮಿಕ ಶಕ್ತಿಯನ್ನು ಸಾರುತ್ತದೆ. ದೀಪವನ್ನು ಭಗವಂತನ ಸ್ವರೂಪವೆಂದು ಪರಿಗಣಿಸಲಾಗುತ್ತದೆ. ದೀಪದ ಜ್ವಾಲೆಯು ಯಾವಾಗಲೂ ಊರ್ಧ್ವಮುಖವಾಗಿ ಉರಿಯುತ್ತದೆ. ಇದು ಅಭಿವೃದ್ಧಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ದೀಪವು ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡಿ ಧನಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ. ಅಜ್ಞಾನವನ್ನು ತೊಲಗಿಸಿ ಜ್ಞಾನದ ಬೆಳಕನ್ನು ನೀಡುತ್ತದೆ. ನಮ್ಮ ಮನೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪೂಜೆ ಪ್ರಾರಂಭಿಸುವ ಮೊದಲು ದೀಪ ಬೆಳಗುವ ಸಂಪ್ರದಾಯವಿದೆ. ದೀಪಾವಳಿಯಂತಹ ಹಬ್ಬಗಳಲ್ಲಿ ಮನೆ ತುಂಬ ದೀಪಗಳನ್ನು ಹಚ್ಚಿ ಸಂಭ್ರಮಿಸಲಾಗುತ್ತದೆ. ಈ ಮೂಲಕ ದೀಪವು ನಮ್ಮ ಜೀವನದಲ್ಲಿ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತುಂಬುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಮಾ.11: ಇರಾನ್ ಇಸ್ರೇಲ್, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್ನ್ನು ಅನುಭವಿಸುತ್ತಿದೆ, ಎಲ್‌ಪಿಜಿ ಗ್ಯಾಸ್ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಅಭಾವವೇ ಈ ನಿರ್ಧಾರಕ್ಕೆ ಮುಖ್ಯ ಕಾರಣವಾಗಿದೆ.
ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನ ಪ್ರಸಾದ ಸಿದ್ಧಪಡಿಸಲು ಪ್ರತಿದಿನ 5 ರಿಂದ 6 ಕಮರ್ಷಿಯಲ್ ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಸದ್ಯ ದೇವಸ್ಥಾನದಲ್ಲಿ ಕೇವಲ 4 ಸಿಲಿಂಡರ್‌ಗಳು ಮಾತ್ರ ಲಭ್ಯವಿದ್ದು, ಅವು ಇಂದಿನ ಅಡುಗೆಗೆ ಸಾಕಾಗುವುದಿಲ್ಲ. ಗ್ಯಾಸ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರಸಾದ ಸೇವೆ ಬಂದ್ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದ ಈ ಅನ್ನದಾಸೋಹಕ್ಕೆ ಇದೀಗ ಎಲ್‌ಪಿಜಿ ಅಭಾವದಿಂದಾಗಿ ಅಡ್ಡಿ ಉಂಟಾಗಿದೆ. ಮುಂಜಾನೆ ನೀಡಲಾಗುವ ರೈಸ್ ಬಾತ್ ಮತ್ತು ಸಿಹಿ ಪ್ರಸಾದ ಹಾಗೂ ಮಧ್ಯಾಹ್ನದ ಊಟಕ್ಕೆ ಭಕ್ತರು ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ದೇವಸ್ಥಾನದಲ್ಲಿ ಪ್ರಸಾದ ಸೇವೆಯನ್ನು ನೆಚ್ಚಿಕೊಂಡಿರುವ ಸಾವಿರಾರು ಭಕ್ತರು ಮತ್ತು ಬಡವರು ಈ ನಿರ್ಧಾರದಿಂದ ತೀವ್ರ ಬೇಸರಗೊಂಡಿದ್ದಾರೆ. “ಸರ್ಕಾರವು ಇಂತಹ ದೊಡ್ಡ ದೇವಸ್ಥಾನಗಳಿಗೆ ಸಿಲಿಂಡರ್ ಪೂರೈಕೆಯಲ್ಲಿ ಆದ್ಯತೆ ನೀಡಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು” ಎಂದು ಭಕ್ತರು ಆಗ್ರಹಿಸಿದ್ದಾರೆ.
ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಶುಭ, ಕೌಟುಂಬಿಕ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ಪ್ರಯಾಣದ ಯೋಗಗಳು ಪ್ರತಿಯೊಂದು ರಾಶಿಯವರಿಗೂ ವಿಭಿನ್ನವಾಗಿವೆ. ರಾಶಿಗಳಿಗೆ ಅನ್ವಯವಾಗುವ ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಜಪಿಸಬೇಕಾದ ಮಂತ್ರಗಳನ್ನು ಗುರೂಜಿ ಅವರು ಪ್ರಸ್ತುತಪಡಿಸಿದ್ದಾರೆ. ಇಂದು ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭಾಶಯ ಕೋರಲಾಗಿದೆ.
ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲು ಕಡು ತೀವ್ರವಾಗಿರಲಿದ್ದು, ತಾಪಮಾನವು 38°C ರಿಂದ 40°C ಗಡಿ ತಲುಪುವ ಸಾಧ್ಯತೆ ಇದೆ. ಹೀಗಾಗಿ ‘ಹೀಟ್ ವೇವ್’ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆರ್ದ್ರತೆಯಿಂದ ಕೂಡಿದ್ದು (Humid), ಸೆಖೆ ಹೆಚ್ಚಿರಲಿದೆ.ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳಬಾರದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಮತ್ತು ಉಡುಪಿ ನಗರಗಳ ಮುಂದಿನ 3 ದಿನಗಳ (ಮಾರ್ಚ್ 12 – ಮಾರ್ಚ್ 14) ಕಾಲ ವಾತಾವರಣದಲ್ಲಿ ತುಂಬಾ ಬದಲಾವಣೆಗಳು ಆಗಲಿದೆ. ಹೆಚ್ಚು ಬಿಸಿಲಿನ ವಾತಾವರಣದಿಂದ ಭಾಗದಲ್ಲಿ ಇರಲಿದೆ. ಉತ್ತರ ಕರ್ನಾಟಕ (ಹುಬ್ಬಳ್ಳಿ/ಬೆಳಗಾವಿ)ದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ ಎಂದು ಹೇಳಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ.
ವೃಷಭ ರಾಶಿ:
ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ. ಉತ್ತಮ ಆಹಾರವನ್ನು ಪಡೆಯಲು ಯತ್ನಿಸಿ. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ.
ಮಿಥುನ ರಾಶಿ:
ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಇದು ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ.
ಕರ್ಕಾಟಕ ರಾಶಿ:
ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಮಾತನ್ನು ನೀವು ನಿಯಂತ್ರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು.
ಸಿಂಹ ರಾಶಿ:
ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೋರಂಜನೆಗೆ ಹೋದರೂ ಸರಿಯಾದ ಆಸ್ವಾದನೆ ಸಿಗದು. ಅತಿಯಾದ ಹಸಿವಾಗಬಹುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ.
ಕನ್ಯಾ ರಾಶಿ:
ಕಳೆದುಕೊಂಡ ಮಾತ್ರಕ್ಕೆ ಪಡೆಯಲಾಗದು ಎಂಬ ಭಾವ ಬೇ. ಉತ್ತಮವಾದುದನ್ನು ಪಡೆಯುವ ಚಮತ್ಕಾರ. ನಿಮ್ಮ ಸಂಬಂಧವನ್ನು ನೀವು ಉಳಿಸಿಕೊಳ್ಳಬೇಕು. ನೀವು ಯಾರಿಗೂ ಸಾಲ ನೀಡಬಾರದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ನಿದ್ರೆಯಲ್ಲಿ ದುಃಸ್ವಪ್ನಗಳು ಬೀಳಬಹುದು. ಮನೆಯ ಖರ್ಚುಗಳನ್ನು ಸ್ವಲ್ಪ ನಿಯಂತ್ರಿಸಬೇಕು. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ.
ತುಲಾ ರಾಶಿ:
ಸಮ್ಮಾನಗಳಿಂದ ಸಮಾಧಾನ ಇರದು. ಬೇರೆ ಯೋಚನೇಯೇ ನಿಮ್ಮದು. ನಿಮ್ಮ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಖರ್ಚು ಹೆಚ್ಚಾಗುತ್ತದೆ. ನಿಮ್ಮ ಮನಸ್ಸು ತೊಂದರೆಗೀಡಾಗಿಯೇ ಇರುತ್ತದೆ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು. ದುಃಖವನ್ನು ಸಹಿಸುವುದು ಅನಿವಾರ್ಯವಾದೀತು. ಅನಪೇಕ್ಷಿತ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ.
ವೃಶ್ಚಿಕ ರಾಶಿ:
ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸಬೇಡಿ. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಕೆಲವು ಹಳೆಯ ಒಪ್ಪಂದಗಳು ಸಮಯಕ್ಕೆ ಸರಿಯಾಗಿ ಅಂತಿಮಗೊಳ್ಳದ ಕಾರಣ ನೀವು ನಷ್ಟ ಅನುಭವಿಸಬಹುದು. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ನಿಮಗೆ ಕಷ್ಟವಾದೀತು. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಸಿದ್ಧತೆಯನ್ನು ನಡೆಸುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ.
ಧನು ರಾಶಿ:
ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಬೇಡವೆಂದುಕೊಂಡ ವಿಷಯವೂ ನಿಮ್ಮ ಬಳಿ ಸುತ್ತಿ ಬರುವುದು. ನೂತನ ನಿರ್ಮಾಣಗಳಿಗೆ ತಡೆಯಾಗುವುದು. ನಿಮ್ಮ ಎದುರಾಳಿ ನಿಮ್ಮನ್ನು ಸೋಲಿಸಬಹುದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ.
ಮಕರ ರಾಶಿ:
ನಿಮ್ಮ ವ್ಯವಹಾರ ಮೊದಲಿಗಿಂತ ಉತ್ತಮವಾಗಿ ನಡೆಯಲಿದೆ. ಗುಣದಲ್ಲಿ ಮತ್ಸರ ಬಿಟ್ಟು ಒಳ್ಳೆಯದರ ಕಡೆಗೆ ಹೊರಟುಬಿಡಿ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲದಿಂದ ನಿಮ್ಮ ಬಗ್ಗೆ ಬೇಡದ ಅಭಿಪ್ರಾಯಗಳು ಬರಬಹುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಹತ್ತಿರದ ಬಂಧುಗಳಿಂದ ವಿಶ್ವಾಸಕ್ಕೆ ತೊಂದರೆಯಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ.
ಕುಂಭ ರಾಶಿ:
ನೀವು ಕೆಲವು ಹೊಸ ಯೋಜನೆಯಲ್ಲಿ ಕೆಲಸ ಮಾಡಬಹುದು. ಕುಟುಂಬದ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ಒತ್ತಡ ಹೆಚ್ಚಾಗುತ್ತದೆ. ಇಂದಿನ ಸಮಯವನ್ನು ಸದ್ವಿನಿಯೋಗ ಮಾಡಿಕೊಳ್ಳುವಿರಿ. ಆರಂಭಿಸಿದ ಕಾರ್ಯವನ್ನು ಮೊಟುಕುಗೊಳಿಸುವಿರಿ. ನಿಮ್ಮ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ.
ಮೀನ ರಾಶಿ:
ಬೇರೆಯವರ ವಿಷಯಗಳಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಬೇಕು. ಖರ್ಚುಗಳನ್ನು ನಿಯಂತ್ರಿಸಲು ಹೋಗಿ ಅಪಮಾನದಲ್ಲಿ ಸಿಲುಕುವಿರಿ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವಜ್ರ, ಕರಣ : ಕೌಲವ, ಸೂರ್ಯೋದಯ – 06 – 35 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:34 – 14:04, ಯಮಗಂಡ ಕಾಲ 08:06 – 09:35, ಗುಳಿಕ ಕಾಲ 11:05 – 12:34