Headlines

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು…

Read More

ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ‘ನಾರಿ ಶಕ್ತಿ ವಂದನ ಕಾಯ್ದೆ’ ಭಾರತದ ರಾಜಕೀಯ ಇತಿಹಾಸದಲ್ಲೇ ಒಂದು ಕ್ರಾಂತಿಕಾರಿ ಬದಲಾವಣೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು (ಮೂರನೇ ಒಂದು ಭಾಗ) ಮೀಸಲಾತಿ ನೀಡುವ ಈ ಕಾಯ್ದೆಯು ಈಗ ಅನುಷ್ಠಾನದ ಹಂತಕ್ಕೆ ಬಂದಿದೆ….

Read More

ಶನಿಯ ಕೃಪೆಯಿಂದ ಈ ರಾಶಿಯವರ ದೀರ್ಘಕಾಲದ ಕನಸುಗಳು ನನಸಾಗುವ ಸಮಯ: ನಿಮ್ಮ ರಾಶಿಯ ಮೇಲಾಗುವ ಪ್ರಭಾವ ಏನು? – Kannada News

ಜ್ಯೋತಿಷ್ಯದ ಪ್ರಕಾರ ಶನಿಯು ಮೀನ ರಾಶಿಯಲ್ಲಿದ್ದು ಚಂದ್ರನ ದ್ರೇಕ್ಕಾಣ, ರವಿಯ ಹೋರೆ ಹಾಗೂ ಗುರುವಿನ ತ್ರಿಂಶಾಂಶ ಮತ್ತು ದ್ವಾದಶಾಂಶಗಳಲ್ಲಿ ಸ್ಥಿತನಾಗಿರುವುದು ಅತ್ಯಂತ ವಿಶಿಷ್ಟ ಸಂಯೋಜನೆಯಾಗಿದೆ. ಈ ತಿಂಗಳಲ್ಲಿ ಶನಿಯ ಸಂಚಾರ ಏನೆಲ್ಲ ಆಗಲಿದೆ. ​ಮೇಷ ರಾಶಿ ​ಶನಿಯು ಈ ರಾಶಿಯಲ್ಲಿ ಇರುವ ಕಾರಣ ಆರ್ಥಿಕ ವ್ಯಯ ಹೆಚ್ಚಾಗಲಿದೆ. ಆದರೆ ಗುರುವಿನ ದ್ವಾದಶಾಂಶವು ವಿದೇಶ ಪ್ರಯಾಣ ಅಥವಾ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಕೊಂಚ ವಿಳಂಬವಾಗಬಹುದು. ಚಂದ್ರನ ದ್ರೇಕ್ಕಾಣವು ಮನಸ್ಸಿನಲ್ಲಿ ಅಸ್ಥಿರತೆ ತರಲಿದ್ದು,…

Read More

IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

IPL 2026: ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ತನ್ನ ಜೆರ್ಸಿಯ ಮೇಲೆ ಚಿನ್ನದ ಬಣ್ಣದ ಐಪಿಎಲ್ ಲೋಗೋ (Golden IPL Logo) ಧರಿಸಲಿದೆ. ಇನ್ನುಳಿದ 9 ತಂಡಗಳು ಸಾಧಾರಣ ಐಪಿಎಲ್ ಲೋಗೋನಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ತಂಡವನ್ನು ಗೌರವಿಸಲು ಈ ವಿಶೇಷ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ಅದರಂತೆ ಕಳೆದ ಬಾರಿಯ ಚಾಂಪಿಯನ್ ಆರ್​ಸಿಬಿ ತಂಡವು ಈ ಬಾರಿ ಗೋಲ್ಡನ್ ಐಪಿಎಲ್ ಲೋಗೋದೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಈ ಬಾರಿಯ…

Read More

Daily Devotional: ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು? ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು ನಿಮ್ಮ ಅದೃಷ್ಟ ಮತ್ತು ವ್ಯಕ್ತಿತ್ವದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ಜಗತ್ತು ಗ್ರಹಗಳ ಅಧೀನದಲ್ಲಿದ್ದು, ಗ್ರಹಗಳು ಸಂಖ್ಯೆಗಳ ಅಧೀನದಲ್ಲಿವೆ. ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ. ನಿರ್ದಿಷ್ಟ ಸಂಖ್ಯೆಗಳ ಸಂಯೋಜನೆಗಳು ವಿಭಿನ್ನ ಫಲಿತಾಂಶಗಳನ್ನು ನೀಡುತ್ತವೆ. ಉದಾಹರಣೆಗೆ, ಮೊಬೈಲ್ ಸಂಖ್ಯೆಯ ಕೊನೆಯ…

Read More

Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ, ಮಾರ್ಚ್​ 23: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು(ಮಾರ್ಚ್​23) ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು(ತಿದ್ದುಪಡಿ)ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಮೂಲಕ ಮಸೂದೆಯು ಕೆಲವು ಕಂಪನಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಹೊಸ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಕಂಪನಿಯ ಸಿಎಸ್‌ಆರ್ ಮಿತಿಯನ್ನು 5 ಕೋಟಿ ರೂ.ಗಳಿಂದ 10 ಕೋಟಿ…

Read More

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು – Kannada News | Kalaburagi Woman Beaten to Death Over ‘Devil Possession’

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು! ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಬೇವಿನ ಕಟ್ಟಿಗೆಯಿಂದ ಹಲ್ಲೆ ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು…

Read More

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು – Kannada News | Rishabh Pant’s ‘Spider Man’ Catch Stuns Yashasvi Jaiswal

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ…

Read More