ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ ಮತ್ತು ಸೆಂಥಿಲ್ ಬಾಲಾಜಿಗೆ ಸಿಬಿಐ ಸಮನ್ಸ್
ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಕೇಂದ್ರೀಯ ತನಿಖಾ ದಳ (CBI) ಸಮನ್ಸ್ ಜಾರಿ ಮಾಡಿದೆ. ಇದೇ ಪ್ರಕರಣದಲ್ಲಿ ಡಿಎಂಕೆ ಶಾಸಕ ಸೆಂಥಿಲ್ ಬಾಲಾಜಿ ಅವರಿಗೂ ಮಾರ್ಚ್ 17ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದೆಹಲಿಯಲ್ಲಿ ಮಾರ್ಚ್ 15ರಂದು ವಿಚಾರಣೆಗೆ ಹಾಜರಾಗುವಂತೆ ದಳಪತಿ ವಿಜಯ್ (Thalapathy Vijay) ಅವರಿಗೆ ಸಮನ್ಸ್ ನೀಡಲಾಗಿದೆ. ಮಾರ್ಚ್ 15ರಂದು ದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗಾಗಿ…