Jitesh Sharma: ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು!
ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಜಿತೇಶ್ ಶರ್ಮಾ ಕಾಣಿಸಿಕೊಂಡಿರಲಿಲ್ಲ. ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ತಂಡದ ಭಾಗವಾಗಿದ್ದ ಜಿತೇಶ್ ಅವರನ್ನು ಏಕಾಏಕಿ ತಂಡದಿಂದ ಕೈ ಬಿಡಲಾಗಿತ್ತು. ಹೀಗೆ ತಂಡದಿಂದ ಕೈ ಬಿಟ್ಟಿದ್ದರ ಬಗ್ಗೆ ಯುವ ವಿಕೆಟ್ ಕೀಪರ್ ಬ್ಯಾಟರ್ ಮನಬಿಚ್ಚಿ ಮಾತನಾಡಿದ್ದಾರೆ. ಭಾರತ ತಂಡದಿಂದ, ಅದರಲ್ಲೂ ಟಿ20 ವಿಶ್ವಕಪ್ನಿಂದ ನನ್ನನ್ನು ಕೈ ಬಿಟ್ಟಿದ್ದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ಏಕೆಂದರೆ ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ…