ಗುರುಗ್ರಾಮ: ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು
ಗುರುಗ್ರಾಮ, ಮಾರ್ಚ್ 10: ನಿರ್ಮಾಣ ಹಂತದ ಗೋಡೆ(Wall) ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಲವಾರು ಕಾರ್ಮಿಕರು ಟನ್‌ಗಳಷ್ಟು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಡೆ ಇದ್ದಕ್ಕಿದ್ದಂತೆ ಕುಸಿದಾಗ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋದರು, ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಭಿವಾಡಿಯ ಆಸ್ಪತ್ರೆಗೆ…