ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ
ಬೆಂಗಳೂರು, ಮಾರ್ಚ್ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…