ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?
ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾ (Team India) ಹಲವು ದಾಖಲೆಗಳೊಂದಿಗೆ ಚುಟುಕು ಸಮರಕ್ಕೆ ವಿದಾಯ ಹೇಳಿದೆ. ಕಳೆದೊಂದು ತಿಂಗಳಿಂದ ಟಿ20 ವಿಶ್ವಕಪ್ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಇದೀಗ ವಿಶ್ರಾಂತಿ ಜಾರಿದೆ. ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯವನ್ನು ಮುಗಿಸಿ ತಂಡದೊಂದಿಗೆ ಸಂಭ್ರಮಾಚರಣೆಯಲ್ಲಿ ತೊಡಗಿದ ಆಟಗಾರರು ಇದೀಗ ತಮ್ಮ ತಮ್ಮ ಮನೆಗಳತ್ತ ಮುಖಮಾಡಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಖುಷಿಯನ್ನು ಇನ್ನು ಕೆಲವು ದಿನ ಆಚರಿಸಲಿದ್ದಾರೆ. ಇದು ಟೀಂ ಇಂಡಿಯಾ ಆಟಗಾರರ ಕಥೆಯಾದರೆ,…