ENG vs NZ: 11 ವಿಕೆಟ್ ಉರುಳಿಸಿದ ಹೆನ್ರಿ; 253 ರನ್‌ಗಳಿಂದ ಸೋತ ಇಂಗ್ಲೆಂಡ್ – Kannada News | New Zealand Stuns England at Oval, Levels Series 1 1 with Decisive 253 Run Victory
ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು 253 ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ( New Zealand vs England) ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಏಕಪಕ್ಷೀಯವಾಗಿ ಗೆದ್ದುಕೊಂಡರೆ, ಆ ಬಳಿಕ ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವವಹಿಸಿಕೊಂಡಿದ್ದ ಜೋ ರೂಟ್, ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲರಾದರು. ಗೆಲುವಿಗೆ…