ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
ಬೆಂಗಳೂರು, ಮಾರ್ಚ್ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ….