ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್ – Kannada News | Sakleshpur Yedakumari Landslide: Train Services Halted, Routes Diverted on Mangaluru Bengaluru Route
ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವುದು.Image Credit source: tv9 ಹಾಸನ, ಆಗಸ್ಟ್ 3: ಹಾಸನ ಜಿಲ್ಲೆಯ (Hassan) ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ (Mangalore Bangalore Train) ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ. ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆಯ ನಡುವೆಯೂ ಮುಂದುವರಿದಿದ್ದು, ಇಂದು ಕೂಡ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಹಾಗೂ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ….