Bengaluru Air Quality: ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!
ಬೆಂಗಳೂರು, ಮಾರ್ಚ್ 09: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…