ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್ಗೆ ವಾಟಾಳ್ ನಾಗರಾಜ್ ಕರೆ
ಮೈಸೂರು, ಮಾರ್ಚ್ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ? ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…