ಖಾಸಗಿ ದೃಶ್ಯ ಇಟ್ಟುಕೊಂಡು 78 ವರ್ಷದ ವ್ಯಕ್ತಿಗೆ ಮಹಿಳೆ ಬ್ಲ್ಯಾಕ್ಮೇಲ್: ದೂರು ದಾಖಲು
ಬೆಂಗಳೂರು, ಮಾರ್ಚ್ 08: 78 ವರ್ಷದ ವ್ಯಕ್ತಿಯೋರ್ವರನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡ ಮಹಿಳೆಯೊಬ್ಬಳು ಅವರ ಜೊತೆ ಸ್ನೇಹ ಬೆಳೆಸಿ, ಈಗ ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಸಂತ್ರಸ್ತ ವ್ಯಕ್ತಿಯ ಸೊಸೆ ಈ ಬಗ್ಗೆ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಮಾರ್ಚ್ 3ರಂದೇ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಮೊದಲು ಫೇಸ್‌ಬುಕ್‌ನಲ್ಲಿ 78 ವರ್ಷದ ವ್ಯಕ್ತಿಯನ್ನು ಸಂಪರ್ಕಿಸಿದ್ದಾಳೆ. ಬಳಿಕ ತನ್ನ…