ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
ಬಳ್ಳಾರಿ, ಮಾರ್ಚ್ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ…