ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

 

 

ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.

 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು ಯಾರು ಹಾಗೂ ನಿಮಗೆ ಅಡ್ಡಗಾಲು ಹಾಕುವುದಕ್ಕೆ ಏನೆಲ್ಲ ಮಾಡಿದರು ಎಂಬ ಬಗ್ಗೆ ವಿಶ್ವಾಸಾರ್ಹ ಆದ ಮೂಲಗಳಿಂದ ಮಾಹಿತಿ ದೊರೆಯಲಿದೆ. ವಾಹನಗಳ ಕಲಿಕೆ ಆರಂಭಿಸಬೇಕು ಅಂದುಕೊಂಡವರು ಅಥವಾ ಈಗ ಡ್ರೈವಿಂಗ್ ಕ್ಲಾಸ್ ಸೇರಿಕೊಂಡಂತಹವರು ಹೆಚ್ಚು ಏಕಾಗ್ರತೆಯಿಂದ ತೊಡಗಿಸಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಒಂದು ವೇಳೆ ನೀವೇನಾದರೂ ಲೆಕ್ಕಪತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಾದಲ್ಲಿ ವರ್ಷಗಳಿಂದ ಗಮನಕ್ಕೆ ಬಾರದೆ ಉಳಿದುಹೋದ ಹಣಕಾಸಿನ ಅವ್ಯವಹಾರವೊಂದು ನಿಮ್ಮ ಗಮನಕ್ಕೆ ಬರಲಿದೆ. ಇದನ್ನು ಮೇಲಧಿಕಾರಿಗಳಿಗೆ ತಿಳಿಸಬಾರದು ಎಂದು ನಿಮ್ಮ ಜೊತೆಗೆ ಕೆಲಸ ಮಾಡುವವರು ಕೇಳಿಕೊಳ್ಳಲಿದ್ದಾರೆ. ಎಲೆಕ್ಟ್ರಿಕಲ್ ವಸ್ತುಗಳ ಬಳಕೆ ಮಾಡುವಾಗ ಬಹಳ ಎಚ್ಚರಿಕೆಯನ್ನು ವಹಿಸಬೇಕು. ವಿದ್ಯುತ್ ಶಾಕ್, ಶಾರ್ಟ್ ಸರ್ಕೀಟ್ ಇಂಥದ್ದೇನಾದರೂ ಈ ದಿನ ಸಂಭವಿಸುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ನಿಮ್ಮಲ್ಲಿ ಕೆಲವರು ಪುಸ್ತಕ ಬರೆಯುವುದಕ್ಕೆ ಅಂತಲೇ ಕೆಲವು ಸ್ಥಳಗಳಿಗೆ ಪ್ರವಾಸ ತೆರಳಲಿದ್ದೀರಿ. ಇನ್ನು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಯೂಟ್ಯೂಬ್ ಚಾನೆಲ್ ಒಂದನ್ನು ಶುರು ಮಾಡುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದೀರಿ. ಈ ನಿಮ್ಮ ನಿರ್ಧಾರಕ್ಕೆ ಸಂಗಾತಿಯ ಬೆಂಬಲ ಇರಲಿದೆ. ಪ್ರೀತಿಯಲ್ಲಿ ಇರುವಂಥವರು ತಮ್ಮ ಮದುವೆ ಬಗ್ಗೆ ಮನೆಯಲ್ಲಿ ಪ್ರಸ್ತಾವ ಮಾಡುವ ಬಗ್ಗೆ ನಿರ್ಧರಿಸಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

 

 

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 8ರ ದಿನಭವಿಷ್ಯ

ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರ ಹಚ್ಚಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಇನ್ನು ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನ ಒಂದನ್ನು ಮಾಡುವ ಸಲುವಾಗಿ ನೀವು ಯಾವ ವ್ಯಕ್ತಿಗಳನ್ನು ತುಂಬ ಗೌರವದಿಂದ ಅಂಥವರನ್ನು ಭೇಟಿ ಮಾಡಿ, ಸಲಹೆ- ಮಾರ್ಗದರ್ಶನವನ್ನು ಪಡೆದುಕೊಳ್ಳಲಿದ್ದೀರಿ. ಸರ್ಕಾರಿ ಕೆಲಸದಲ್ಲಿ ಇರುವವರು ಐವತ್ತು ವರ್ಷ ಮೇಲ್ಪಟ್ಟವರು ಆಗಿದ್ದಲ್ಲಿ ವಿಆರ್ಎಸ್ ಪಡೆದುಕೊಂಡು, ಸ್ವಂತ ವ್ಯವಹಾರವನ್ನು ಆರಂಭಿಸುವುದಕ್ಕೋ ಅಥವಾ ಕೃಷಿಯನ್ನು ಆದಾಯಕ್ಕಾಗಿ ಮಾಡುವುದಕ್ಕೋ ತೀರ್ಮಾನ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರಶಾಂತವಾದ ಸ್ಥಳದಲ್ಲಿ ಸಮಯ ಕಳೆಯಬೇಕೆಂದು ನಿಮ್ಮಲ್ಲಿ ಕೆಲವರು ಒಬ್ಬರೇ ವಾಹನ ಚಲಾಯಿಸಿಕೊಂಡು ಲಾಂಗ್ ಡ್ರೈವ್ ಹೋಗಲಿದ್ದೀರಿ. ಮಾಸ್ಟರ್ ಚೆಕಪ್ ಮಾಡಿಸಿಕೊಳ್ಳಬೇಕು ಎಂದು ಬಹಳ ಸಮಯದಿಂದ ಅಂದುಕೊಳ್ಳುತ್ತಾ ಇದ್ದವರು ಈ ದಿನ ಮಾಡಿಸಿಕೊಳ್ಳುವ ಯೋಗ ಇದೆ. ಹೋರಾಟ- ಚಳವಳಿಗಳಲ್ಲಿ ಗುರುತಿಸಿಕೊಂಡವರಿಗೆ ಸನ್ಮಾನ, ಗೌರವ ದೊರೆಯುವಂಥ ಯೋಗ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ವರ್ಕ್- ಲೈಫ್ ಸಮತೋಲನ ಕಾಯ್ದುಕೊಳ್ಳುವುದಕ್ಕೆ ನಿಮಗೆ ಬರುವುದಿಲ್ಲ ಎಂಬ ಮಾತನ್ನು ಕುಟುಂಬ ಸದಸ್ಯರಿಂದ ಕೇಳಿಸಿಕೊಳ್ಳುವಂತೆ ಆಗಲಿದೆ. ಯಾವುದೇ ಜವಾಬ್ದಾರಿಯಾದರೂ ವಹಿಸಿಕೊಳ್ಳುತ್ತೇನೆ, ಯಾವ ಶಿಫ್ಟ್ ನಲ್ಲಿ ಬೇಕಾದರೂ ಕೆಲಸ ಮಾಡುತ್ತೇನೆ ಎಂದಿದ್ದ ವ್ಯಕ್ತಿಯೊಬ್ಬರು, ನೀವು ಅವರ ಪರವಾಗಿ ಮಾತನಾಡಿ ಉದ್ಯೋಗ ಕೊಡಿಸಿದ ನಂತರದಲ್ಲಿ, ಅದು ಸಾಧ್ಯವಿಲ್ಲ- ಇದು ಸಾಧ್ಯವಿಲ್ಲ ಎಂದು ಹೇಳುವುದಕ್ಕೆ ಆರಂಭಿಸಲಿದ್ದಾರೆ.

ಲೇಖನ- ಸ್ವಾತಿ ಎನ್.ಕೆ.

Source link

ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು

ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.

Source link

IND vs NZ: ಅಭಿಷೇಕ್, ವರುಣ್​ಗೆ ಕೋಕ್? ಫೈನಲ್ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11?

2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ (2026 T20 World Cup Final) ಅರ್ಹತೆ ಪಡೆದಿರುವ ಟೀಂ ಇಂಡಿಯಾ ಇದೇ ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ನ್ಯೂಜಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲವಾದ್ದರಿಂದ, ಈ ಪಂದ್ಯ ಟೀಂ ಇಂಡಿಯಾಕ್ಕೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಅಜೇಯವಾಗಿ ಉಳಿದಿರುವ ನ್ಯೂಜಿಲೆಂಡ್ ತಂಡವನ್ನು ಮಣಿಸಬೇಕೆಂದರೆ ಟೀಂ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಬೇಕಿದೆ. ಹಾಗಿದ್ದರೆ, ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

ಬ್ಯಾಟಿಂಗ್ ವಿಭಾಗ ಹೇಗಿರಲಿದೆ?

ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಭಾಗಶಃ ಎಲ್ಲರೂ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆರಂಭಿಕನಾಗಿ ಸಂಜು ಸ್ಯಾಮ್ಸನ್ ತಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬರುವ ಇಶಾನ್ ಕಿಶನ್ ಕೂಡ ಇಡೀ ಪಂದ್ಯಾವಳಿಯಲ್ಲಿ ತಂಡದ ಪರ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರನಾಗಿದ್ದಾರೆ. ಆ ನಂತರ ಬರುವ ನಾಯಕ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಕೂಡ ಮಧ್ಯಮ ಕ್ರಮಾಂಕದಲ್ಲಿ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ಆಲ್​ರೌಂಡರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.

ಅಭಿಷೇಕ್ ಶರ್ಮಾಗೆ ಗೇಟ್​ಪಾಸ್?

ಆದರೆ ಟೀಂ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿರುವುದು ಆರಂಭಿಕ ಅಭಿಷೇಕ್ ಶರ್ಮಾ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರನ್​ಗಳ ಮಳೆ ಹರಿಸಿದ್ದ ಅಭಿಷೇಕ್, ಟಿ20 ವಿಶ್ವಕಪ್ ಆರಂಭದ ಬಳಿಕ ಕಳಪೆ ಫಾರ್ಮ್​ಗೆ ಸಿಲುಕಿ ನರಳುತ್ತಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಅಭಿಷೇಕ್​ರಿಂದ ಕೇವಲ ಒಂದು ಅರ್ಧಶತಕ ಮಾತ್ರ ಸಿಡಿದಿದೆ. ಉಳಿದಂತೆ ಮೂರು ಪಂದ್ಯಗಳಲ್ಲಿ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇದೆಲ್ಲ ಸಾಲದೆಂಬಂತೆ ಸೆಮಿಫೈನಲ್‌ ಪಂದ್ಯದಲ್ಲೂ ಅಭಿಷೇಕ್ ತಮ್ಮ ಫಾರ್ಮ್​ ಕಂಡುಕೊಳ್ಳಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಬೇಕೆಂಬ ಕೂಗು ಜೋರಾಗಿದೆ. ಆದಾಗ್ಯೂ ಫೈನಲ್ ದೃಷ್ಟಿಯಿಂದ ಅಭಿಷೇಕ್​ರನ್ನು ಹೊರಗಿಡುವ ಸಾಹಸಕ್ಕೆ ಆಯ್ಕೆ ಮಂಡಳಿ ಕೈಹಾಕುವ ಸಾಧ್ಯತೆಗಳಿಲ್ಲ.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ

ಇನ್ನು ಬೌಲಿಂಗ್ ವಿಭಾಗದಲ್ಲೂ ಬೌಲರ್​ಗಳು ಕೊಂಚ ದುಬಾರಿಯಾದರೂ ಸಂದರ್ಭಕ್ಕೆ ಅನುಸಾರವಾಗಿ ತಂಡಕ್ಕೆ ನೆರವಾಗುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗಾಗಿ ವೇಗದ ಬೌಲಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಅಂದರೆ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಈ ವಿಭಾಗವನ್ನು ಮುನ್ನಡೆಸಲಿದ್ದಾರೆ. ಆದರೆ ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ದುಬಾರಿಯಾಗುತ್ತಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿ ಅಭಿಷೇಕ್ ಶರ್ಮಾ ಜೊತೆಗೆ ವರುಣ್ ಚಕ್ರವರ್ತಿಯನ್ನು ಹೊರಗಿಟ್ಟು, ಅವರ ಬದಲಿಗೆ ಕುಲ್ದೀಪ್ ಯಾದವ್​ಗೆ ಅವಕಾಶ ನೀಡಬೇಕೆಂಬ ಕೂಗು ಜೋರಾಗಿದೆ. ಆದರೆ ಕೊನೆಯ ಪಂದ್ಯದಿಂದ ವರುಣ್​ರನ್ನು ಹೊರಗಿಡುವ ಸಾಧ್ಯತೆಗಳಿಲ್ಲ. ಇದರರ್ಥ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

ಫೈನಲ್ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಗವದ್ಗೀತ ಅಲ್ಲ, ಇದು ಭಗತ್ ಗೀತ: ಪವರ್​​ಫುಲ್ ಪೊಲೀಸ್ ಆಗಿ ಪವನ್

ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಕೆಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ.

ಇಂದು (ಮಾರ್ಚ್ 07) ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಸಣ್ಣ ಟೀಸರ್ ಅಷ್ಟೇ ಬಿಡುಗಡೆ ಆಗಿದೆ. ಕೇವಲ 43 ಸೆಕೆಂಡುಗಳ ಟೀಸರ್ ಇದಾಗಿದ್ದು, ಅಷ್ಟರಲ್ಲೇ ಸಿನಿಮಾನಲ್ಲಿ ಪವನ್ ಕಲ್ಯಾಣ್ ಎಷ್ಟು ಪವರ್​​ಫುಲ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ತೋರಿಸಲಾಗಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ‘ಗಬ್ಬರ್ ಸಿಂಗ್’ ಮಾದರಿಯ ತಮಾಷೆ ಪ್ರವೃತ್ತಿಯ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ಟೀಸರ್​​ನಲ್ಲಿ ಕೆಲವು ಪಂಚಿಂಗ್ ಡೈಲಾಗ್​​ಗಳು ಸಹ ಇವೆ. ಜೊತೆಗೆ ಸಣ್ಣ ಆಕ್ಷನ್ ತುಣುಕುಗಳು ಸಹ ಇವೆ.

ಹರೀಶ್ ಶಂಕರ್ ನಿರ್ದೇಶನ ಮಾಡಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ, ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚೆ ಶುರು ಮಾಡಿದ್ದ ಸಿನಿಮಾ. ಈ ಸಿನಿಮಾನಲ್ಲಿ ಕನ್ನಡತಿ ಶ್ರೀಲೀಲಾ ನಾಯಕಿ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾಕ್ಕೆ ಬಂಡವಾಳ ಹೂಡಿದೆ. ಸಿನಿಮಾದ ಟೀಸರ್​​ನಲ್ಲಿ ಒಂದು ಮಹತ್ವದ ಅಂಶವನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಸಿನಿಮಾದ ಸಂಗೀತ ನಿರ್ದೇಶಕ ಎಂದು ಎಸ್ ತಮನ್ ಹೆಸರು ಬಳಸಲಾಗಿದೆ. ಅಸಲಿಗೆ ದೇವಿ ಶ್ರೀ ಪ್ರಸಾದ್ ಅವರು ಮೊದಲು ಈ ಸಿನಿಮಾದ ಸಂಗೀತ ನಿರ್ದೇಶಕನಾಗಿದ್ದರು. ದೇವಿಶ್ರೀ ಪ್ರಸಾದ್ ಅವರು ಹಾಡುಗಳನ್ನು ಮಾಡಿದ್ದರೆ, ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ.

ಇದನ್ನೂ ಓದಿ:

ಈ ಮೊದಲು ಮಾರ್ಚ್ 26 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಈಗ ಒಂದು ವಾರ ಮೊದಲೇ ಅಂದರೆ ಮಾರ್ಚ್ 19 ರಂದೇ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬದಲಾವಣೆ ಆದ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆಯನ್ನು ಪ್ರೀಪಾನ್ ಮಾಡಿಕೊಳ್ಳಲಾಗಿದೆ. ಇದೀಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ರಣ್ವೀರ್ ಸಿಂಗ್ ಅವರ ‘ಧುರಂಧರ್ 2’ ಸಿನಿಮಾಕ್ಕೆ ಪೈಪೋಟಿ ನೀಡಲಿದೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದ್ದು, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಮೂರನೇ ಸಿನಿಮಾ ಇದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

Source link

ಕಷ್ಟ ಅಂತ ಹೇಳಿಕೊಂಡು ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್‌: ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

ದಾವಣಗೆರೆ, (ಮಾರ್ಚ್ 07): ಖಾಸಗಿ ಆಸ್ಪತ್ರೆ ನರ್ಸ್​​, ಕಷ್ಟ ಅಂತ ಹೇಳಿಕೊಂಡು ಉದ್ಯಮಿಯನ್ನು ಬುಟ್ಟಿಗೆ ಹಾಕೊಂಡಿದ್ದು, ಬಳಿಕ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಹೌದು..ದಾವಣಗೆರೆಯ (Davanagere) ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣವನ್ನು (Honeytrap Case) ವಿದ್ಯಾನಗರ ಠಾಣೆ ಪೊಲೀಸರು ಭೇದಿಸಿದ್ದು, ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ್ದ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎನ್ನುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್  ಸೂತ್ರದಾರಿ ನರ್ಸ್ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬುವರು ಬಂಧಿತ ಅರೋಪಿಗಳು.

ಕಷ್ಟದಲ್ಲಿದ್ದೇನೆ ಎಂದು ಹೇಳಿಕೊಂಡು ಹೋಗಿ ಉದ್ಯಮಿ ಪ್ರಭು ಎನ್ನುವರನ್ನು ಬುಟ್ಟಿಗೆ ಹಾಕಿಕೊಂಡಿದ್ದ ನರ್ಸ್, ತನ್ನ ತಂಡದೊಂದಿಗೆ ಸೇರಿ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿದ್ದಳು. ಇದೀಗ ನಾಲ್ವರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.

ಇದನ್ನೂ ಓದಿ: ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​

ಘಟನೆ ಹಿನ್ನೆಲೆ

ಮೊದಲು ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಷ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಪರಿಚಯ ಮಾಡಿಕೊಂಡ ಬಳಿಕ ಸುಷ್ಮಿಯಾ, ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭು ಅವರನ್ನ ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ಸರ್ವೀಸ್ ಅಪಾರ್ಟ್ಮೆಂಟ್ ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್ ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಆದ್ರೆ, ಕಳೆದ ಒಂದು ವಾರದ ಹಿಂದೆ ಸುಶ್ಮೀತಾ ಜೊತೆ ಆಕೆಯ ಸ್ನೇಹಿತೆ ಕೂಡ ಸರ್ವೀಸ್ ಅಪಾರ್ಟ್ಮೆಂಟ್ ಗೆ ಬಂದಿದ್ದಳು. ಸಂಜನಾಳನ್ನು ಪ್ರತ್ಯೇಕ ರೂಂ ನಲ್ಲಿ ಇರಿಸಿ ಸುಷ್ಮಿತಾ ಹಾಗೂ ಪ್ರಭು ಒಂದು ರೂಮ್ ನಲ್ಲಿ ಇದ್ದರು.ಈ ಸಂದರ್ಭದಲ್ಲಿ ಸಂಜನಾ, ರಾಹುಲ್, ಬೆಕ್ಕಿನಕಣ್ಣು ಕೃಷ್ಣ ಮೂರು ಜನ ಮೊಬೈಲ್ ನಲ್ಲಿ ವೀಡಿಯೋ ಮಾಡಿಕೊಂಡು ಪ್ರಭು ಸುಷ್ಮಿತಾ ಇದ್ದ ರೂಮಿಗೆ ನುಗ್ಗಿದ್ದಾರೆ. ಬಳಿಕ ನಿಮ್ಮ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿದ್ದಾರೆ. ಅಲ್ಲದೇ ವಿಡಿಯೋ ಆಚೆ ಬರಬಾರದು ಅಂದ್ರೆ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಸಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ.

ಬಳಿಕ ಅರೋಪಿಗಳಾದ ಚನ್ನಬಸಪ್ಪ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್ ಸೇರಿ ಪ್ರಭುಗೆ ಹಣಕ್ಕಾಗಿ ಬೆದರಿಕೆ ಹಾಕಲು ಶುರುಮಾಡಿದ್ದಾರೆ. ಇದರಿಂದ ಬೇಸತ್ತ ಪ್ರಭು, ಕೊನೆಗೆ ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಣ ಕೊಡುವದಾಗಿ ಪ್ರಭು ಅವರಿಂದ ಹೇಳಿಸಿ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಕರೆಯಿಸಿಕೊಂಡು ಲಾಕ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ ಹೇಗಿತ್ತು ನೋಡಿ

ಕಿಯೊಂಜರ್, ಮಾ.7: ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ಒಡಿಶಾದ ಕಿಯೊಂಜರ್ ಜಿಲ್ಲೆಯ ಬನಾಜೋಡಿ ಗ್ರಾಮದ 30 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ತೋರಿದ ಜಾಣ್ಮೆ ಎಲ್ಲರ ಗಮನ ಸೆಳೆದಿದೆ. ಆನೆಯನ್ನು ಹಗ್ಗಗಳಿಂದ ಮೇಲೆತ್ತುವುದು ಅಪಾಯಕಾರಿ ಎಂದು ಮನಗಂಡ ಅಧಿಕಾರಿಗಳು, ಬಾವಿಗೆ ನೀರನ್ನು ಪಂಪ್ ಮಾಡುವ ಮೂಲಕ ಆನೆಯನ್ನು ಮೇಲೆಕ್ಕೆ ತೇಲುವಂತೆ ಮಾಡುವ ‘ಆರ್ಕಿಮಿಡೀಸ್ ತತ್ವವನ್ನು (Archimedes’ Principle) ಬಳಸಿದರು. ಬಾವಿಗೆ ನೀರು ತುಂಬುತ್ತಿದ್ದಂತೆ ಆನೆಯು ನೀರಿನ ಮಟ್ಟದೊಂದಿಗೆ ಮೇಲೆ ಬಂದಿತು. ಇದು ಆನೆಯ ಮೇಲೆ ಹೆಚ್ಚಿನ ಒತ್ತಡ ಅಥವಾ ಗಾಯಗಳಾಗದಂತೆ ತಡೆಯಲು ಸಹಕಾರಿಯಾಯಿತು. ಆನೆಯು ಅರ್ಧದಷ್ಟು ಮೇಲೆ ಬಂದ ನಂತರ, ಜೆಸಿಬಿ ಯಂತ್ರದ ಸಹಾಯದಿಂದ ಬಾವಿಯ ಪಕ್ಕದಲ್ಲಿ ದಾರಿ ನಿರ್ಮಿಸಿ ಆನೆಯನ್ನು ಸುರಕ್ಷಿತವಾಗಿ ಹೊರಬರುವಂತೆ ಮಾಡಲಾಯಿತು. ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಿಂದಾಗಿ ಆನೆಗೆ ಯಾವುದೇ ಪ್ರಾಣಾಪಾಯ ಸಂಭವಿಸದೆ ಅದು ಕಾಡಿನತ್ತ ತೆರಳಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಟಿ20 ವಿಶ್ವಕಪ್ ಫೈನಲ್ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಉಚಿತವಾಗಿ ವೀಕ್ಷಿಸುವುದು ಹೇಗೆ?

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಕೊನೆಯ ಹಂತ ತಲುಪಿದೆ. ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆಗೆ ಅಂತ್ಯ ಹಾಡಲು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣವು (Narendra Modi Stadium) ಸಜ್ಜಾಗಿದೆ. ಮಾರ್ಚ್ 8 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಎರಡೂ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇಲ್ಲಿಯವರೆಗೆ, ಐಸಿಸಿ ಈವೆಂಟ್‌ಗಳ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಉಭಯ ತಂಡಗಳು ಮೂರು ಬಾರಿ ಫೈನಲ್‌ನಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಕಿವೀಸ್ ಎರಡು ಬಾರಿ ಮತ್ತು ಭಾರತ ಒಮ್ಮೆ ಗೆಲುವು ಸಾಧಿಸಿದೆ. ಈಗ ಟಿ20 ಸ್ವರೂಪದ ಫೈನಲ್‌ನಲ್ಲಿ ಉಭಯ ತಂಡಗಳು ಎದುರುಬದುರಾಗುತ್ತಿವೆ. ಹೀಗಾಗಿ ಈ ಹೈ-ವೋಲ್ಟೇಜ್ ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ಉಚಿತವಾಗಿ ವೀಕ್ಷಿಸಬೇಕು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗಂಟೆಗೆ ಪ್ರಾರಂಭವಾಗುತ್ತದೆ?

ವಿಶ್ವಕಪ್ ಫೈನಲ್ ಪಂದ್ಯ ಮಾರ್ಚ್ 8 ರ ಭಾನುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?

ಈ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು OTT ಯಲ್ಲಿ ಎಲ್ಲಿ ವೀಕ್ಷಿಸಬಹುದು?

ಇಡೀ ಟಿ20 ವಿಶ್ವಕಪ್‌ನಂತೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್‌ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ.

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಚ್ಛೇದನ, ತ್ರಿಷಾ ಬಗ್ಗೆ ಮೊದಲ ಬಾರಿ ಮಾತನಾಡಿದ ವಿಜಯ್

ದಳಪತಿ ವಿಜಯ್ (Thalapathy Vijay) ರಾಜಕೀಯ ಪಕ್ಷ ಸ್ಥಾಪಿಸಿದ್ದು, ತಮಿಳುನಾಡು ಚುನಾವಣೆಗೆ ಸಜ್ಜಾಗುತ್ತಿದ್ದಾರೆ, ತಮ್ಮ ಪಕ್ಷವನ್ನು ಸಜ್ಜು ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ದಳಪತಿ ವಿಜಯ್ ಅವರ ಖಾಸಗಿ ಬದುಕಿನ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಲು ಆರಂಭಿಸಿವೆ. ವಿಜಯ್ ಅವರ ಪತ್ನಿ ಹಠಾತ್ತನೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಬಹಿರಂಗ ಆಗುತ್ತಿದ್ದಂತೆ ವಿಜಯ್ ಮತ್ತು ತ್ರಿಷಾ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ಅದೂ ಸಹ ಸಖತ್ ಸುದ್ದಿ ಆಗುತ್ತಿದೆ.

ತ್ರಿಷಾ ಜೊತೆಗಿನ ವಿಜಯ್ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಆಡಳಿತ ಪಕ್ಷದವರು ಇತರೆ ರಾಜಕೀಯ ಪಕ್ಷದ ಕಾರ್ಯಕರ್ತರು ಇದೇ ವಿಷಯ ಇರಿಸಿಕೊಂಡು ವಿಜಯ್ ಬಗ್ಗೆ ಟೀಕೆ ನಡೆಸುತ್ತಿದ್ದಾರೆ. ವಿಜಯ್ ಅಭಿಮಾನಿಗಳು, ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅವರ ಪರವಹಿಸಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ವಿಜಯ್ ವಿಚ್ಛೇದನ, ತ್ರಿಷಾ ಜೊತೆಗಿನ ಸಂಬಂಧ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿರಲಿಲ್ಲ. ಆದರೆ ಇದೀಗ ಈ ಬಗ್ಗೆ ಮಾತನಾಡಿದ್ದಾರೆ.

ವಿಜಯ್, ಇಂದು (ಮಾರ್ಚ್ 07) ಪಕ್ಷದ ವತಿಯಿಂದ ಮಹಿಳಾ ದಿನಾಚರಣೆ ಆಚರಿಸಿದ್ದರು. ಚೆನ್ನೈನಲ್ಲಿ ನಡೆದ ಈ ಬೃಹತ್ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ಇತರೆ ಕಾರ್ಯಕರ್ತರು ಆಗಮಿಸಿದ್ದರು. ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪಕ್ಷದ ವತಿಯಿಂದ ಮಹಿಳೆಯರಿಗೆ ಘೋಷಿಸಲಾಗುವ ಆರು ಯೋಜನೆಗಳ ವಿವರವನ್ನು ವಿಜಯ್ ನೀಡಿದರು. ಇದೇ ಕಾರ್ಯಕ್ರಮದಲ್ಲಿ ವಿಜಯ್ ಅವರು, ಇತ್ತೀಚೆಗೆ ತಮ್ಮ ಖಾಸಗಿ ಬದುಕಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದರು.

ಇದನ್ನೂ ಓದಿ:ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ

ಯಾವುದನ್ನೂ ನೇರವಾಗಿ ಹೇಳದ ವಿಜಯ್, ‘ಇತ್ತೇಚೆಗೆ ಕೆಲವು ಸಮಸ್ಯೆಗಳ ಬಗ್ಗೆ ಎಲ್ಲ ಸಾಕಷ್ಟು ವಿಚಾರಗಳು, ಚರ್ಚೆಗಳು ನಡೆಯುತ್ತಿವೆ. ನೀವು (ಅಭಿಮಾನಿಗಳು) ಸಹ ಈ ಸಮಸ್ಯೆಗಳ ಬಗ್ಗೆ ನೀವು ಹೋರಾಡುತ್ತಿರುವುದು, ಅದರಿಂದ ನೋವುಣ್ಣುತ್ತಿರುವುದನ್ನು ಗಮನಿಸುತ್ತಿದ್ದೇನೆ. ಅದನ್ನು ನೋಡಿ ನನಗೆ ನೋವಾಗುತ್ತಿದೆ. ಆ ಸಮಸ್ಯೆಗಳನ್ನೆಲ್ಲ ನಾನು ನೋಡಿಕೊಳ್ಳುವೆ. ನಾವು ನೀವು ಎಲ್ಲ ಸೇರಿಕೊಂಡು ಪ್ರಜೆಗಳಿಗೆ ಇರುವ ಸಮಸ್ಯೆಗಳ ಬಗ್ಗೆ ಅಷ್ಟೇ ಗಮನಕೊಡೋಣ. ಅವುಗಳ ಬಗ್ಗೆ ಎಲ್ಲ ತಲೆಕೆಡಿಸಿಕೊಳ್ಳಬೇಡಿ, ಕಾನ್ಫಿಡೆಂಟ್ ಆಗಿರಿ, ಜಯ ನಿಶ್ಚಯ’ ಎಂದು ವಿಜಯ್ ಹೇಳಿದ್ದಾರೆ.

ಆ ಮೂಲಕ, ತಮ್ಮ ಖಾಸಗಿ ಜೀವನದ ಸಮಸ್ಯೆಗಳನ್ನು ತಾವು ಬಗೆಹರಿಸುವುದಾಗಿ ವಿಜಯ್ ಹೇಳಿದ್ದಾರೆ. ಅಲ್ಲದೆ, ತಮ್ಮ ಅಭಿಮಾನಿಗಳು ಸಹ ಈ ವಿಷಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುವುದು ಬೇಡ ಎಂದು ಸಹ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ. ವಿಜಯ್ ಅವರ ಪತ್ನಿ ಸಂಗೀತ ಅವರು ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ವಿಜಯ್ ಹಾಗೂ ಸಂಗೀತ 1999 ರಲ್ಲಿ ಮದುವೆ ಆಗಿದ್ದರು. ಇದೀಗ ವಿಜಯ್, ತ್ರಿಷಾ ಜೊತೆಗೆ ಆಪ್ತವಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version