UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು. ಸಾಗರ್ ಅವರು ಈ ಹಿಂದೆ ವಿಧಾನಸೌಧದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಸಬ್ ಇನ್ಸ್‌ಪೆಕ್ಟರ್ ಆಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದಾರೆ. ಏಳು ವರ್ಷಗಳ ಕಾಲ ಯುಪಿಎಸ್‌ಸಿ ಪರೀಕ್ಷೆಗೆ ಸತತವಾಗಿ ಅಧ್ಯಯನ ಮಾಡಿದ ಸಾಗರ್, ಇದು ತಮ್ಮ ಆರನೇ ಪ್ರಯತ್ನ ಎಂದು ತಿಳಿಸಿದ್ದಾರೆ. ಹಿಂದಿನ ಐದು ಪ್ರಯತ್ನಗಳಲ್ಲಿ ಪ್ರಿಲಿಮ್ಸ್ ಹಂತವನ್ನು ಸಹ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಮೂರನ್ನೂ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ. ಈ ಸಾಧನೆಗೆ ಕುಟುಂಬ, ಸ್ನೇಹಿತರು ಮತ್ತು ಮಾರ್ಗದರ್ಶಕರ ಬೆಂಬಲವೂ ಕಾರಣ ಎಂದು ಸಾಗರ್ ಹೇಳಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಿದ್ಧರಾಗಿರುವ ಸಾಗರ್, ಭವಿಷ್ಯದಲ್ಲಿ ಐಎಎಸ್ ಆಗುವ ಗುರಿ ಹೊಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವೀರೇಂದ್ರ ಕಾಮತ್ ಅವರ ಪ್ರಕಾರ, ವಾಣಿಜ್ಯ ಸಿಲಿಂಡರ್‌ಗಳ ದರ ಏರಿಕೆಯ ಜೊತೆಗೆ ಮುಂದಿನ ದಿನಗಳಲ್ಲಿ ಸಿಲಿಂಡರ್ ಅಭಾವ ಉಂಟಾಗುವ ಸಾಧ್ಯತೆ ಇದೆ.

ಕೇಂದ್ರ ಪೆಟ್ರೋಲಿಯಂ ಖಾತೆಯು ಹೊರಡಿಸಿರುವ ಮಾರ್ಗಸೂಚಿಯಂತೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ವಾಣಿಜ್ಯ ಸಿಲಿಂಡರ್‌ಗಳಿಗೆ ಅಭಾವ ಉಂಟಾಗಬಹುದು ಎಂದು ಡಿಸ್ಟ್ರಿಬ್ಯೂಟರ್‌ಗಳಿಂದ ಹೋಟೆಲ್ ಅಸೋಸಿಯೇಷನ್‌ಗೆ ಮಾಹಿತಿ ಲಭಿಸಿದೆ. ಬೆಂಗಳೂರು ಸೇರಿದಂತೆ ದೇಶದ 95% ಹೋಟೆಲ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನೇ ಅವಲಂಬಿಸಿವೆ. ಸಿಲಿಂಡರ್ ಸಿಗದಿದ್ದರೆ ಹೋಟೆಲ್‌ಗಳನ್ನು ನಡೆಸಲು ಸಾಧ್ಯವಿಲ್ಲ. ಇದರಿಂದಾಗಿ ಅನೇಕ ಕಾರ್ಮಿಕರು ಕೆಲಸ ಕಳೆದುಕೊಳ್ಳಬಹುದು ಮತ್ತು ಹೋಟೆಲ್ ಮಾಲೀಕರಿಗೆ ದೊಡ್ಡ ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಅಸೋಸಿಯೇಷನ್ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಸದ್ಯಕ್ಕೆ ಯಾವುದೇ ದರ ಏರಿಕೆ ನಿರ್ಧಾರ ಕೈಗೊಂಡಿಲ್ಲವಾದರೂ, ಭವಿಷ್ಯದಲ್ಲಿ ಹೊರೆ ಹೆಚ್ಚಾದರೆ ಗ್ರಾಹಕರ ಮೇಲೆ ಬೆಲೆ ಹಾಕುವ ಅನಿವಾರ್ಯತೆ ಬರಬಹುದು ಎಂದು ಕಾಮತ್ ತಿಳಿಸಿದ್ದಾರೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UPSC Result 2025: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾದಗಿರಿ ಅಭ್ಯರ್ಥಿಗಳ ಸಾಧನೆ! ವೈದ್ಯ ವೃತ್ತಿ ಬಿಟ್ಟು ಯುಪಿಎಸ್‌ಸಿ ಗೆದ್ದ ಯುವತಿ

ಯಾದಗಿರಿ, ಮಾರ್ಚ್​ 07: ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ (UPSC Exam Results) ಪ್ರಕಟವಾಗುತ್ತಿದ್ದಂತೆ ಶೈಕ್ಷಣಿಕವಾಗಿ ಹಿಂದುಳಿದ ಎಂದು ಕರೆಯಲಾಗುವ ಯಾದಗಿರಿ ಜಿಲ್ಲೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಒಂದೇ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸಿದ್ದಾರೆ.

ಒಂದೇ ಜಿಲ್ಲೆಯ ನಾಲ್ವರ ಸಾಧನೆ!

ಯಾದಗಿರಿ ನಗರದ ಸಂದೀಪ್ ಬಾಡದ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಅಲ್ಲದೆ ಯಾದಗಿರಿ ನಗರದ ಡಾ. ನಿವೇದಿತಾ ಬಾವಿಮನಿ 469ನೇ ರ್ಯಾಂಕ್, ಶಹಾಪುರ ನಿವಾಸಿ ಬಸವರಾಜ್ ಜವಳಿ 664ನೇ ರ್ಯಾಂಕ್ ಹಾಗೂ ಚೆನ್ನೂರು ಗ್ರಾಮದ ಚಂದ್ರಶೇಖರ್ 880ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಡಾ. ನಿವೇದಿತಾ

ಇದರ ನಡುವೆ ಡಾ. ನಿವೇದಿತಾ ಬಾವಿಮನಿ ಅವರ ಮನೆಯಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ಮಗಳು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಂಭ್ರಮಾಚರಣೆ ನಡೆಸಿದ್ದಾರೆ. ಪೋಷಕರು ಮಗಳಿಗೆ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರೆ, ಪೊಲೀಸರು ಸಹ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದರು. ನಿವೇದಿತಾ ಅವರ ತಂದೆ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು, ತಾಯಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಿವೇದಿತಾ ಏನು ಹೇಳ್ತಾರೆ ಕೇಳಿ

ಇದನ್ನೂ ಓದಿ UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ವೈದ್ಯೆಯಾಗಿದ್ದ ನಿವೇದಿತಾ ಮೂರು ವರ್ಷಗಳ ಹಿಂದೆ ವೈದ್ಯ ವೃತ್ತಿಯನ್ನು ತೊರೆದು ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿದ್ದರು. ಆರಂಭದಿಂದಲೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಕನಸು ಹೊಂದಿದ್ದ ಅವರು ಸತತ ಪರಿಶ್ರಮ ಮತ್ತು ಕುಟುಂಬದ ಬೆಂಬಲದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಹಿಂದುಳಿದ ಜಿಲ್ಲೆ ಎಂಬ ಹೆಸರು ಇದ್ದರೂ ಪ್ರಯತ್ನ ಪಟ್ಟರೆ ಎಲ್ಲವೂ ಸಾಧ್ಯ ಎಂದು ಅವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯಾಗಬೇಕು ಎಂಬ ಆಸೆಯಿದ್ದು, ಅವಕಾಶ ಸಿಕ್ಕರೆ ಜನಸೇವೆಯಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿದ್ದೇನೆ ಎಂದು ನಿವೇದಿತಾ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ PES University ಕ್ಯಾಂಪಸ್‌ನ ಎಂಆರ್‌ಡಿ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹದೇವಪುರದ ಆಸ್ಪತ್ರೆಯಲ್ಲಿ ಬೆಳಗ್ಗೆ 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆಗೆ ರಿಬ್ಬನ್ ಕಟ್ಟಿಂಗ್ ಮೂಲಕ ಲೋಕಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್​ನ ಎಂಡಿ ಡಾ. ಬಿ ಭಾಸ್ಕರ ರಾವ್, ಸಿಇಒ ಡಾ. ನಿತೀಶ್ ಶೆಟ್ಟಿ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗುತ್ತಿದ್ದು, ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಸೇವೆಗಳನ್ನು ಇಲ್ಲಿ ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್​ ಮೋಡ್​​​ನಲ್ಲಿ ರಿವೇಂಜ್​ಗೆ ಇಳಿದ ರಣವೀರ್

‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್​​ಗೆ ರೆಡಿ ಆಗುತ್ತಿದೆ. ಮಾರ್ಚ್​ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್​​ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ.

‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಸಿನಿಮಾ ಸೀಕ್ವೆಲ್ ಮೊದಲ ಭಾಗಕ್ಕಿಂತಲೂ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸಿನಿಮಾ ಕೇಲವ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಈಗ ‘ಧುರಂದರ್ 2’ ಸಿನಿಮಾ ಹಿಂದಿ ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಲಿದೆ.

‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನಕ್ಕೆ ತೆರಳುತ್ತಾರೆ. ಅಲ್ಲಿ ಪಾಕಿಸ್ತಾನದವರಂತೆ ಇದ್ದು, ಸ್ಪೈ ಆಗಿ ಕೆಲಸ ಮಾಡುತ್ತಾರೆ. ಸಿನಿಮಾ ಭರ್ಜರಿ ಆ್ಯಕ್ಷನ್​​ಗಳನ್ನು ಒಳಗೊಂಡಿತ್ತು. ಕಂದಾಹಾರ್ ಹೈಜ್ಯಾಕ್, ಮುಂಬೈ ದಾಳಿ ಇತ್ಯಾದಿ ವಿಷಯಗಳನ್ನು ಒಳಗೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Hindu Devotional Tips: ಮಹಿಳೆಯರು ಶನಿವಾರದಂದು ತವರು ಮನೆಗೆ ಯಾಕೆ ಹೋಗಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮಹಿಳೆಯರು ಶನಿವಾರದಂದು ತವರು ಮನೆಗೆ ಬರುವುದು ಶುಭವೇ ಅಥವಾ ಅಶುಭವೇ? ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಹೆಣ್ಣುಮಕ್ಕಳನ್ನು ಅತ್ತೆಯ ಮನೆಗೆ ಕಳುಹಿಸುವಾಗ ಭಾನುವಾರ ಅಥವಾ ಮಂಗಳವಾರದಂತಹ ದಿನಗಳನ್ನು ಪೋಷಕರು ಅಷ್ಟು ಸೂಕ್ತವೆಂದು ಪರಿಗಣಿಸುವುದಿಲ್ಲ. ಅದೇ ರೀತಿ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋಗುವ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಭಾವಿಸಲಾಗುತ್ತದೆ. ಶನಿವಾರವು ಕೆಟ್ಟ ದಿನವಲ್ಲ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ಪವಿತ್ರ ದಿನ. ಆದರೆ, ವೈಜ್ಞಾನಿಕ ದೃಷ್ಟಿಕೋನದಿಂದ ನೋಡಿದಾಗ, ಶನಿವಾರದಂದು ಮನಸ್ಸು ಸಂಪೂರ್ಣವಾಗಿ ಶಾಂತವಾಗಿರಲು ಸಾಧ್ಯವಾಗದಿರಬಹುದು, ಒಂದಷ್ಟು ಸಂಕುಚಿತ ಭಾವನೆಗಳು ಬರಬಹುದು ಎಂದು ಹೇಳಲಾಗುತ್ತದೆ.

ಗುರೂಜಿಯವರು ಹೇಳುವಂತೆ, ಹಿಂದೂ ಸನಾತನ ಸಂಸ್ಕೃತಿಯಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿದೆ. ಭಾನುವಾರ ಸೂರ್ಯನಿಗೆ, ಸೋಮವಾರ ಶಿವನಿಗೆ, ಮಂಗಳವಾರ ಸುಬ್ರಹ್ಮಣ್ಯನಿಗೆ, ಬುಧವಾರ ವಿಷ್ಣು, ಗಣಪತಿ ಅಥವಾ ಕಾಲಭೈರವನಿಗೆ, ಗುರುವಾರ ಗುರು ಗ್ರಹಕ್ಕೆ, ಮತ್ತು ಶುಕ್ರವಾರ ದೇವಿಗೆ ಸಮರ್ಪಿತವಾಗಿದೆ. ಶನಿವಾರದಂದು ವಿಷ್ಣು ಭಕ್ತರು ಉಪವಾಸ ಮತ್ತು ಪೂಜೆಗಳನ್ನು ಆಚರಿಸುತ್ತಾರೆ. ಈ ದಿನ ಉಪವಾಸ ಮತ್ತು ಪೂಜೆಗಳನ್ನು ಮಾಡುವ ಮಹಿಳೆಯರಿಗೆ ದೈಹಿಕವಾಗಿ ಸ್ವಲ್ಪ ತೊಂದರೆಯಾಗಬಹುದು ಎಂಬ ಭಾವನೆ ಇದೆ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಕುಟುಂಬಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. “ಗೃಹಿಣಿ ಗೃಹ ಮುಚ್ಯತೇ” ಎಂಬ ಮಾತು ಇದನ್ನೇ ಸೂಚಿಸುತ್ತದೆ. ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋದರೆ ಅತ್ತೆಯ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು ಎಂದು ಪೂರ್ವಿಕರ ಅನುಭವಗಳು ಹೇಳುತ್ತವೆ. ಅಲ್ಲದೆ, ಅತ್ತೆ-ಮಾವ ಅಥವಾ ಕುಟುಂಬದ ಇತರ ಸದಸ್ಯರೊಂದಿಗೆ ಮಾನಸಿಕವಾಗಿ ಕೆಲವು ಉದ್ವಿಗ್ನತೆಗಳು ಉಂಟಾಗಬಹುದು. ಶನಿವಾರದಂದು ತವರು ಮನೆಗೆ ಭೇಟಿ ನೀಡಿದಾಗ, ಕೆಲವೊಮ್ಮೆ ಕುಟುಂಬದ ಸದಸ್ಯರಿಂದ ಮಾನಸಿಕವಾಗಿ ಕೆಲವು ಮಾತುಗಳನ್ನು ಕೇಳಬೇಕಾಗಬಹುದು.

ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದಾಗ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಭೇಟಿ ನೀಡುವುದು ಅಷ್ಟು ಸೂಕ್ತವಲ್ಲ ಎಂಬುದು ನಂಬಿಕೆಯಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ.

ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವ

ಅರ್ಜಿಯಲ್ಲಿ, 2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು ಎಂದು ಅವರು ತಿಳಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಇನ್ನು ಆನ್‌ಲೈನ್ ಸುದ್ದಿ ತಾಣಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಸುದ್ದಿಗಳನ್ನು ಹಂಚಲಾಗಿದೆ ಎಂದು ಹೇಳಿರುವ ಅವರು, ಶ್ರೀಲಂಕಾ ಕೋರ್ಟ್ ಆಫ್ ಅಪೀಲ್‌ನ ಮುಖ್ಯಸ್ಥರಾಗಿದ್ದಾಗ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಭಾರತದ ಸಂವಿಧಾನವು ಘನತೆಯಿಂದ ಬದುಕುವ ಹಕ್ಕನ್ನು ವಿದೇಶೀಯರಿಗೂ ವಿಸ್ತರಿಸಿರುವುದರಿಂದ ಈ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು

ನೋಟಿಸ್ ನೀಡಿದರು ಮಾಹಿತಿ ತೆಗೆದು ಹಾಕದ ಗೂಗಲ್!

ಗೂಗಲ್‌ಗೆ ಈ ಕುರಿತು ನೋಟಿಸ್ ನೀಡಿದ್ದರೂ ಸಹ ಸಂಬಂಧಿತ ಸುದ್ದಿಗಳನ್ನು ಆನ್‌ಲೈನ್‌ನಿಂದ ತೆಗೆದುಹಾಕಲಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ನ್ಯಾಯಾಲಯವನ್ನು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ.

ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಐಪಿಎಲ್​​ನಲ್ಲಿ ಅವರು ಆಡುತ್ತಿದ್ದಾರೆ. ಅರ್ಜುನ್ ಅವರ ವೈಯಕ್ತಿಕ ಸಂಪತ್ತು ಸುಮಾರು 10-15 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ತಂದೆ ಸಚಿನ್ ಅವರ 100 ಕೋಟಿ ರೂ. ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಸಾನಿಯಾ ಚಾಂದೋಕ್ ಯಾರು?

ಅರ್ಜುನ್ ಅವರ ಪತ್ನಿ ಸಾನಿಯಾ ಚಾಂದೋಕ್ ಸಾಮಾನ್ಯ ಹೆಸರಲ್ಲ. ಸಾನಿಯಾ ಭಾರತದ ಖ್ಯಾತ ಕೈಗಾರಿಕೋದ್ಯಮಿ ಮತ್ತು ಗ್ರಾವಿಸ್ ಗ್ರೂಪ್‌ನ ಅಧ್ಯಕ್ಷ ರವಿ ಘಾಯ್ ಅವರ ಮೊಮ್ಮಗಳು. ಸಾನಿಯಾ ವಿದೇಶದಲ್ಲಿಅಧ್ಯಯನ ಮಾಡಿದ್ದಾರೆ ಕುಟುಂಬದ ವ್ಯವಹಾರಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಇದ್ದಾರೆ. ಸಾನಿಯಾ ಅವರ ಕುಟುಂಬವು ಭಾರತದಲ್ಲಿ ಜನಪ್ರಿಯ ಐಸ್ ಕ್ರೀಮ್ ಬ್ರ್ಯಾಂಡ್ ಬಾಸ್ಕಿನ್-ರಾಬಿನ್ಸ್ ಅನ್ನು ಪ್ರಾರಂಭಿಸಿತು.

ಸಾನಿಯಾ ಬಹಳ ಪ್ರಭಾವಿ ವ್ಯಾಪಾರ ಕುಟುಂಬದಿಂದ ಬಂದವರು. ಅವರ ನಿಖರವಾದ ವೈಯಕ್ತಿಕ ಸಂಪತ್ತು ಸಾರ್ವಜನಿಕವಾಗಿ ತಿಳಿದಿಲ್ಲವಾದರೂ, ಅವರ ಕುಟುಂಬದ ವ್ಯವಹಾರವು ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಇದರರ್ಥ ಸಾನಿಯಾ, ಅರ್ಜುನ್‌ಗಿಂತ ಹೆಚ್ಚಿನ ಸಂಪತ್ತನ್ನು ಹೊಂದಿದ್ದಾರೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಕುಟುಂಬವು ಯಾವಾಗಲೂ ಐಷಾರಾಮಿ ಕಾರುಗಳನ್ನು ಇಷ್ಟಪಡುತ್ತಾರೆ. ಅರ್ಜುನ್ ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿ BMW i8, BMW X5 ಮತ್ತು ನಿಸ್ಸಾನ್ GT-R ನಂತಹ ಸೂಪರ್ ಕಾರುಗಳು ಸೇರಿವೆ. ಅರ್ಜುನ್ ಮತ್ತು ಸಾನಿಯಾ ಅವರ ಸಂಬಂಧ ಬಹಳ ಕಾಲ ರಹಸ್ಯವಾಗಿಯೇ ಇತ್ತು. ಅವರ ಆಪ್ತ ಮೂಲಗಳ ಪ್ರಕಾರ, ಇಬ್ಬರೂ ಮೊದಲು ಮುಂಬೈನಲ್ಲಿ ಭೇಟಿಯಾದರು. ಕ್ರಮೇಣ, ಅವರ ಸ್ನೇಹ ಸಂಬಂಧಕ್ಕೆ ತಿರುಗಿತು ಮತ್ತು ಎರಡೂ ಕುಟುಂಬಗಳು ಮದುವೆಗೆ ಅನುಮೋದನೆ ನೀಡಿದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಸ್ರೇಲ್-ಇರಾನ್ ಯುದ್ಧ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತಕ್ಕಿಲ್ಲ ಇಂಧನ ಆತಂಕ: ಈ ಅಂಕಿಅಂಶಗಳೇ ಸಾಕ್ಷಿ

ನವದೆಹಲಿ, ಮಾರ್ಚ್ 7: ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿದ್ದರೂ ಭಾರತದಲ್ಲಿ ಇಂಧನ ವಿಚಾರದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಭಾರತ ಸದ್ಯ ಇಂಧನ ವಿಚಾರದಲ್ಲಿ ಭದ್ರವಾಗಿದೆ ಎಂಬುದು ಕೇಂದ್ರ ಸರ್ಕಾರದ ಅಧೀನದ ‘ಪೆಟ್ರೋಲಿಯಂ ಪ್ಲಾನಿಂಗ್ ಆ್ಯಂಡ್ ಅನಾಲಿಸಿಸ್ ಸೆಲ್ (PPAC)’ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಸಮುದ್ರ ಮಾರ್ಗಗಳ ಅಡಚಣೆಗಳು ಮತ್ತು ಜಾಗತಿಕ ಬೆಲೆ ಏರಿಳಿತಗಳ ನಡುವೆಯೂ ಭಾರತದಲ್ಲಿ ಇಂಧನ ಪೂರೈಕೆ ಸ್ಥಿರವಾಗಿರುವುದಕ್ಕೆ ಕಳೆದ ದಶಕದಲ್ಲಿ ರೂಪಿಸಿದ ದೀರ್ಘಕಾಲಿಕ ನೀತಿಗಳೇ ಪ್ರಮುಖ ಕಾರಣವೆಂದು ಪಿಪಿಎಸಿ ಅಭಿಪ್ರಾಯಪಟ್ಟಿದೆ.

ದೇಶದಲ್ಲೆಷ್ಟಿದೆ ಕಚ್ಚಾ ತೈಲ, ಪೆಟ್ರೋಲಿಯಂ ಸಂಗ್ರಹ?

ದೇಶದಲ್ಲಿ ಕಚ್ಚಾ ತೈಲ ಮತ್ತು ಸಂಸ್ಕರಿತ ಪೆಟ್ರೋಲಿಯಂ ಉತ್ಪನ್ನಗಳ ಒಟ್ಟು ಸಂಗ್ರಹವು 250 ಮಿಲಿಯನ್ ಬ್ಯಾರೆಲ್‌ಗಳಿಗಿಂತ ಹೆಚ್ಚು, ಅಂದರೆ ಸುಮಾರು 4,000 ಕೋಟಿ ಲೀಟರ್ ಆಗಿದೆ. ಇದು ಸುಮಾರು 7 ರಿಂದ 8 ವಾರಗಳವರೆಗೆ ದೇಶದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುವಷ್ಟು ಸಂಗ್ರಹವಾಗಿದೆ ಎಂದು ಪಿಪಿಎಸಿ ವರದಿ ತಿಳಿಸಿದೆ.

ಇದೇ ವೇಳೆ, ಭಾರತವು ವಿಶ್ವದಲ್ಲೇ ನಾಲ್ಕನೇ ಅತಿ ದೊಡ್ಡ ತೈಲ ಶುದ್ಧೀಕರಣ ಸಾಮರ್ಥ್ಯ ಹೊಂದಿರುವ ದೇಶವಾಗಿದ್ದು, ವರ್ಷಕ್ಕೆ 258 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ದೇಶೀಯ ಬಳಕೆ 210–230 ಮಿಲಿಯನ್ ಮೆಟ್ರಿಕ್ ಟನ್ ಇರುವುದರಿಂದ ಶುದ್ಧೀಕರಣ ಸಾಮರ್ಥ್ಯವು ದೇಶದ ಅವಶ್ಯಕತೆಯಿಗಿಂತಲೂ ಹೆಚ್ಚಾಗಿದೆ.

ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ

ಭಾರತ ತನ್ನ ಕಚ್ಚಾ ತೈಲ ಆಮದು ಮೂಲಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಬಹಳವಾಗಿ ವಿಸ್ತರಿಸಿದೆ. ಹಿಂದೆ ಸುಮಾರು 27 ದೇಶಗಳಿಂದ ತೈಲ ಖರೀದಿಸಲಾಗುತ್ತಿದ್ದರೆ, ಈಗ 40 ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದ ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ.

ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ ಕೇವಲ ಸುಮಾರು ಶೇ 40 ರಷ್ಟು ಹಾರ್ಮುಜ್ ಮಾರ್ಗದ ಮೂಲಕ ಬರುತ್ತದೆ. ಉಳಿದ ಶೇ 60 ಇತರ ಮಾರ್ಗಗಳಿಂದ ಬರುತ್ತಿರುವುದರಿಂದ ಯಾವುದೇ ಒಂದು ಮಾರ್ಗದಲ್ಲಿ ಅಡಚಣೆ ಉಂಟಾದರೂ ದೇಶದಲ್ಲಿ ಇಂಧನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯೂ ಭಾರತದಲ್ಲೇ ಕಡಿಮೆ

ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ಉದಾಹರಣೆಗೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಸುಮಾರು ಶೇ 55 ರಷ್ಟು ಏರಿಕೆಯಾಗಿದೆ. ಜರ್ಮನಿಯಲ್ಲಿ ಶೇ 21 ಹಾಗೂ ಫ್ರಾನ್ಸ್‌ನಲ್ಲಿ ಶೇ 19 ಏರಿಕೆಯಾಗಿದೆ. ಆದರೆ ಭಾರತದಲ್ಲಿ ಇದೇ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ 0.67 ಇಳಿಕೆಯಾಗಿದೆ ಮತ್ತು ಡೀಸೆಲ್ ಬೆಲೆ ಸುಮಾರು 1.15% ಮಾತ್ರ ಏರಿಕೆಯಾಗಿದೆ. ಇದು ಇಂಧನ ಬೆಲೆ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ಭಾರತದ ನೀತಿ ಪರಿಣಾಮಕಾರಿಯಾಗಿದೆ ಎಂಬುದನ್ನು ತೋರಿಸುತ್ತದೆ.

ಎಥೆನಾಲ್ ಮಿಶ್ರಣದಿಂದ ತೈಲ ಅವಲಂಬನೆ ಕಡಿಮೆ

ಭಾರತದಲ್ಲಿ ಶೇ 20 ಎಥೆನಾಲ್ ಮಿಶ್ರಣ ಕಾರ್ಯಕ್ರಮವು ವರ್ಷಕ್ಕೆ ಸುಮಾರು 6 ಮಿಲಿಯನ್ ಟನ್ ಕಚ್ಚಾ ತೈಲ ಬಳಕೆಯನ್ನು ಕಡಿಮೆ ಮಾಡುತ್ತಿದೆ. ಇದು ಆಮದು ಅವಲಂಬನೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ನೆರೆಯ ದೇಶಗಳಿಗಿಂತ ಕಡಿಮೆ ಎಲ್‌ಪಿಜಿ ಬೆಲೆ

ದೇಶದಲ್ಲಿ ಎಲ್‌ಪಿಜಿ ಬೆಲೆಗಳು ಸಹ ನೆರೆಯ ಹಲವಾರು ರಾಷ್ಟ್ರಗಳಿಗಿಂತ ಕಡಿಮೆ ಇವೆ. ಉದಾಹರಣೆಗೆ, ಭಾರತದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್ ಬೆಲೆ ಸುಮಾರು 553 ರೂ. ಆಗಿದ್ದರೆ, ಪಾಕಿಸ್ತಾನದಲ್ಲಿ 1,054 ರೂ, ಶ್ರೀಲಂಕಾದಲ್ಲಿ ₹1,239 ಮತ್ತು ನೇಪಾಳದಲ್ಲಿ 1,195 ರೂ. ಇದೆ ಎಂದು ಪಿಪಿಎಸಿ ವರದಿ ತಿಳಿಸಿದೆ.

ಇದನ್ನೂ ಓದಿ: ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

ಒಟ್ಟಾರೆ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತ ತನ್ನ ಇಂಧನ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದ್ದು, ದೀರ್ಘಕಾಲಿಕ ನೀತಿಗಳ ಪರಿಣಾಮವಾಗಿ ದೇಶದಲ್ಲಿ ಇಂಧನ ಪೂರೈಕೆ ಮತ್ತು ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂಬುದು ವರದಿಯಿಂದ ದೃಢಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಜತೆಗೂಡಿ ಟ್ರಂಪ್, ಅಮೆರಿಕ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿತ್ತಾ ಪಾಕ್? ನ್ಯೂಯಾರ್ಕ್ ಕೋರ್ಟ್ ಮಹತ್ವದ ಮಾಹಿತಿ ಬಯಲು

ಬ್ರೂಕ್ಲಿನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಅಮೆರಿಕದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ, ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ (47) ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಕಮಾಂಡರ್ ಖಾಸೆಮ್ ಸೊಲೈಮಾನಿಯ ಸಾವಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.

ಗುರಿಯಲ್ಲಿದ್ದ ಪ್ರಮುಖ ನಾಯಕರು:

ವಿಚಾರಣೆಯ ಸಂದರ್ಭದಲ್ಲಿ ಮರ್ಚೆಂಟ್, ಟೆಹ್ರಾನ್‌ನಲ್ಲಿರುವ ತನ್ನ ಕುಟುಂಬವನ್ನು ಇರಾನಿನ ಕ್ರಾಂತಿಕಾರಿ ಪಡೆಗಳಿಂದ ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಈ ಸಂಚಿನಲ್ಲಿ ಭಾಗಿಯಾಗಿದ್ದಾಗಿ ಹೇಳಿದ್ದಾನೆ. ಇದಲ್ಲದೇ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾನೆ. ತನಗೆ ನೇರವಾಗಿ ಯಾರನ್ನೂ ಕೊಲ್ಲುವ ಆದೇಶ ಇರಲಿಲ್ಲವಾದರೂ, ಇರಾನಿನ ಸಂಪರ್ಕಗಳು ಮೂವರು ಪ್ರಮುಖ ವ್ಯಕ್ತಿಗಳನ್ನು ಅಂದರೆ ಡೊನಾಲ್ಡ್ ಟ್ರಂಪ್, ಜೋ ಬಿಡೆನ್ ಮತ್ತು ನಿಕ್ಕಿ ಹ್ಯಾಲಿ ಹತ್ಯೆ ಮಾಡುವಂತೆ ಸೂಚಿಸಿದ್ದರು ಎಂದು ಆತ ತಿಳಿಸಿದ್ದಾನೆ. ಈ ಪಿತೂರಿಯು ಇರಾನ್ ಆಡಳಿತದ ತಂತ್ರಗಾರಿಕೆಯ ಭಾಗವಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಬಣ್ಣಿಸಿದ್ದಾರೆ.

ಆಸಿಫ್ ರಾಜಾ ಮರ್ಚೆಂಟ್ ಯಾರು?

ಆಸಿಫ್ ರಾಜಾ ಮರ್ಚೆಂಟ್ ಪಾಕಿಸ್ತಾನದ ಉದ್ಯಮಿಯಾಗಿದ್ದು, ಇರಾನ್‌ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ಅಮೆರಿಕದ ತನಿಖಾ ಸಂಸ್ಥೆಗಳು ಮತ್ತು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. 2024ರ ಜುಲೈ 12ರಂದು ಅಮೆರಿಕದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಈತನನ್ನು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದರು. ನಂತರ ಬ್ರೂಕ್ಲಿನ್‌ನ ಫೆಡರಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಅಂತರರಾಷ್ಟ್ರೀಯ ಭಯೋತ್ಪಾದನೆ ಮತ್ತು ಹಣಕ್ಕಾಗಿ ಕೊಲೆ ಸಂಚು ರೂಪಿಸಿದ ಆರೋಪಗಳ ಮೇಲೆ ಈತ ದೋಷಿ ಎಂದು ಸಾಬೀತಾಗಿದೆ.

ಇದನ್ನೂ ಓದಿ: ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!

ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವೆ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಇತ್ತೀಚೆಗಷ್ಟೇ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿರುವ ಬೆನ್ನಲ್ಲೇ ಈ ತೀರ್ಪು ಹೊರಬಿದ್ದಿರುವುದು ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಹೊತ್ತಿನಲ್ಲೇ ಈ ಪ್ರಕರಣದಲ್ಲಿ ತೀರ್ಪು ಬಂದಿರುವುದು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version