IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್‌ಗೆ ರೆಡಿ ಎಂದ ಟೀಂ ಇಂಡಿಯಾ – Kannada News | India Dominates New Zealand 4 1 in T20 Series Ahead of 2026 World Cup
2026 ರ ಟಿ20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಆಡಿದ ಭಾರತ ತಂಡ ಐದು ಪಂದ್ಯಗಳ ಟಿ20ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಆದಾಗ್ಯೂ, ಕಿವೀಸ್ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ದಿಟ್ಟ ಉತ್ತರ ನೀಡಿತ್ತು. ಇದೀಗ ಐದನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಸರಣಿ ಗೆಲುವಿನೊಂದಿಗೆ ಟಿ20 ವಿಶ್ವಕಪ್‌ಗೆ ಕಾಲಿಡುತ್ತಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ…