Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
2026ನೇ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ…