ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur
ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…