ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್  (Karnataka Budget) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ. ಇದುವರೆಗೆ ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆಯ ಕುರಿತು ಸ್ಪಷ್ಟ ಸೌಲಭ್ಯ ಇರಲಿಲ್ಲ ಎಂಬ ಕಾರಣದಿಂದ ಹಲವು ಮಹಿಳಾ ಉಪನ್ಯಾಸಕರು ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಸರ್ಕಾರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದರ ಮೂಲಕ ಮಹಿಳಾ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ಸಹಕಾರವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

ಅಲ್ಲದೇ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರಿಸಲಾಗುವುದಾಗಿ ಅವರು ತಿಳಿಸಿದ್ದಾರೆ. ಅಜೀಂ ಪ್ರೇಮ್‌ಜಿ ಫೌಂಡೇಷನ್‌ ವತಿಯಿಂದ 2025–26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬಾರದ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ‘ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ’ ಅಡಿಯಲ್ಲಿ ಆರ್ಥಿಕ ಸಹಾಯ ಒದಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!

ನವದೆಹಲಿ, ಮಾರ್ಚ್ 5: ಈ ವಿಡಿಯೋ ಎಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಎಂಬುದು ತಿಳಿದಿಲ್ಲ. ಆದರೆ, ಈ ವಿಡಿಯೋ (Video Viral) ನೋಡಿದರೆ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ!

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕರ್ನಾಟಕ ಬಜೆಟ್ 2026: ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಕನ್ನಡ ಚಿತ್ರರಂಗವೂ ಸಹ ಈ ಬಾರಿಯ ಬಜೆಟ್​​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ…

ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೊಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು ಎಂದು ಸಿಎಂ ಅವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲಿ ಒಂದೇ ವೇದಿಕೆಯಲ್ಲಿ ನೀಡುವ ಸಲುವಾಗಿ ‘ಸಿನಿ ಮಿತ್ರ’ ಎಂಬ ಆನ್‌ಲೈನ್ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ. ಚಿತ್ರೀಕರಣಕ್ಕೆ ಅನುಮತಿ ಪಡೆಯುವುದು ಇದರಿಂದ ಸುಲಭವಾಗುವ ಜೊತೆಗೆ ನಿಯಮಗಳ ಪಾಲನೆ ಕಡ್ಡಾಯ ಆಗಲಿದೆ.

ಇದನ್ನೂ ಓದಿ:‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26 ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ನಮ್ಮ ಸರ್ಕಾರದಲ್ಲಿ ಸಹಾಯಧನವನ್ನು ನೀಡಲಾಗಿರುತ್ತದೆ. ಪ್ರಸಕ್ತ ಸಾಲಿಗೆ ಉಳಿದ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸಹಾಯಧನವನ್ನು ನೀಡಲು 20 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಸಾಲಿನಲ್ಲಿ 500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್‌ಗಳನ್ನು ಒಳಗೊಂಡ PPP (ಪಬ್ಲಿಕ್ ಪ್ರೈವೇಟ್ ಪಾರ್ಟನರ್​​ಶಿಪ್) ಮಾದರಿಯಲ್ಲಿ ಅಭಿವೃದ್ಧಿಗೆ ಅನುಮೋದನೆ ನೀಡಿ ವ್ಯವಹಾರ ನಡೆಸಬೇಕೆಂದು ತೀರ್ಮಾನಿಸಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ಮತ್ತು ಲಿಜೆಂಡರಿ ನಿರ್ದೇಶಕ ಆಗಿರುವ ಪುಟ್ಟಣ್ಣ ಕಣಗಾಲ್ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ.

ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು ಒದಗಿಸಲು ಅನುದಾನ ಮೀಸಲಿಡಲಾಗಿದೆ. 12 ಪೊಲೀಸ್​​​ ಠಾಣೆಗಳಿಗೆ ಅಸ್ತು ಎಂದು ಹೇಳಿದ್ದಾರೆ. ಹೊಸ ಠಾಣೆಗಳ ಕಾರ್ಯಾಚರಣೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು. ದೊಡ್ಡಬಳ್ಳಾಪುರ, ಹಿರಿಯೂರು ಮತ್ತು ಗುಂಡ್ಲುಪೇಟೆಯಂತಹ ಬೆಳೆಯುತ್ತಿರುವ ನಗರಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಠಾಣೆಗಳಿಗೆ ಒತ್ತು ನೀಡಲಾಗಿದೆ.

ಜಿಲ್ಲೆ ಪೊಲೀಸ್ ಠಾಣೆಯ ಹೆಸರು ಮಾದರಿ
ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರಿ ಠಾಣೆ ಸಂಚಾರ (Traffic)
ಬೆಳಗಾವಿ ಯರಗಟ್ಟಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಯಾದಗಿರಿ ಕಕ್ಕೇರಾ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಚಿತ್ರದುರ್ಗ ಹಿರಿಯೂರು ಸಂಚಾರ ಪೊಲೀಸ್ ಠಾಣೆ ಸಂಚಾರ (Traffic)
ದಾವಣಗೆರೆ ಆನಗೋಡು ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಹಾವೇರಿ ತಿಳುವಳ್ಳಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಮೈಸೂರು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ವಿಜಯಪುರ ಮುದ್ದೇಬಿಹಾಳ ಗ್ರಾಮಾಂತರ ಠಾಣೆ ಕಾನೂನು & ಸುವ್ಯವಸ್ಥೆ
ಕೋಲಾರ ನರಸಾಪುರ ಕೈಗಾರಿಕಾ ವಲಯ ಠಾಣೆ ಕೈಗಾರಿಕಾ ಸುರಕ್ಷತೆ
ಚಾಮರಾಜನಗರ ಗುಂಡ್ಲುಪೇಟೆ ಸಂಚಾರ ಠಾಣೆ ಸಂಚಾರ (Traffic)

ಇನ್ನು ಇದರ ಜತೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಒಟ್ಟು 8,000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಈ ವರ್ಷ ಭರ್ತಿ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ‘ಖಾಯಂ ಪೊಲೀಸ್ ಮತ್ತು ಪೊಲೀಸ್ ಪೂರಕ ಸೇವೆಗಳ ನೇಮಕಾತಿ ಮಂಡಳಿ’ಯನ್ನು ಸ್ಥಾಪಿಸಲಾಗುವುದು. ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಕರ್ಯ ಒದಗಿಸಲು 250 ಕೋಟಿ ರೂ. ವೆಚ್ಚದಲ್ಲಿ ಹೊಸ ವಸತಿಗೃಹಗಳ ನಿರ್ಮಾಣ. ಪೊಲೀಸ್ ಇಲಾಖೆಯ ಸಂವಹನ ಮತ್ತು ಫೋರೆನ್ಸಿಕ್ ಸಾಮರ್ಥ್ಯ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳು ಮತ್ತು ಆಧುನಿಕ ಉಪಕರಣಗಳ ಖರೀದಿ ಮಾಡಲಾಗುವುದು. ಬೆಳಗಾವಿ ಸುವರ್ಣ ಸೌಧದ ಅಧಿವೇಶನ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ 1,000 ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ 20 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಖಾಯಂ ಬ್ಯಾರಕ್‌ಗಳ ನಿರ್ಮಾಣ ಕೂಡ ಮಾಡಲಾಗುವುದು.

ಇದನ್ನೂ ಓದಿ: ಬಜೆಟ್​​​ನಲ್ಲಿ ಅಲ್ಪಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ: ಮುಸ್ಲಿಂ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಅಗ್ನಿಶಾಮಕ ದಳದ ಸಿಬ್ಬಂದಿಗಳ ಆಹಾರ ಭತ್ಯೆಯನ್ನು 150 ರೂ.ನಿಂದ 300 ರೂ.ಗೆ ದ್ವಿಗುಣಗೊಳಿಸಲಾಗಿದೆ. ಕಾರಾಗೃಹಗಳಲ್ಲಿ ಮೊಬೈಲ್ ಬಳಕೆ ಮತ್ತು ಮಾದಕ ದ್ರವ್ಯ ತಡೆಗಟ್ಟಲು 20 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ತಪಾಸಣಾ ವ್ಯವಸ್ಥೆ ಮತ್ತು ಬಾಡಿ ವೋರ್ನ್ ಕ್ಯಾಮೆರಾಗಳ ಅಳವಡಿಕೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೊಸ ಸಾಫ್ಟ್‌ವೇರ್ ಮತ್ತು ತರಬೇತಿಗಾಗಿ ವಿಶೇಷ ಅನುದಾನ ಕೂಡ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ

ಬೆಂಗಳೂರು, ಮಾರ್ಚ್ 6: ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಚೇರಿಗಳಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇ ಸ್ಟಾಂಪಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು. 50 ಲಕ್ಷಕ್ಕೂ ಹೆಚ್ಚು ಇರುವ ಟಿಪ್ಪಣಿಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್‌ಗಳನ್ನು ಜಿಐಎಸ್ ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ, ನೊಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು 65 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಇದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಕಾಗದರಹಿತ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಉಪನೊಂದಣಾಧಿಕಾರಿಗಳ ಕಚೇರಿಗಳಿಗೆ ಜನರ ಓಡಾಟವನ್ನು ಕಡಿಮೆ ಮಾಡಲು ‘ನೊಂದಣಿ ಕಾಯ್ದೆ 2025’ಕ್ಕೆ ತಿದ್ದುಪಡಿ ತರಲಾಗಿದ್ದು, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ರಿಮೋಟ್ ನೊಂದಣಿ ಅನುಮತಿಸಲಾಗಿದೆ. ರೇರಾ ಅನುಮೋದಿತ ಯೋಜನೆಗಳ ಖಾಸಗಿ ಸಂಸ್ಥೆಗಳ ರಿಮೋಟ್ ನೊಂದಣಿಗೆ ಕಾಯ್ದೆ ತಿದ್ದುಪಡಿ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿದೆ. ಡಿಜಿಟಲ್ ಇ-ಸ್ಟ್ಯಾಂಪಿಂಗ್ ಮತ್ತು ಸಂಪೂರ್ಣ ಕಾಗದರಹಿತ ನೊಂದಣಿಗಾಗಿ ನವೀನ ಪ್ಲಾಟ್‌ಫಾರ್ಮ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ನೊಂದಣಿ ಇಲಾಖೆಯಲ್ಲಿ 2003ಕ್ಕೂ ಹಿಂದಿನ ಲೆಗಸಿ ದಾಖಲೆಗಳನ್ನು ಸಂರಕ್ಷಿಸಲು 207 ಉಪನೊಂದಣಿ ಕಚೇರಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ನಾಗರಿಕರಿಗೆ ಉತ್ತಮ ಅನುಭವ ನೀಡಲು ಪ್ರತಿ ಜಿಲ್ಲೆಯಲ್ಲಿ ಒಂದು ಕಚೇರಿಯನ್ನು ನೊಂದಣಿ ಖಾತರಿ ಕೇಂದ್ರವನ್ನಾಗಿ ನವೀಕರಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಕಾಡುಕೋಣಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ

ನಮ್ಮ ಸುತ್ತಮುತ್ತಲಿನಲ್ಲಿರುವ ಕೆಲವರಿಗೆ ಪ್ರಾಣಿ ಪಕ್ಷಿಗಳೆಂದರೆ (animal and birds) ಬಲು ಇಷ್ಟ. ಹೀಗಾಗಿ ಅವುಗಳಿಗೆ ಆಹಾರ ನೀಡುವುದು. ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ಬಾಯಾರಿಕೆಯನ್ನು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮಹಿಳೆಯದ್ದು (woman) ಅಷ್ಟೇ ದೊಡ್ಡ ಮನಸ್ಸು. ಮನೆ ಹತ್ತಿರ ಬಂದ ಕಾಡು ಕೋಣವೊಂದು ಬಾಯಾರಿಕೆಯಿಂದ ಬಳಲಿದೆ. ಹೀಗಾಗಿ  ಈ ಮೂಕ ಪ್ರಾಣಿಯ ನೀರಿನ ದಾಹವನ್ನು ಅರಿತುಕೊಂಡ ಮಹಿಳೆ, ನೀರು ಕೊಟ್ಟು ಅದರ ಬಾಯಾರಿಕೆಯನ್ನು ನೀಗಿಸಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಹಿಳೆಯ ಮಾನವೀಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Deepak Gavada ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮನೆ ಹತ್ತಿರ ಬಂದ ಬಾಯಾರಿದ ಕಾಡುಕೋಣಕ್ಕೆ ನೀರು ಕೊಟ್ಟಿದ್ದಾಳೆ. ಪಾತ್ರೆಯಲ್ಲಿಟ್ಟ ನೀರನ್ನು ಕುಡಿದು ಕಾಡು ಕೋಣವು ಬಾಯಾರಿಕೆ ನೀಗಿಸಿಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಅಮ್ಮ ನಿನ್ನ ಹೊಟ್ಟೆ ತಣ್ಣಗೆ ಇರಲಿ ಎಂದಿದ್ದಾರೆ. ಮತ್ತೊಬ್ಬರು, ಒಳ್ಳೆಯ ಕೆಲಸ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನಿಜಕ್ಕೂ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ.

ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಂತಹ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕಿಯೋನಿಕ್ಸ್ ಮೂಲಕ ಇನ್‌ಕ್ಯುಬೇಷನ್ ಸೌಲಭ್ಯಗಳು ಮತ್ತು ಕ್ಲೀನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ESDM ಮತ್ತು ಸೆಮಿಕಂಡಕ್ಟರ್ ವಲಯಕ್ಕೆ ಬೃಹತ್ ಕಂಪನಿಗಳಿಂದ 45,000 ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳಲ್ಲಿ ಐಐಎಸ್ಸಿ, ಇಸ್ರೋ ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಕ್ಯಾಂಪಸ್, ಮತ್ತು ರಾಯಚೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲಾಗುವುದು. 2029 ರ ವೇಳೆಗೆ 500 ಹೊಸ ಜಿಸಿಸಿಗಳನ್ನು ಸ್ಥಾಪಿಸಿ 3.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಮುಖ ಕಾರಣ ಸಂಜು ಸ್ಯಾಮ್ಸನ್ ಆರ್ಭಟ, ಜಸ್​ಪ್ರೀತ್ ಬುಮ್ರಾ ಅವರ ನಿಖರ ದಾಳಿ ಮತ್ತು ಅಕ್ಷರ್ ಪಟೇಲ್ ಅವರ ಮಿಂಚಿನ ಫೀಲ್ಡಿಂಗ್. ಅದರಲ್ಲೂ ಅಕ್ಷರ್ ಪಟೇಲ್ ಹಿಡಿದ ಎರಡು ಕ್ಯಾಚ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ವಿಕೆಟ್ ನಿರ್ಣಾಯಕವಾಗಿತ್ತು. 5ನೇ ಓವರ್​ನ ಮೊದಲ ಎಸೆತವನ್ನು ಬುಮ್ರಾ ನಿಧಾನಗತಿಯಲ್ಲಿ ಎಸೆದರು, ಅತ್ತ ಚೆಂಡಿನ ವೇಗವನ್ನು ಗುರುತಿಸುವಲ್ಲಿ ಎಡವಿ ಬ್ರೂಕ್ ಬ್ಯಾಟ್ ನೀಡಿದ್ದರು.

ಇದಾಗ್ಯೂ ಚೆಂಡು ಬೌಂಡರಿಯತ್ತ ಚಿಮ್ಮಿತ್ತು. ಆದರೆ ವೇಳೆ ಹಿಮ್ಮುಖವಾಗಿ ಓಡಿದ ಅಕ್ಷರ್ ಪಟೇಲ್ ಅದ್ಭುತ ಡೈವಿಂಗ್ ಮೂಲಕ ಚೆಂಡನ್ನು ಹಿಡಿದರು. ಈ ಮೂಲಕ ಭಾರತ ತಂಡಕ್ಕೆ 2ನೇ ವಿಕೆಟ್ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇದಾದ ಬಳಿಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ವಿಲ್ ಜ್ಯಾಕ್ಸ್ ಕ್ಯಾಚ್ ಹಿಡಿಯುವಲ್ಲಿಯೂ ಅಕ್ಷರ್ ಪಟೇಲ್ ಯಶಸ್ವಿಯಾದರು. ಈ ಬಾರಿ ಹಿಡಿದದ್ದು ಅತ್ಯದ್ಭುತ ಕ್ಯಾಚ್ ಎಂಬುದು ವಿಶೇಷ. ಅರ್ಷದೀಪ್ ಎಸೆತದಲ್ಲಿ ಜ್ಯಾಕ್ಸ್ ಆಫ್ ಸೈಡ್​ನತ್ತ ಭರ್ಜರಿಯಾಗಿ ಬಾರಿಸಿದ್ದರು.

ಚೆಂಡು ಇನ್ನೇನು ಬೌಂಡರಿ ಗೆರೆ ದಾಟಲಿದೆ ಅನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಓಡಿ ಬಂದ ಅಕ್ಷರ್ ಪಟೇಲ್ ಅತ್ಯದ್ಭುತವಾಗಿ ಚೆಂಡನ್ನು ಹಿಡಿದರು. ಆದರೆ ನಿಯಂತ್ರಣ ತಪ್ಪಿ ಬೌಂಡರಿ ಗೆರೆ ದಾಟುವ ಮುನ್ನ ಚೆಂಡನ್ನು ಶಿವಂ ದುಬೆ ಕೈಗಿತ್ತರು. ಈ ಮೂಲಕ ನಿರ್ಣಾಯಕ ಹಂತದಲ್ಲಿ ಟೀಮ್ ಇಂಡಿಯಾ ಮಹತ್ವದ ಯಶಸ್ಸು ತಂದುಕೊಡುವಲ್ಲಿ ಅಕ್ಷರ್ ಪಟೇಲ್ ಪ್ರಮುಖ ಪಾತ್ರವಹಿಸಿದರು. ಇದೀಗ ಈ ಎರಡು ಕ್ಯಾಚ್​ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್​ಗಳಿಸಿದರೆ, ಇಂಗ್ಲೆಂಡ್ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳ ಜಯದೊಂದಿಗೆ ಫೈನಲ್​ ಫೈಟ್​ಗೆ ಅರ್ಹತೆ ಪಡೆದುಕೊಂಡಿದೆ.

Source link

ಬಜೆಟ್​​​ನಲ್ಲಿ ಅಲ್ಪಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ: ಮುಸ್ಲಿಂ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಬೆಂಗಳೂರು, ಮಾ.6: ಇಂದಿನ (ಮಾ.6) ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ. ಸೇಲಂನ ಬೆನೆಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ 5 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು. ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಮತ್ತು ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜನ್ನು ಪ್ರಾರಂಭಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಬೇಡಿಕೆ ಇರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಬೀದರ್‌ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು. ವಸತಿ ಯೋಜನೆಗಳಡಿಯಲ್ಲಿ 4,99,454 ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹಿಂದಿನ ಸರ್ಕಾರ ಮಂಜೂರು ಮಾಡಿರುವ 4,90,000 ಮನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಿಎಲ್‌ಸಿ ಆಧಾರಿತ 1 ಲಕ್ಷ ಮನೆಗಳ ಹೊಸ ಗುರಿ ನಿಗದಿಪಡಿಸಲಾಗಿದ್ದು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನವನ್ನು 1,20,000 ರೂ. ರಿಂದ 2 ಲಕ್ಷಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version