ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ಸಿದ್ದರಾಮಯ್ಯ: ಬಜೆಟ್‌ನಲ್ಲಿ ಮಹತ್ವದ ನಿರ್ಧಾರ – Kannada News | Karnataka Budget: Siddaramaiah Revamps Liquor Tax for Rs45,000 Cr Revenue Goal
ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) ತಮ್ಮ 17ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರ ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ (Revenue) ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ (Ex-factory) ದರಪಟ್ಟಿಯ ಆಧಾರದ…