Karnataka Budget 2026: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !
ಬೆಂಗಳೂರು, ಮಾರ್ಚ್ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ. ಮರುನಾಮಕರಣದ ಜೊತೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಅದರಂತೆ, ಕಾರವಾರ ಮತ್ತು…