ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment
ಹುಬ್ಬಳ್ಳಿ, ಮಾರ್ಚ್ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…