ಕಾಂಗ್ರೆಸ್ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು
ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು….