ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri
ಹಾವೇರಿ, ಮಾರ್ಚ್ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಟ್ಯಾಂಕರ್ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ…