ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ಸಂದರ್ಭದ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನವದೆಹಲಿ, ಮಾರ್ಚ್ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎದುರಾದ ತುರ್ತು ಪರಿಸ್ಥಿತಿ ಮತ್ತೆ ಸೃಷ್ಟಿಯಾಗುತ್ತದೆಯಾ? ಇಂಥದ್ದೊಂದು ಪ್ರಶ್ನೆಗೆ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಮಾಡಿರುವ ಶಿಫಾರಸುಗಳು ಕಾರಣವಾಗಿದೆ. ಸದ್ಯ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ಇದನ್ನು ನಿರ್ವಹಿಸಲು ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಗೊಳಿಸುವಂತೆ ಐಇಎ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್‌ಡೌನ್ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂಬ ಕಳವಳಗಳ ನಡುವೆ ಈ ಕ್ರಮಗಳನ್ನು ಸೂಚಿಸಲಾಗಿದೆ. ಪೆಟ್ರೋಲ್ ಉಳಿಸುವುದಕ್ಕಾಗಿ…