ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್ ಟೋಪಿ: ನಾಲ್ವರ ವಿರುದ್ಧ ದೂರು ದಾಖಲು – Kannada News | Bengaluru MBBS Seat Scam: 25 Lakh Fraud, FIR Filed Against Four Persons
ಬೆಂಗಳೂರು, ಮಾರ್ಚ್ 04: ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಆಯೇಷಾ ಖಥುಮ್ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS…