DRDO SSPL Recruitment 2026: ಐಟಿಐ, ಡಿಪ್ಲೊಮಾ, ಪದವೀಧರರಿಗೆ ಡಿಆರ್‌ಡಿಒ ಸಂಸ್ಥೆಯಲ್ಲಿ ಉದ್ಯೋಗಾವಕಾಶ – Kannada News | DRDO SSPL Recruitment 2026: Apply Offline for Apprentice Posts; Check Eligibility and Details

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲ್ಯಾಬೋರೇಟರಿ (SSPL) ಐಟಿಐ, ಡಿಪ್ಲೊಮಾ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಚಾಲನೆ ನೀಡಿದೆ. ಈ ನೇಮಕಾತಿಯು ಯುವಜನರಿಗೆ 12 ತಿಂಗಳ ಅವಧಿಯ ಉದ್ಯೋಗ ಆಧಾರಿತ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಒದಗಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರತಿ ತಿಂಗಳು ಸ್ಟೈಫಂಡ್ ದೊರೆಯಲಿದೆ.

41ಕ್ಕೂ ಹೆಚ್ಚು ಹುದ್ದೆಗಳು; ಪ್ರಮುಖ ಟ್ರೇಡ್‌ಗಳ ವಿವರ ಇಲ್ಲಿದೆ:

ಈ ನೇಮಕಾತಿ ಡ್ರೈವ್‌ನಲ್ಲಿ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಒಟ್ಟು 41 ಸೀಟುಗಳನ್ನು ಕಾಯ್ದಿರಿಸಲಾಗಿದೆ. ಇನ್ನು ಐಟಿಐ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಸೀಟುಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಭರ್ತಿ ಮಾಡಲಾಗುತ್ತದೆ. ಐಟಿಐ ಅಭ್ಯರ್ಥಿಗಳು 10 ನೇ ತರಗತಿಯ ಜೊತೆಗೆ ಫಿಟ್ಟರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಕಂಪ್ಯೂಟರ್ ಆಪರೇಟರ್ (COPA), ಮೆಷಿನಿಸ್ಟ್ ಅಥವಾ ಕಾರ್ಪೆಂಟರ್ ಟ್ರೇಡ್‌ನಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಇನ್ನು ಡಿಪ್ಲೊಮಾ ಮತ್ತು ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂಬಂಧಿತ ವಿಷಯದಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು.

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಶೈಕ್ಷಣಿಕ ವರ್ಷ ಮತ್ತು ಪೋರ್ಟಲ್ ನೋಂದಣಿ ನಿಯಮಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2022, 2023, 2024, 2025, ಅಥವಾ 2026 ರಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವುದು ಕಡ್ಡಾಯ. 2022 ಕ್ಕಿಂತ ಮೊದಲು ತೇರ್ಗಡೆಯಾದವರು ಈ ಹುದ್ದೆಗಳಿಗೆ ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸುವ ಮುನ್ನ ಡಿಪ್ಲೊಮಾ ಮತ್ತು ಗ್ರಾಜುಯೇಟ್ ಅಭ್ಯರ್ಥಿಗಳು NATS ಪೋರ್ಟಲ್ನಲ್ಲಿ ಹಾಗೂ ಐಟಿಐ ಅಭ್ಯರ್ಥಿಗಳು Apprenticeship India ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು. ನಿಯಮಾವಳಿಗಳ ಪ್ರಕಾರ SC, ST, OBC, EWS ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಾತಿ ಸೌಲಭ್ಯ ದೊರೆಯಲಿದೆ.

ಅಂಚೆ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನ:

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ಶೈಕ್ಷಣಿಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ (Self-attested copies) ಅಂಚೆ ಮೂಲಕ ಕಳುಹಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ‘ನಿರ್ದೇಶಕರು, SSPL, DRDO, ಲಕ್ನೋ ರಸ್ತೆ, ತಿಮಾರ್ಪುರ್, ದೆಹಲಿ-110054’ ಈ ವಿಳಾಸಕ್ಕೆ ಆಗಸ್ಟ್ 21 ರೊಳಗೆ ತಲುಪುವಂತೆ ಕಳುಹಿಸಬೇಕು. ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ತಿಳಿಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಯಾರು? ಡಿಜಿಟಲ್ ಫಂಡ್ ಹಾಗೂ ವಿದೇಶಿ ಶಿಕ್ಷಣದ ವೆಚ್ಚದ ತನಿಖೆಗೆ ಆರ್‌ಟಿಐ ಅರ್ಜಿ – Kannada News | Abhijit Dipke Under RTI Scanner: Foreign Education, Funding Investigation

ನವದೆಹಲಿ, ಆಗಸ್ಟ್​ 02: ‘ನೀಟ್-ಯುಜಿ’ (NEET-UG) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗಳ ವೇಳೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಪ್ರಸಿದ್ಧಿ ಪಡೆದ ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ದೀಪ್ಕೆ ಅವರ ವಿದೇಶಿ ಶಿಕ್ಷಣದ ಖರ್ಚು ಹಾಗೂ ನಿಧಿ ಸಂಗ್ರಹಣೆಯ ಕುರಿತು ಆರ್‌ಟಿಐ (RTI) ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗ ಮತ್ತು ಜಿಎಸ್‌ಟಿ (GST) ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸೂರತ್ ಮೂಲದ ಆರ್‌ಟಿಐ ಕಾರ್ಯಕರ್ತ ಅಮಿತ್ ತಿವಾರಿ ಎಂಬುವವರು, ಅಭಿಜೀತ್ ದೀಪ್ಕೆ ಅವರ ತಂದೆ ಭಗವಾನ್‌ರಾವ್ ದೀಪ್ಕೆ ಅವರ ಆರ್ಥಿಕ ಹಿನ್ನೆಲೆ ಹಾಗೂ ಸಿಜೆಪಿ ಸಂಸ್ಥೆಯ ನಿಧಿ ಸಂಗ್ರಹಣೆ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಯಾರೀ ಅಭಿಜೀತ್ ದೀಪ್ಕೆ? ಅವರ ಶಿಕ್ಷಣ ಮತ್ತು ಹಿನ್ನೆಲೆ
ಆಮ್ ಆದ್ಮಿ ಪಾರ್ಟಿಯಲ್ಲಿ ಕಾರ್ಯ: 2020 ರಿಂದ2023 ರವರೆಗೆ ಆಮ್ ಆದ್ಮಿ ಪಾರ್ಟಿಯ (AAP) ಡಿಜಿಟಲ್ ಹಾಗೂ ಮೀಮ್ಸ್ ಪ್ರಚಾರ ಪಡೆಗಳಲ್ಲಿ ಅಭಿಜೀತ್ ಕೆಲಸ ಮಾಡಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿ ಪತ್ರಿಕೋದ್ಯಮ ಮುಗಿಸಿದ ನಂತರ, ಬೋಸ್ಟನ್ ವಿಶ್ವವಿದ್ಯಾಲಯದಿಂದ ‘ಸಾರ್ವಜನಿಕ ಸಂಪರ್ಕ’ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಲಡಾಖ್ ಮೂಲದ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರೊಂದಿಗೆ ‘ನೀಟ್’ ಪರೀಕ್ಷಾ ಅಕ್ರಮದ ವಿರುದ್ಧ ಜಂಟಿ ಆನ್‌ಲೈನ್ ಅಭಿಯಾನ ನಡೆಸಿ ರಾಷ್ಟ್ರಮಟ್ಟದ ಗಮನ ಸೆಳೆದಿದ್ದರು.

ಆರ್‌ಟಿಐ ಕಾರ್ಯಕರ್ತನಿಂದ ಸಾಲು ಸಾಲು ದೂರುಗಳು
ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಉದ್ಯೋಗಿಯಾಗಿರುವ ಅಭಿಜೀತ್ ಅವರ ತಂದೆ, ತಮ್ಮ ಮಗನನ್ನು ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಓದಿಸಲು ಭಾರಿ ವೆಚ್ಚ ಭರಿಸಿದ್ದು ಹೇಗೆ? ಅವರ ಆಸ್ತಿ ವಿವರ ತನಿಖೆಯಾಗಬೇಕು ಎಂದು ತಿವಾರಿ ಒತ್ತಾಯಿಸಿದ್ದಾರೆ. ಸಿಜೆಪಿಯು ‘ಜನಪ್ರತಿನಿಧಿ ಕಾಯ್ದೆ 1951’ರ ಅಡಿಯಲ್ಲಿ ನೋಂದಾಯಿತ ರಾಜಕೀಯ ಪಕ್ಷವಲ್ಲದಿದ್ದರೂ ರಾಜಕೀಯ ಪಕ್ಷದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರಿಶೀಲಿಸಲು ಮನವಿ ಮಾಡಲಾಗಿದೆ.

ಮತ್ತಷ್ಟು ಓದಿ: ಬಿಹಾರ, ಅಸ್ಸಾಂ ಬೆನ್ನಲ್ಲೇ ಪಶ್ಚಿಮ ಬಂಗಾಳದಿಂದಲೂ ನೀಟ್ ಪ್ರತಿಭಟನಾಕಾರರಿಗೆ ಅಭಯ: ಪ್ರಕರಣ ಹಿಂಪಡೆಯಲು ನಿರ್ಧಾರ, ಕ್ರಿಮಿನಲ್‌ಗಳಿಗೆ ಇಲ್ಲ ವಿನಾಯಿತಿ

ನೀಟ್ ಪ್ರತಿಭಟನಾಕಾರರ ಕಾನೂನು ಹೋರಾಟಕ್ಕಾಗಿ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು 1 ಕೋಟಿ ರೂ. ಕೊಡುಗೆ ನೀಡುವುದಾಗಿ ಘೋಷಿಸಿದ್ದರು. ಈ ಹಣಕ್ಕೆ ಶೇ. 18 ರಷ್ಟು ಜಿಎಸ್‌ಟಿ ಅನ್ವಯಿಸುತ್ತದೆಯೇ ಎಂದು ಪರಿಶೀಲಿಸುವಂತೆ ಕೇಂದ್ರ ಜಿಎಸ್‌ಟಿ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮೀಮ್ಸ್‌ ಮತ್ತು ವಿಡಂಬನೆಯ ಮೂಲಕ ಯುವಜನತೆಯನ್ನು ತಲುಪುವುದು ಭಾರತೀಯ ರಾಜಕೀಯದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದೆ. ಆದರೆ, ನೋಂದಾಯಿತವಲ್ಲದ ಇಂತಹ ಡಿಜಿಟಲ್ ವೇದಿಕೆಗಳು ‘ಕಾನೂನು ರಕ್ಷಣಾ ನಿಧಿ’ಹೆಸರಿನಲ್ಲಿ ಹಣ ಸಂಗ್ರಹಿಸುವುದು ಕಾನೂನು ಮತ್ತು ತೆರಿಗೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಜನೀಕಾಂತ್​​ಗಾಗಿ ನಿಯಮ ಮುರಿದ ನಟ ವಿಜಯ್ ಸೇತುಪತಿ – Kannada News | Vijay Sethupathi breaks rules for Rajinikanth

ವಿಜಯ್ ಸೇತುಪತಿ (Vijay Sethupati), ದಕ್ಷಿಣದ ಬಲು ಬೇಡಿಕೆಯ ನಟ. ನಾಯಕನಾಗಿ, ವಿಲನ್ ಆಗಿ, ಪೋಷಕ ನಟನಾಗಿ ಎಲ್ಲ ರೀತಿಯ ಪಾತ್ರಗಳಲ್ಲೂ ವಿಜಯ್ ನಟಿಸುತ್ತಾರೆ. ಇತ್ತೀಚೆಗೆ ನಾಯಕನಾಗಿ ನಟಿಸುವುದು ತುಸು ಹೆಚ್ಚು ಮಾಡಿದ್ದಾರೆ. ವಿಜಯ್ ಸೇತುಪತಿ ಈ ಮೊದಲೆಲ್ಲ ಹಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದರು. ಸಣ್ಣ-ಪುಟ್ಟ ಸಿನಿಮಾಗಳಲ್ಲಿಯೂ ವಿಜಯ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಕೆಲ ವರ್ಷಗಳಿಂದ ಯಾವುದೇ ಸಿನಿಮಾನಲ್ಲೂ ಅತಿಥಿ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ನಿಯಮ ಹೇರಿಕೊಂಡಿದ್ದರು. ಆದರೆ ಈಗ ಆ ನಿಯಮವನ್ನು ರಜನೀಕಾಂತ್ ಅವರಿಗಾಗಿ ಮುರಿದಿದ್ದಾರೆ.

ವಿಜಯ್ ಸೇತುಪತಿ ಅವರು ಅತಿಥಿ ಪಾತ್ರಗಳಲ್ಲಿ (ಕೇಮಿಯೋ) ನಟಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಆದರೆ ರಜನಿಕಾಂತ್ ಅವರ ‘ಜೈಲರ್ 2’ ಚಿತ್ರಕ್ಕಾಗಿ ಅವರು ತಮ್ಮ ಈ ನಿಯಮವನ್ನು ಮುರಿದ್ದಾರೆ. ಕೇವಲ ರಜನೀಕಾಂತ್ ಅವರಿಗಾಗಿ ಮಾತ್ರವೇ ಈ ನಿಯಮವನ್ನು ಮುರಿದಿರುವುದಾಗಿ ವಿಜಯ್ ಸೇತುಪತಿ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ಸಹ ವಿಜಯ್ ಸೇತುಪತಿ ವಿವರಿಸಿದ್ದಾರೆ.

‘ನಾನು ಅತಿಥಿ ಪಾತ್ರಗಳಲ್ಲಿ ನಟಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದೇನೆ. ‘ಜೈಲರ್ 2’ ಇದಕ್ಕೆ ಏಕೈಕ ವಿನಾಯಿತಿ, ಏಕೆಂದರೆ ಇದು ರಜನಿಕಾಂತ್ ಸರ್ ಅವರ ಸಿನಿಮಾ. ‘ಜೈಲರ್ 2’ ಸಿನಿಮಾದ ಪೋಸ್ಟರ್​​ನಲ್ಲಿ ಒಂದು ವೇಳೆ ನನ್ನ ಫೋಟೊ ಹಾಕಿದರೂ ಸಹ ಜನ ನೋಡುವುದು ರಜನೀಕಾಂತ್ ಅವರನ್ನು ಮಾತ್ರ. ಪ್ರೇಕ್ಷಕರ ಗಮನ ಸಹಜವಾಗಿಯೇ ರಜನೀಕಾಂತ್ ಅವರ ಮೇಲೆ ಹೋಗುತ್ತದೆ. ಆದರೆ ಚಿಕ್ಕಪುಟ್ಟ ಸಿನಿಮಾಗಳು ಪ್ರಚಾರಕ್ಕಾಗಿ ನನ್ನ ಅತಿಥಿ ಪಾತ್ರವನ್ನು ಬಳಸಿಕೊಂಡಾಗ, ನನ್ನ ಫೋಟೊ ಅನ್ನು ಪೋಸ್ಟರ್​​ನಲ್ಲಿ ಬಳಸಿಕೊಳ್ಳುತ್ತಾರೆ. ಅದು ನಾನು ನಾಯಕನಾಗಿ ನಟಿಸುವ ಸಿನಿಮಾಗಳ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಿಜಯ್ ಸೇತುಪತಿ ತಿಳಿಸಿದರು.

ಇದನ್ನೂ ಓದಿ:ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ

ಅತಿಥಿ ಪಾತ್ರಗಳಲ್ಲಿ ನಟಿಸಿದರೆ ತಾವು ನಾಯಕನಾಗಿ ನಟಿಸುವ ಸಿನಿಮಾಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ವಿಜಯ್ ಸೇತುಪತಿ ಅವರು ಅತಿಥಿ ಪಾತ್ರಗಳಲ್ಲಿ ನಟಿಸುವುದನ್ನೇ ನಿಲ್ಲಿಸಿದ್ದಾರೆ. ಈ ಹಿಂದೆ ಅವರು ಕೆಲವಾರು ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಈಗ ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್, ಮೋಹನ್​​ಲಾಲ್, ಹೃತಿಕ್ ರೋಷನ್ ಅವರುಗಳು ಸಹ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ವಿಜಯ್ ಸೇತುಪತಿ ಪ್ರಸ್ತುತ ಮಣಿರತ್ನಂ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಪುರಿ ಜಗನ್ನಾಥ್ ನಿರ್ದೇಶನದ ‘ಸ್ಲಂ ಡಾಗ್’ ಸಿನಿಮಾನಲ್ಲಿ ನಟಿಸಿದ್ದಾರೆ. ಅದೇ ಸಿನಿಮಾನಲ್ಲಿ ದುನಿಯಾ ವಿಜಯ್ ಸಹ ಇದ್ದಾರೆ. ವೆಟ್ರಿಮಾರನ್ ನಿರ್ದೇಶನದ ‘ಅರಸನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಮಿಸ್ಕಿನ್ ನಿರ್ದೇಶನದ ‘ಟ್ರೈನ್’ ಹೆಸರಿನ ಸಿನಿಮಾನಲ್ಲೂ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಹಾಸನದಲ್ಲಿ ಒಎಂಆರ್ ಶೀಟ್ ಅದಲು ಬದಲು! ಡಿಸಿ ಹೇಳಿದ್ದೇನು? – Kannada News | Hassan Police Constable Exam: OMR Sheet Confusion Sparks Panic, DC Clarifies

ಹಾಸನ, ಆಗಸ್ಟ್ 02: ರಾಜ್ಯಾದ್ಯಂತ ಶನಿವಾರ ನಡೆದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (PC) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಯ ವೇಳೆ, ಹಾಸನ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಒಎಂಆರ್ (OMR) ಶೀಟ್‌ಗಳು ಅದಲು-ಬದಲಾಗಿವೆ ಎಂಬ ಗೊಂದಲ ಉಂಟಾಗಿ ಅಭ್ಯರ್ಥಿಗಳು ತೀವ್ರ ಆತಂಕಕ್ಕೊಳಗಾದ ಘಟನೆ ನಡೆದಿದೆ.

ಪರೀಕ್ಷಾ ಕೇಂದ್ರದಲ್ಲಿ ಗೊಂದಲ, ಅಭ್ಯರ್ಥಿಗಳ ಆಕ್ರೋಶ

ಹಾಸನ ನಗರದ ಗಂಧದ ಕೋಠಿ/ಆರ್.ಸಿ. ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪರೀಕ್ಷಾ ಕೇಂದ್ರ ಸಂಖ್ಯೆ: 512) ನಲ್ಲಿ ಈ ಘಟನೆ ಸಂಭವಿಸಿದೆ. ಪರೀಕ್ಷೆ ಆರಂಭವಾದ ಸುಮಾರು ಒಂದು ಗಂಟೆಯ ಬಳಿಕ, ಎರಡು ಕೊಠಡಿಗಳಲ್ಲಿದ್ದ ಅಭ್ಯರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳ ಸಂಖ್ಯೆ (Serial Number) ತಾಳೆಯಾಗುತ್ತಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಇದರಿಂದ ಆತಂಕಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಬಂದು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಪರೀಕ್ಷಾ ಹಾಲ್‌ನಲ್ಲಿ ಗಂಟೆಗೂ ಹೆಚ್ಚು ಕಾಲ ಗೊಂದಲ ಹಾಗೂ ಗಲಾಟೆ ನಡೆದಿದ್ದರಿಂದ ಏಕಾಗ್ರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಸ್ಥಳಕ್ಕೆ ಡಿಸಿ ಭೇಟಿ: ಕೆಇಎ ಜೊತೆ ಮಾತುಕತೆ

ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಉಂಟಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಹಾಸನ ಜಿಲ್ಲಾಧಿಕಾರಿ (DC) ಲತಾಕುಮಾರಿ ಅವರು ಸ್ಥಳಕ್ಕೆ ಭೇಟಿ ನೀಡಿ, ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಾಗೂ ಅಭ್ಯರ್ಥಿಗಳಿಂದ ಮಾಹಿತಿ ಪಡೆದರು. ಬಳಿಕ ಪರೀಕ್ಷಾ ಕೇಂದ್ರದಲ್ಲಿ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಭ್ಯರ್ಥಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

“ಎರಡು ಕೊಠಡಿಗಳಲ್ಲಿ ಗೊಂದಲವಾಗಿದೆ ಎಂದು ಅಭ್ಯರ್ಥಿಗಳು ಭಾವಿಸಿದ್ದರು. ಆದರೆ ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಯಾವುದೇ ರೀತಿಯ ಲೋಪವಾಗಿಲ್ಲ. ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್ ಸಂಖ್ಯೆ ಬೇರೆ ಬೇರೆಯಾಗಿದ್ದರೂ ತಾಂತ್ರಿಕವಾಗಿ ಯಾವುದೇ ಸಮಸ್ಯೆಯಾಗುವುದಿಲ್ಲ. ಪ್ರಶ್ನೆ ಪತ್ರಿಕೆ ಸಂಖ್ಯೆಯನ್ನು ಒಎಂಆರ್ ಶೀಟ್‌ನಲ್ಲಿ ಸರಿಯಾಗಿ ನಮೂದಿಸಿದರೆ ಸಾಕು. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಯಾವುದೇ ಅಭ್ಯರ್ಥಿಯೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.” ಎಂದು ಡಿಸಿ ಹೇಳಿದ್ದಾರೆ.

ಕೆಇಎ ಅಧಿಕಾರಿಗಳು ಸಹ ಪ್ರಶ್ನೆ ಪತ್ರಿಕೆ ಸಂಖ್ಯೆ ಹಾಗೂ ಒಎಂಆರ್ ಶೀಟ್ ಸಂಖ್ಯೆಯಲ್ಲಿ ವ್ಯತ್ಯಾಸವಾದರೂ ಮೌಲ್ಯಮಾಪನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಪರೀಕ್ಷೆಯು ಸುಸೂತ್ರವಾಗಿ ಪೂರ್ಣಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ತೊಟ್ಟಿಯಲ್ಲಿದ್ದ ನೀರು ಕುಡಿಯಲು ಕಷ್ಟ ಪಡುತ್ತಿದ್ದ ಕಂದಮ್ಮನನ್ನು ಬೀಳದಂತೆ ತಡೆದ ತಾಯಾನೆ – Kannada News | A mother elephant prevented a baby elephant from falling as it moved to drink water from the trough.

ಮರಿ ಆನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಒಂದು ತರಹದ ಖುಷಿ. ಅವುಗಳು ಏನು ಮಾಡಿದ್ರೂ ಮುದ್ದಾಗಿ ಕಾಣುತ್ತವೆ. ಇದೀಗ ಈ ದೃಶ್ಯ ನೋಡಿದ್ರೆ ತಾಯಿಯ ಕಾಳಜಿಯ ಸ್ಪಷ್ಟ ಚಿತ್ರಣ ನಿಮ್ಮ ಕಣ್ಣ ಮುಂದೆ ಬರುತ್ತದೆ. ಮರಿಯಾನೆಯೊಂದು ನೀರಿನ ತೊಟ್ಟಿಯಲ್ಲಿದ್ದ ನೀರನ್ನು ಕುಡಿಯಲು ಪ್ರಯತ್ನಿಸುತ್ತಿದೆ. ತಾಯಾನೆ ತನ್ನ ಕಂದಮ್ಮನನ್ನು ಬೀಳದಂತೆ ಸೊಂಡಿಲಿನಲ್ಲಿ ಹಿಡಿದು ನೀರು ಕುಡಿಯಲು ಸಹಾಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ.

ಶೆಲ್ ಡ್ರಿಕ್ ವೈಲ್ಡ್ ಲೈಫ್ ಟ್ರಸ್ಟ್ (Sheldrick Wildlife Trust) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿ ಆನೆಗಳ ಹಿಂಡನ್ನು ಕಾಣಬಹುದು. ಮರಿಯಾನೆಯೊಂದು ನೀರಿನ ತೊಟ್ಟಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದೆ. ಆದರೆ ತನ್ನ ಸೊಂಡಿಲು ನೀರಿನ ತೊಟ್ಟಿಗೆ ತಾಕದೇ ಕಷ್ಟ ಪಡುತ್ತಿದೆ. ಇದನ್ನು ನೋಡಿದ ತಾಯಾನೆ ತನ್ನ ಸೊಂಡಿಲಿನಿಂದ ಬೀಳದಂತೆ ಹಿಡಿದು ನೀರು ಕುಡಿಯಲು ಸಹಾಯ ಮಾಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಂದಮ್ಮನನ್ನು ಜೋಪಾನವಾಗಿ ನದಿ ದಾಟಿಸಿದ ತಾಯಾನೆ

ಈ ವಿಡಿಯೋ 33 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ದೃಶ್ಯ ನೋಡಲು ಖುಷಿಯಾಗುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ನಿಜಕ್ಕೂ ಅದ್ಭುತ ತಾಯಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮಾತು ಬಾರದಿದ್ದರೇನು, ತಾಯಿ ಪ್ರೀತಿ ಒಂದೇ ಅಲ್ಲವೇ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

50 ಕೋಟಿ ರೂಪಾಯಿಗೆ ‘ಕಿಂಗ್’ ಆಡಿಯೋ ರೈಟ್ಸ್‌ ಮಾರಾಟ? ಶಾರುಖ್ ಖಾನ್ ಹೊಸ ದಾಖಲೆ – Kannada News | Shah Rukh Khan starrer King Movie Music Rights deal 50 Crore Rupees

2023ರಲ್ಲಿ ‘ಪಠಾಣ್’ ಮತ್ತು ‘ಜವಾನ್’ ರೀತಿಯ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan), ಇದೀಗ ತಮ್ಮ ಬಹುನಿರೀಕ್ಷಿತ ‘ಕಿಂಗ್’ (King) ಸಿನಿಮಾದ ಮೂಲಕ ಮತ್ತೆ ತೆರೆಗೆ ಬರಲು ಸಜ್ಜಾಗಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಮೇಲೆ ಈಗಾಗಲೇ ಕೋಟ್ಯಾಂತರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಹೈಪ್ ಸೃಷ್ಟಿಸಿರುವ ಈ ಸಿನಿಮಾದ ಮ್ಯೂಸಿಕ್ ಹಕ್ಕುಗಳಿಗೆ ಸಂಬಂಧಿಸಿದಂತೆ ಭಾರಿ ಮೊತ್ತದ ವ್ಯವಹಾರ ನಡೆದಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ‘ಕಿಂಗ್’ ಚಿತ್ರದ ಆಡಿಯೋ ಹಕ್ಕುಗಳು ಬರೋಬ್ಬರಿ 50 ಕೋಟಿ ರೂಪಾಯಿಗೆ ಬಿಕರಿಯಾಗುವ ಸಾಧ್ಯತೆ ಇದೆ. ಸಚಿನ್-ಜಿಗರ್ ಸಂಗೀತ ನಿರ್ದೇಶನ ಮಾಡುತ್ತಿರುವ ‘ಕಿಂಗ್’ ಸಿನಿಮಾದ ಆಲ್ಬಮ್ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಪ್ರಮುಖ ಆಡಿಯೋ ಸಂಸ್ಥೆಗಳಾದ ಸೋನಿ ಮ್ಯೂಸಿಕ್, ಸರೆಗಮ ಮತ್ತು ಟಿ-ಸಿರೀಸ್ ಸಂಸ್ಥೆಗಳು ಈ ಚಿತ್ರದ ಮ್ಯೂಸಿಕ್ ರೈಟ್ಸ್ ಪಡೆಯಲು ಭಾರಿ ಪೈಪೋಟಿ ನಡೆಸುತ್ತಿವೆ. ಪ್ರಸ್ತುತ ಪ್ರಮುಖ ಸಂಸ್ಥೆಯೊಂದು 50 ಕೋಟಿ ರೂ. ನೀಡಿ ಹಕ್ಕುಗಳನ್ನು ತನ್ನದಾಗಿಸಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.

ಚಿತ್ರರಂಗದಲ್ಲಿ ಅಪರೂಪದ ದಾಖಲೆ:

‘ಕಿಂಗ್’ ಚಿತ್ರದ ಬಗ್ಗೆ ಕೇಳಿಬರುತ್ತಿರುವ ಸುದ್ದಿ ನಿಜವೇ ಹೌದಾಗಿದ್ದಲ್ಲಿ, ಇತ್ತೀಚಿನ ದಿನಗಳಲ್ಲಿ ನಡೆದ ಅತಿ ದೊಡ್ಡ ಮ್ಯೂಸಿಕ್ ಡೀಲ್‌ಗಳಲ್ಲಿ ಇದೂ ಒಂದಾಗಲಿದೆ. ‘ರಾಮಾಯಣ’ (ಎರಡೂ ಭಾಗಗಳಿಗೆ ಸೇರಿ 75 ಕೋಟಿ ರೂಪಾಯಿ) ಚಿತ್ರದ ನಂತರ, ಒಂದೇ ಸಿನಿಮಾಗೆ 50 ಕೋಟಿ ರೂ. ಮೌಲ್ಯದ ಆಡಿಯೋ ಹಕ್ಕುಗಳ ಡೀಲ್ ಆಗುತ್ತಿರುವುದು ಭಾರತೀಯ ಚಿತ್ರರಂಗದಲ್ಲೇ ಅಪರೂಪದ ದಾಖಲೆಯಾಗಿದೆ.

‘ಇನ್ನೂ ಯಾವುದೂ ಅಂತಿಮಗೊಂಡಿಲ್ಲ’

ಈ ವರದಿಗಳಿಗೆ ಪ್ರತಿಕ್ರಿಯಿಸಿದಂತೆ ‘ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್’ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಪುನಿತ್ ಗೋಯೆಂಕಾ ಅವರು ‘ವೆರೈಟಿ ಇಂಡಿಯಾ’ಗೆ ನೀಡಿದ ಸಂದರ್ಶನದಲ್ಲಿ, ಮಾತುಕತೆಗಳು ನಡೆಯುತ್ತಿವೆ ಆದರೆ ಇನ್ನೂ ಯಾವುದೂ ಅಂತಿಮಗೊಂಡಿಲ್ಲ ಎಂದು ಹೇಳಿದ್ದಾರೆ. ‘ನಾನು ಬೆಲೆ ಅಥವಾ ಮೊತ್ತದ ಬಗ್ಗೆ ಕಾಮೆಂಟ್ ಮಾಡುವುದಿಲ್ಲ. ನಮ್ಮ ನಡುವೆ ಮಾತುಕತೆ ನಡೆಯುತ್ತಿದೆ. ಆದರೆ ಇನ್ನೂ ಯಾವುದೇ ಅಧಿಕೃತ ಒಪ್ಪಂದಕ್ಕೆ ಸಹಿ ಬಿದ್ದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು

ಕ್ರಿಸ್ಮಸ್ ಹಬ್ಬಕ್ಕೆ ತೆರೆಗೆ ಬರಲಿದೆ ‘ಕಿಂಗ್’:

‘ಕಿಂಗ್’ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಕೇವಲ 15 ದಿನಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಪೋಸ್ಟ್ ಪ್ರೊಡಕ್ಷನ್ ಮತ್ತು ಎಡಿಟಿಂಗ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಇದೇ ವರ್ಷ ಕ್ರಿಸ್ಮಸ್ ವೇಳೆಗೆ ಚಿತ್ರವನ್ನು ಬೆಳ್ಳಿಪರದೆಯ ಮೇಲೆ ತರಲು ಚಿತ್ರತಂಡ ಯೋಜನೆ ರೂಪಿಸಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಸುಹಾನಾ ಖಾನ್ ಕೂಡ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್ – Kannada News | Jasprit Bumrah Ruled Out of India Sri Lanka Test Series; Team India Faces Setback

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇನ್ನೇರಡು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಏಕೆಂದರೆ ಈ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ, ಶ್ರೀಲಂಕಾದ ಸ್ಥಳೀಯ ತಂಡದ ವಿರುದ್ಧ ಆಗಸ್ಟ್ 6 ರಿಂದ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ತಂಡವನ್ನು ಸಹ ಪ್ರಕಟಿಸಲಾಗಿದೆ. ಈ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸಹ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ.

Published On – 2:26 pm, Sun, 2 August 26

Source link

ದುಲೀಪ್ ಟ್ರೋಫಿಗೆ 4 ತಂಡಗಳು ಪ್ರಕಟ – Kannada News | Duleep Trophy 2026: 4 Regional Zone Squads Announced

ರಾಷ್ಟ್ರೀಯ ರೆಡ್-ಬಾಲ್ ಕ್ರಿಕೆಟ್ ಸೀಸನ್​ನ ಆರಂಭವನ್ನು ಸೂಚಿಸುವ ಪ್ರಸಿದ್ಧ ದುಲೀಪ್ ಟ್ರೋಫಿ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಆರು ತಂಡಗಳ ನಡುವಣ ಈ ಕದನಕ್ಕಾಗಿ ಈಗಾಗಲೇ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಈ ನಾಲ್ಕು ವಲಯ ತಂಡಗಳಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ವೆಸ್ಟ್ ಝೋನ್ (ಪಶ್ಚಿಮ ವಲಯ): ರುತುರಾಜ್ ಗಾಯಕ್ವಾಡ್ (ನಾಯಕ), ಶಮ್ಸ್ ಮುಲಾನಿ, ಪೃಥ್ವಿ ಶಾ, ಸರ್ಫರಾಝ್ ಖಾನ್, ಮುಶೀರ್ ಖಾನ್, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಹರ್ವಿಕ್ ದೇಸಾಯಿ, ಉರ್ವಿಲ್ ಪಟೇಲ್, ಶಿವಾಲಿಕ್ ಶರ್ಮಾ, ಸಿದ್ಧಾರ್ಥ್ ದೇಸಾಯಿ, ಅತಿತ್ ಶೇಠ್, ಮುಕೇಶ್ ಚೌಧರಿ, ಜೇಮೀತ್ ಪಟೇಲ್.

ಸೆಂಟ್ರಲ್ ಝೋನ್ (ಕೇಂದ್ರ ವಲಯ): ರಜತ್ ಪಟಿದಾರ್ (ನಾಯಕ), ರಿಂಕು ಸಿಂಗ್, ಆರ್ಯನ್ ಜುಯಲ್, ಕುನಾಲ್ ಸಿಂಗ್ ರಾಥೋಡ್, ಸರಂಶ್ ಜೈನ್, ಅಮನ್ ಮೊಖಾಡೆ, ಕುನಾಲ್ ಚಂದೇಲಾ, ಜೀಶನ್ ಅನ್ಸಾರಿ, ಆರ್ಯನ್ ಪಾಂಡೆ, ಅರ್ಷದ್ ಖಾನ್, ಆಯುಷ್ ಪಾಂಡೆ, ಯಶ್ ರಾಥೋಡ್, ಹರ್ಷ್ ದುಬೆ, ಯಶ್ ಠಾಕೂರ್, ನಾಚಿಕೇತ್ ಭೂತೆ.

ಈಸ್ಟ್ ಝೋನ್ (ಪೂರ್ವ ವಲಯ): ಇಶಾನ್ ಕಿಶನ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಮನ್ಯು ಈಶ್ವರನ್, ಮೊಹಮ್ಮದ್ ಶಮಿ, ಮುಕೇಶ್ ಕುಮಾರ್, ಶಹಬಾಝ್ ಅಹ್ಮದ್, ಕುಮಾರ್ ಕುಶಾಗ್ರ, ಸುದೀಪ್ ಕುಮಾರ್ ಘರಾಮಿ, ಸೂರಜ್ ಸಿಂಧು ಜೈಸ್ವಾಲ್, ಶಿಖರ್ ಮೋಹನ್, ಅನುಕೂಲ್ ರಾಯ್, ವಿರಾಟ್ ಸಿಂಗ್, ಸುಭ್ರಾಂಶು ಸೇನಾಪತಿ, ಡೆನಿಶ್ ದಾಸ್, ಅಭಿಜಿತ್ ಸರ್ಕಾರ್.

ಸೌತ್ ಝೋನ್ (ದಕ್ಷಿಣ ವಲಯ): ತಿಲಕ್ ವರ್ಮಾ (ನಾಯಕ), ರಿಕ್ಕಿ ಭುಯಿ, ಅಭಿನವ್ ತೇಜ್ರಾನಾ, ಶೇಖ್ ರಶೀದ್, ಕೆ. ಹಿಮತೇಜ, ಸ್ಮರಣ್ ರವಿಚಂದ್ರನ್, ಎನ್. ಜಗದೀಶನ್, ಕರುಣ್ ನಾಯರ್, ಟಿ. ತ್ಯಾಗರಾಜನ್, ಶ್ರೇಯಸ್ ಗೋಪಾಲ್, ಸಾಯಿ ತೇಜ, ಟಿ. ವಿಜಯ್, ವಿದ್ವತ್ ಕಾವೇರಪ್ಪ, ಅಮನ್ ಖಾನ್.

ಯಾವ ರಾಜ್ಯ ಯಾವ ವಲಯದಲ್ಲಿ?

ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ 6 ಪ್ರಮುಖ ಭೌಗೋಳಿಕ ವಲಯಗಳ ಅಡಿಯಲ್ಲಿ ಬರುವ ರಾಜ್ಯಗಳು ಹಾಗೂ ಕ್ರಿಕೆಟ್ ಸಂಸ್ಥೆಗಳ ಸಂಪೂರ್ಣ ವಿವರ ಇಲ್ಲಿದೆ.

  1. ಸೌತ್ ಝೋನ್ (ದಕ್ಷಿಣ ವಲಯ): ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಹೈದರಾಬಾದ್, ಗೋವಾ ಮತ್ತು ಪಾಂಡಿಚೇರಿ
  2. ವೆಸ್ಟ್ ಝೋನ್ (ಪಶ್ಚಿಮ ವಲಯ): ಮುಂಬೈ, ಮಹಾರಾಷ್ಟ್ರ, ಗುಜರಾತ್, ಸೌರಾಷ್ಟ್ರ ಮತ್ತು ಬರೋಡಾ.
  3. ಈಸ್ಟ್ ಝೋನ್ (ಪೂರ್ವ ವಲಯ): ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಬಿಹಾರ, ಅಸ್ಸಾಂ ಮತ್ತು ತ್ರಿಪುರ.
  4. ಸೆಂಟ್ರಲ್ ಝೋನ್ (ಕೇಂದ್ರ ವಲಯ): ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ವಿದರ್ಭ ಹಾಗೂ ರೈಲ್ವೇಸ್ ತಂಡ.
  5. ನಾರ್ತ್ ಝೋನ್ (ಉತ್ತರ ವಲಯ): ದೆಹಲಿ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಹಾಗೂ ಸರ್ವಿಸಸ್ ತಂಡ.
  6. ನಾರ್ತ್ ಈಸ್ಟ್ ಝೋನ್ (ಈಶಾನ್ಯ ವಲಯ): ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.

ಈ ಆರು ವಲಯಗಳ ತಂಡಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸಲಿದ್ದಾರೆ. ಅಂದರೆ, ಕಳೆದ ರಣಜಿ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಯಾ ವಲಯದ ಆಟಗಾರರನ್ನೇ ಈ ಬಾರಿಯ ದುಲೀಪ್ ಟ್ರೋಫಿಗೆ  ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಪ್ರವಾಹ ಸಂತ್ರಸ್ತರ ನೆರವಿಗೆ ನಿಂತ RCB ಮಾಲಕಿ: ವಿಡಿಯೋ ವೈರಲ್!

ದುಲೀಪ್ ಟ್ರೋಫಿ ಯಾವಾಗ ಶುರು?

ದುಲೀಪ್ ಟ್ರೋಫಿ 2026ರ ಟೂರ್ನಿಯು ಆಗಸ್ಟ್ 23, 2026 ರಿಂದ ಆರಂಭವಾಗಲಿದೆ. ಈ ಟೂರ್ನಿಯ ಎಲ್ಲಾ ಪಂದ್ಯಗಳು ಬೆಂಗಳೂರಿನ BCCI ಸೆಂಟರ್ ಆಫ್ ಎಕ್ಸಲೆನ್ಸ್ (COE) ಮೈದಾನದಲ್ಲಿ ನಡೆಯಲಿವೆ.

Source link

ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ: ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅಭಿಮತ – Kannada News | CM DK Shivakumar Leads All Party Meet; Leaders Unite to Protect Karnataka’s Water Interests

ಬೆಂಗಳೂರು, ಆಗಸ್ಟ್​​ 02: ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ವಿವಾದವನ್ನು ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ ಎಂದು ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ. ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಎಲ್ಲಾ ಪಕ್ಷಗಳೂ ಒಟ್ಟಿಗೇ ನಿಂತಿರುವ ಚರಿತ್ರೆ ನಮ್ಮ ರಾಜ್ಯಕ್ಕೆ ಇದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂಬುದು ನಮ್ಮ ನಿಲುವಾಗಿದ್ದು, ಇದಕ್ಕೆ ತಾವೆಲ್ಲರೂ ಸಹಮತ ಹೊಂದಿದ್ದೀರಿ ಅಂತಾ ಗೊತ್ತಿದೆ. CWRC, CWMA ಸಭೆಗೂ ಮೊದಲೇ ಕೇಂದ್ರ ಸಚಿವರಾದ ಸಿ.ಆರ್.ಪಾಟೀಲ್, ಜೋಶಿ, ವಿ.ಸೋಮಣ್ಣ, ಮಾಜಿ ಸಿಎಂಗಳಾದ ಬೊಮ್ಮಾಯಿ, ಶೆಟ್ಟರ್ ಭೇಟಿಯಾಗಿ ನಾನು ಮನವರಿಕೆ ಮಾಡಿದ್ದೆ. ಕೇಂದ್ರದಲ್ಲಿ ರಾಜ್ಯದ ಪರ ಮಾತನಾಡಿದ್ದಾರೆ, ಅವರಿಗೆ ಧನ್ಯವಾದ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

‘ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮ’

ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೀರು ಸಂಗ್ರಹಿಸಿದ್ದೇವೆ ಎಂದೂ ತಿಳಿಸಿದ ಅವರು, ತಮಿಳುನಾಡು ಸಿಎಂ ವಿಜಯ್ ಮಾತುಕತೆಗೆ ಬರುತ್ತೇನೆ ಅಂದಿದ್ದರು. ಆದರೆ ಕಾವೇರಿ ಪರಿಸ್ಥಿತಿ ತಿಳಿಯಾದ ನಂತರ ಬರುವಂತೆ ಹೇಳಿದ್ದೇನೆ. ಈಗ ಸಮಾಧಾನದ ಸಂಗತಿ ಅಂದರೆ ಮಳೆ ಚೆನ್ನಾಗಿ ಆಗುತ್ತಿದೆ. ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಇದೆ. ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯೇ ಆದ್ಯತೆಯಾಗಿದೆ. ಮೈಸೂರು ಜಿಲ್ಲೆ H​.D.ಕೋಟೆ ತಾಲೂಕಿನ ಕಬಿನಿ ಡ್ಯಾಂ ತುಂಬಿದ್ದು, ಹೆಚ್ಚುವರಿ ಒಳ ಹರಿವು ಸಂಗ್ರಹ ಮಾಡಿಟ್ಟುಕೊಳ್ಳಲು ಸಾಧ್ಯ ಇಲ್ಲ. ಹೀಗಾಗಿ ಸಹಜ ಹರಿವು ಮಾತ್ರ ಆಗುತ್ತಿದೆ. ನಾಲೆಗಳಿಗೂ ನೀರು ಹರಿದಿದು, ರೈತರಿಗೂ ಅನುಕೂಲ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ಏನೆಲ್ಲ ವಿಷಯಗಳು ಸಭೆಯಲ್ಲಿ ಚರ್ಚೆ?

ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ ಹಿನ್ನೆಲೆ ಮುಂದಿನ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಮುಖ್ಯವಾಗಿ ಚರ್ಚೆಯಾಗಿದೆ. ಮಳೆಯಾಗ್ತಿದೆ ನಿಜ, ಆದ್ರೆ ಮುಂದೆ ನೀರಿನ ಕೊರತೆ ಆಗಬಹುದು. ಹೀಗಾಗಿ ಜೂನ್​ವರೆಗೆ ನೀರು ಸಂಗ್ರಹಿಸಿ ಕಾಪಾಡಿಕೊಳ್ಳಬೇಕಿದ್ದು, ಮೇಕೆದಾಟು ಯೋಜನೆಯೇ ಇದಕ್ಕೆ ಶಾಶ್ವತ ಪರಿಹಾರ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ.

ಸಭೆಯಲ್ಲಿ ಯಾರೆಲ್ಲ ಭಾಗಿ?

ಸಿಎಂ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಪರಮೇಶ್ವರ್, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಕೇಂದ್ರ ಸಚಿವರಾದ ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಚಿವರಾದ ಎಂ.ಬಿ.ಪಾಟೀಲ್​, ಕೆ.ಜೆ.ಜಾರ್ಜ್​, ಕೃಷ್ಣ ಭೈರೇಗೌಡ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​​, JDLP ನಾಯಕ ಸುರೇಶ್ ಬಾಬು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಂ.ವೀರಪ್ಪ ಮೊಯ್ಲಿ,
ಬಿ.ಎಸ್​.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್.ಮಂಜುನಾಥ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ಪುಟ್ಟರಾಜು, ಹೆಚ್.ಕೆ.ಪಾಟೀಲ್, ಪರಿಷತ್​ ಸದಸ್ಯರಾದ ದಿನೇಶ್​ ಗೂಳಿಗೌಡ, ಭೋಜೇಗೌಡ, ಶರವಣ, ದೆಹಲಿ ವಿಶೇಷ ಪ್ರತಿನಿಧಿ ಜಯಚಂದ್ರ, ರಾಜ್ಯಸಭಾ ಸದಸ್ಯ ಜಗ್ಗೇಶ್, ಅಡ್ವೊಕೇಟ್ ಜನರಲ್​ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಸಿಎಂ ಡಿಕೆಶಿಗೆ ದೇವೇಗೌಡರ ಪತ್ರ

ಇನ್ನು ಸರ್ವಪಕ್ಷ ಸಭೆಗೆ ಗೈರಾಗುತ್ತಿರುವ ಬಗ್ಗೆ ಸಿಎಂ ಡಿಕೆಶಿಗೆ ಮಾಜಿ ಪ್ರಧಾನಿ ದೇವೇಗೌಡರು ಪತ್ರ ಬರೆದಿದ್ದಾರೆ. ಸರ್ವಪಕ್ಷ ಸಭೆಗೆ ಆಹ್ವಾನ ಮಾಡಿದ್ದಕ್ಕೆ ಧನ್ಯವಾದ ತಿಳಿಸಿದ ಹೆಚ್​ಡಿಡಿ, ರಾಜ್ಯದ ಹಿತಾಸಕ್ತಿ, ರೈತರ ಬದುಕು ರಕ್ಷಿಸುವ ವಿಷಯಕ್ಕೆ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ನನ್ನ ಬೆಂಬಲ ಇದೆ. ವೈಯಕ್ತಿಕ ಹಾಗೂ ಅನಾರೋಗ್ಯ ಕಾರಣ ಸಭೆಗೆ ಹಾಜರಾಗುತ್ತಿಲ್ಲ ಎಂದವರು ಪತ್ರ ಮುಖೇನ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:14 pm, Sun, 2 August 26

Source link

‘ಕಾವೇರಿ ನಮ್ಮ ಜನರನ್ನು ಬೆಸೆಯಲಿ, ವಿಭಜಿಸದಿರಲಿ’: ತಮಿಳುನಾಡು ಸಿಎಂ ವಿಜಯ್‌ಗೆ ಪತ್ರ ಬರೆದ ಬಿ.ವೈ. ವಿಜಯೇಂದ್ರ – Kannada News | BY Vijayendra Writes to Tamil Nadu CM Vijay Over Cauvery River Issue

ಬೆಂಗಳೂರು, ಆಗಸ್ಟ್ 02: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. “ಕಾವೇರಿ ನದಿ ಉಭಯ ರಾಜ್ಯಗಳ ಜನರನ್ನು ಬೆಸೆಯುವ ಕೊಂಡಿಯಾಗಬೇಕೇ ವಿನಃ ವಿಭಜಿಸುವ ಶಕ್ತಿಯಾಗಬಾರದು” ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸೌಹಾರ್ದಯುತ ಮಾತುಕತೆಗೆ ವಿಜಯೇಂದ್ರ ಕರೆ

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದ ಬೆನ್ನಲ್ಲೇ ಎರಡೂ ರಾಜ್ಯಗಳ ನಡುವೆ ರಾಜಕೀಯ ಮತ್ತು ಕಾನೂನು ಸಮರ ತೀವ್ರಗೊಂಡಿದೆ. ಈ ವಾತಾವರಣದ ನಡುವೆ ವಿಜಯೇಂದ್ರ ಅವರು ತಮಿಳುನಾಡು ಸಿಎಂಗೆ ರಾಜತಾಂತ್ರಿಕ ಹಾಗೂ ಸೌಹಾರ್ದಯುತ ಹಾದಿ ತುಳಿಯುವಂತೆ ಮನವಿ ಮಾಡಿದ್ದಾರೆ.

“ನೆರೆಹೊರೆಯ ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ, ಅವುಗಳನ್ನು ರಾಜಕೀಯ ಪಕ್ವತೆ ಮತ್ತು ಮುಕ್ತ ಸಂವಾದದ ಮೂಲಕ ಬಗೆಹರಿಸಿಕೊಳ್ಳುವುದು ಮುಖ್ಯ” ಎಂದು ವಿಜಯೇಂದ್ರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಿಂದೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಹಾಗೂ ತಮಿಳುನಾಡಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಎಂ. ಕರುಣಾನಿಧಿ ಅವರು ತೋರಿಸಿದ ರಾಜಕೀಯ ಪಕ್ವತೆಯನ್ನು ವಿಜಯೇಂದ್ರ ನೆನಪಿಸಿದ್ದಾರೆ.

ಮೇಕೆದಾಟು ಯೋಜನೆಗೆ ಬೆಂಬಲ ನೀಡಲು ಮನವಿ

ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಕೋಟ್ಯಂತರ ಕನ್ನಡಿಗರು ಮತ್ತು ತಮಿಳರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮೇಕೆದಾಟು ಯೋಜನೆ ಅತ್ಯಗತ್ಯ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದಿಂದ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ನೀರಿನ ಪಾಲಿಗೆ ಯಾವುದೇ ಧಕ್ಕೆಯಾಗುವುದಿಲ್ಲ.

“ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈ ಯೋಜನೆ ನೆರವಾಗಲಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದರೆ ಅದು ಎರಡೂ ರಾಜ್ಯಗಳ ನಡುವಿನ ಸಹಕಾರಕ್ಕೆ ದೊಡ್ಡ ಸಂಕೇತವಾಗಲಿದೆ” ಎಂದು ವಿಜಯೇಂದ್ರ ಪತ್ರದಲ್ಲಿ ತಿಳಿಸಿದ್ದಾರೆ. ಪ್ರಕೃತಿಯ ವಿಕೋಪ ಹಾಗೂ ಮುಂಗಾರು ಅಭಾವದಿಂದಾಗಿ ಎರಡೂ ರಾಜ್ಯಗಳ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಂತದಲ್ಲಿ ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕದ ಹಿತಾಸಕ್ತಿಯನ್ನು ಗೌರವಿಸುತ್ತಲೇ ತಮಿಳುನಾಡಿನ ಹಿತ ಕಾಯುವ ಪಕ್ವ ನಿಲುವು ತಳೆಯಬೇಕು ಎಂದು ವಿಜಯೇಂದ್ರ ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version