Tumakuru: ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ; ವ್ಯಕ್ತಿಗೆ ಡಬಲ್ ಶಾಕ್
ತುಮಕೂರು, ಫೆಬ್ರವರಿ 09: ಪತ್ನಿಗೆ ವಿಚ್ಛೇದನ ನೀಡದೆ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವೇಳೆ ಕಲ್ಯಾಣಮಂಟಪಕ್ಖೇ ಪೊಲೀಸರ ಜೊತೆ ನುಗ್ಗಿ ಪತಿಗೆ ಮಹಿಳೆ ಶಾಕ್ ಕೊಟ್ಟ ಘಟನೆ ನಿನ್ನೆ ತುಮಕೂರಿನ ಎಡೆಯೂರಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಅರೋಪಿ ಹರಿಪ್ರಸಾದ್ಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ಈತ ಎರಡನೇ ವಿವಾಹವಾಗಲು ಹೊರಟಿದ್ದ ಮಂಡ್ಯ ಮೂಲದ ಯುವತಿಯೂ ಈಗ ದೂರು ನೀಡಿದ್ದಾಳೆ. ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆಯಾಗ್ತಿದ್ದ ಹರಿಪ್ರಸಾದ್, ವಿವಾಹಕ್ಕೆಂದು ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು…