Headlines

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ. ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ…

Read More

ಕೋಟಿ ರೂ ಸಂಪಾದನೆ, ಡಿಸೈನ್ ಬಟ್ಟೆ ತೊಡುತ್ತಿದ್ದ ಭಾರತೀಯ ಮಹಿಳೆ, ಮೆಲ್ಬೋರ್ನ್​ನಲ್ಲಿ ಮನೆಗೆಲಸಕ್ಕೆ ಸೇರಿಕೊಂಡಾಗ… – Kannada News | Indian origin Shweta Desai goes from earning Rs 1 crore to cleaning apartments

ಈಕೆಯ ಹೆಸರು ಶ್ವೇತಾ ದೇಸಾಯಿ. ಮುಂಬೈನಲ್ಲಿ ಹುಟ್ಟಿ ಬೆಳೆದವಳು. ವಯಸ್ಸು ಈಗ 37 ವರ್ಷ. ಉನ್ನತ ವ್ಯಾಸಂಗಕ್ಕೆಂದು 2008ರಲ್ಲಿ ಲಂಡನ್​ಗೆ ಹೋದವಳು ಅಲ್ಲಿಯೇ ಬದುಕು ಮತ್ತು ವೃತ್ತಿ ಕಟ್ಟಿಕೊಂಡವಳು. 15 ವರ್ಷ ಲಂಡನ್​ನಲ್ಲಿ ಇದ್ದ ಬಳಿಕ ಆಕೆಯ ಜೀವನಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿತು. ಲಂಡನ್ ತೊರೆಯುವಾಗ ಈಕೆ ಅಲ್ಲಿ ಪಡೆಯುತ್ತಿದ್ದ ಸಂಬಳ ವರ್ಷಕ್ಕೆ ಸುಮಾರು ಒಂದು ಕೋಟಿ ರೂ. ಹಾಗಿದ್ದ ಈಕೆ ಈಗ ಆಸ್ಟ್ರೇಲಿಯಾದ ಮೆಲ್ಬೋರ್ನ್​ನಲ್ಲಿ ಅಪಾರ್ಟ್ಮೆಂಟ್ ಸ್ವಚ್ಛಗೊಳಿಸುವ ಕಾಯಕ ಮಾಡುತ್ತಿದ್ದಾಳೆ. ಹೇಗಿದ್ದವಳು, ಹೀಗೇಕಾದಳು? ಶ್ವೇತಾ ದೇಸಾಯಿ…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…

Read More

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ…

Read More

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ…

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More

ಟೀಚರ್ ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲವೆಂದು ರಸ್ತೆಯಲ್ಲಿ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ – Kannada News | Mainpuri Shocker: Student Attacks Teacher After Rejection, Biting Lips

ಮೈನ್​ಪುರಿ, ಫೆಬ್ರವರಿ 05: ನಾವು ಪ್ರೀತಿಸಿದವರು ಒಪ್ಪಿಕೊಳ್ಳಲಿಲ್ಲವೆಂದರೆ ಎಲ್ಲೇ ಇರಲಿ ಅವರು ಸುಖವಾಗಿರಲಿ ಎಂದು ಬಯಸುವುದು ನಿಜವಾದ ಪ್ರೀತಿ(Love). ಆದರೆ ಇಲ್ಲೊಬ್ಬ 12ನೇ ತರಗತಿ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿ ಮಾಡುವುದಿಲ್ಲ ಎಂದು ಗೊತ್ತಾದ ಬಳಿಕ ಆತ ರಸ್ತೆಯಲ್ಲೇ ಶಿಕ್ಷಕಿಯ ತುಟಿಯ ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಶಿಕ್ಷಕಿ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲವೆಂದು ಕ್ರೌರ್ಯದ ಎಲ್ಲಾ ಮಿತಿಗಳನ್ನು ಆತ ದಾಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಗ್ರಾಕ್ಕೆ ಕಳುಹಿಸಲಾಗಿದೆ, ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ…

Read More

ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬಿಟ್ಟು ಎತ್ತುಗಳಿಂದ ಉಳುಮೆ – Kannada News | Fuel price hike forces farmers to return to bullock plowing as tractor costs rise

ಎತ್ತುಗಳಿಂದ ಉಳುಮೆ ಮಾಡುತ್ತಿರುವುದು Image Credit source: tv9 kannada ಬೀದರ್​​, ಮೇ 25: ರಾಜ್ಯದಲ್ಲಿ ತೈಲ ಬೆಲೆ ಏರಿಕೆಯ ಬಿಸಿ (Fuel Price Hike) ಇದೀಗ ನೇರವಾಗಿ ದೇಶದ ಅಣ್ಣದಾತನಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಕೃಷಿ ಚಟುವಟಿಕೆಗಳ ವೆಚ್ಚ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದರ ದುಬಾರಿಯಾದ ಹಿನ್ನೆಲೆಯಲ್ಲಿ, ಬೀದರ್ (bidar) ಜಿಲ್ಲೆಯ ರೈತರು ಮತ್ತೆ ಹಳೆಯ ಸಾಂಪ್ರದಾಯಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲಿಗೆ ಎತ್ತುಗಳನ್ನು ಖರೀದಿಸಿ…

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More