Headlines

ರಿಹ್ಯಾಬ್‌ನಿಂದ ತಪ್ಪಿಸಿಕೊಂಡ ಯುವಕರಿಂದ ಆಟೋ ಚಾಲಕನ ದರೋಡೆ; ಮದ್ಯ ಮತ್ತು ಸಿಗರೆಟ್​​ಗಾಗಿ ಕೃತ್ಯ!

ಬೆಂಗಳೂರು, ಏಪ್ರಿಲ್ 05: ನಗರದ ಹೊರವಲಯದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿದ್ದ ಇಬ್ಬರು ಯುವಕರು ಅಪರಾಧ (Crime) ಕೃತ್ಯಕ್ಕೆ ಮುಂದಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷದ ಯುವಕ ಹಾಗೂ 17 ವರ್ಷದ ಅಪ್ರಾಪ್ತ ಸಹಚರನು ಸುಮಾರು ಒಂದು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡು, ವ್ಯಸನದ ಬೇಸರದಿಂದ ದರೋಡೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್​ಲೈನ್​ನಲ್ಲಿ ಆಟೋ ಬುಕ್ ಮಾಡಿ, ಗಂಟೆಗಳ ಕಾಲ ಅಲೆದಾಟ ಈ ಪ್ರಕರಣವು ಮಾರ್ಚ್ 5ರಂದು ಬಾಗಲೂರು ಪೊಲೀಸ್…

Read More

ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ – Kannada News | Alur Elephant Operation: Wild elephant’s Playful Start Before Rogue Capture

ಹಾಸನ, ಜನವರಿ 16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಹಾಗೂ ಸುಗ್ರೀವ ಎಂಬ ಐದು ಸಾಕಾನೆಗಳು ಆಲೂರು ತಾಲ್ಲೂಕಿನ ಬೈರಾಪುರ ತಾತ್ಕಾಲಿಕ ಆನೆ ಶಿಬಿರಕ್ಕೆ ಆಗಮಿಸಿವೆ. ಕಾರ್ಯಾಚರಣೆ ಆರಂಭಕ್ಕೂ ಮುನ್ನ ಸಾಕಾನೆಗಳ ತುಂಟಾಟ ಎಲ್ಲರ ಗಮನ ಸೆಳೆದಿದ್ದು, ಧನಂಜಯ ಹಾಗೂ ಅಯ್ಯಪ್ಪ ಆನೆಗಳು ಪರಸ್ಪರ…

Read More

ಹಿಂದಿ ಚಿತ್ರರಂಗಕ್ಕೆ ಹೊಸ ಡಾನ್ ಆಗ್ತಾರಾ ಹೃತಿಕ್ ರೋಷನ್? – Kannada News | Farhan Akhtar reportedly in talks with Hrithik Roshan for Don 3 after Ranveer Singh exit

ಈ ಮೊದಲು ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಡಾನ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಆ ಬಳಿಕ ಡಾನ್ ಆಗುವ ಅವಕಾಶ ರಣವೀರ್ ಸಿಂಗ್ (Ranveer Singh) ಅವರಿಗೆ ಸಿಕ್ಕಿತ್ತು. ಆದರೆ ಅವರು ಡಾನ್ ಆಗಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ ಹೃತಿಕ್ ರೋಷನ್ (Hrithik Roshan) ಅವರು ಮುಂದಿನ ಡಾನ್ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಹೃತಿಕ್ ರೋಷನ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ‘ಡಾನ್ 3’ (Don 3) ಚಿತ್ರತಂಡದಿಂದಲೇ…

Read More

ಬಿಲ್ ಪಾವತಿಸಲು ಲಂಚ ಪಡಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಹೆಚ್​ಒ ಕಚೇರಿ ಲೆಕ್ಕಪತ್ರ ವ್ಯವಸ್ಥಾಪಕ

ತುಮಕೂರು, ಮಾ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಆರೋಗ್ಯ ಜಾಗೃತಿ ಕಾರ್ಯಕ್ರಮದ ಬಿಲ್ ಪಾವತಿಸಲು ಎನ್​ಜಿಒ ಅಧ್ಯಕ್ಷರಿಂದ ಲಂಚ ಸ್ವೀಕರಿಸುತ್ತಿದ್ದ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 2025-26ರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ 10 ತಾಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಜಿಲ್ಲೆಯ ಹತ್ತು ತಾಲ್ಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಕುರಿತ ವಸ್ತು ಪ್ರದರ್ಶನ…

Read More

ಈ ಕೌಶಲ್ಯ ಕಲಿತರೆ ಮನೆಯಲ್ಲೇ ಕೂತ ಲಕ್ಷ ಸಂಪಾದನೆ ಸಾಧ್ಯ; ಕೆನರಾ ಬ್ಯಾಂಕ್ RSETI ಯಿಂದ ಮಹಿಳೆಯರಿಗೆ ಉಚಿತ ತರಬೇತಿ – Kannada News | Canara Bank RSETI conducting free Aari Work, Fabric Painting workshop for women at Hoskote

ಸಾಂದರ್ಭಿಕ ಚಿತ್ರImage Credit source: Afriadi Hikmal/NurPhoto via Getty Images ಹೊಸಕೋಟೆ, ಜುಲೈ 3: ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಮಹಿಳೆಯರು ಸ್ವಂತ ಕಾಲಿನ ಮೇಲೆ ನಿಲ್ಲಲು ಕೆನರಾ ಬ್ಯಾಂಕ್ ನೆರವಾಗುತ್ತಿದೆ. ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು (RSETI) ಮಹಿಳೆಯರಿಗಾಗಿ ಒಂದು ತಿಂಗಳ ಅವಧಿಯ ವಿಶೇಷ ಕೌಶಲ್ಯಾಭಿವೃದ್ಧಿ ಶಿಬಿರವನ್ನು ಹಮ್ಮಿಕೊಂಡಿದೆ. ಸಂಪೂರ್ಣ ಉಚಿತವಾಗಿ ನಡೆಯಲಿರುವ ಈ ಶಿಬಿರದಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿರುವ ‘ಎಂಬ್ರಾಯ್ಡರಿ…

Read More

ಶೀಘ್ರದಲ್ಲೇ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ: ಶೇ 25 ರ ಹೆಚ್ಚಳಕ್ಕೆ ಸಿಎಂಗೆ ಮನವಿ – Kannada News | Karnataka Bus Fare Hike: KSRTC and BMTC Seek 25 percent Ticket Price Hike Due to Rising Diesel Rates

ಕೆಎಸ್ಆರ್‌ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 22: ಕಳೆದ ವರ್ಷವಷ್ಟೇ ಜನವರಿಯಲ್ಲಿ ಶೇಕಡಾ 15 ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ಸಾರಿಗೆ ನಿಗಮಗಳು, ಇದೀಗ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಸಿವೆ. ಜಾಗತಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸರಿಸುಮಾರು 8 ರೂಪಾಯಿಯಷ್ಟು ದುಬಾರಿಯಾಗಿದೆ. ಇದರಿಂದಾಗಿ ಕೆಎಸ್ಆರ್‌ಟಿಸಿ (KSRTC), ಬಿಎಂಟಿಸಿ (BMTC), ಈಶಾನ್ಯ (NWKRTC) ಮತ್ತು ಕಲ್ಯಾಣ ಕರ್ನಾಟಕ (KKRTC) ಸಾರಿಗೆ ನಿಗಮಗಳು ತೀವ್ರ…

Read More

Gold Rate: ಬಂಗಾರ ಮತ್ತಷ್ಟು ಅಗ್ಗ; ನಿನ್ನೆ 395 ರೂ, ಇವತ್ತು 195 ರೂ ಕುಸಿತ – Kannada News

ನವದೆಹಲಿ, ಜೂನ್ 11: ನಿನ್ನೆ ಬರೋಬ್ಬರಿ 395 ರೂಗಳಷ್ಟು ಭರ್ಜರಿ ಇಳಿಕೆ ಕಂಡಿದ್ದ ಆಭರಣ ಚಿನ್ನದ ಬೆಲೆ (Gold Rates) ಇವತ್ತು ಗುರುವಾರವೂ 195 ರೂ ಕುಸಿತ ಕಂಡಿದೆ. ಎರಡು ದಿನದಲ್ಲಿ ಬಂಗಾರದ ದರ ಸುಮಾರು 600 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಭರ್ಜರಿ ಕುಸಿತವಾಗಿದೆ. ಆದರೆ, ಸತತ ಎರಡು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಗುರುವಾರ ಶಾಂತವಾಗಿದೆ. ಅದರ ಬೆಲೆ ಗ್ರಾಮ್​ಗೆ 250 ರೂನಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

ಈ ಗ್ರಾಮದ ಸೊಸೆಯಂದಿರು ಸ್ಮಾರ್ಟ್​​ಫೋನ್ ಬಳಸುವಂತಿಲ್ಲ; ಕಾರಣ ಕೇಳಿದ್ರೆ ಆಶ್ಚರ್ಯ ಪಡುತ್ತೀರ! – Kannada News | Rajasthan Panchayat bans Smartphone Usage of Women Human Rights Commission issues notice

ಜೋಧಪುರ, ಫೆಬ್ರವರಿ 18: ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್ ಜನವರಿ 26ರಿಂದ ತನ್ನ ಗ್ರಾಮದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಸ್ಮಾರ್ಟ್​​ಫೋನ್‌ಗಳನ್ನು (Smartphones) ಬಳಸುವುದನ್ನು ನಿಷೇಧಿಸಿದೆ. ಮನೆಯಲ್ಲಿ ಮಾತ್ರವಲ್ಲ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಥವಾ ನೆರೆಹೊರೆಯವರ ಮನೆಗೆ ಕೂಡ ಸ್ಮಾರ್ಟ್​​ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಸ್ಮಾರ್ಟ್​​ಫೋನ್ ಬದಲಾಗಿ, ಅವರು ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಲು ಅನುಮತಿ ನೀಡಲಾಗಿದೆ. ಲಿಂಗ ಅಸಮಾನತೆಯನ್ನು ಸೂಚಿಸುವ ಈ ನಿರ್ಧಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಗ್ರಾಮ…

Read More

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು…

Read More