ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ
ಬೆಂಗಳೂರು, ಮಾರ್ಚ್ 16: ನೈಸ್ ರಸ್ತೆಯ (NICE Road) ನಿರ್ವಹಣೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ಶಾಸಕ ಎಸ್ಟಿ ಸೋಮಶೇಖರ್ (ST Somashekhar) ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಹೊಸೂರು ರಸ್ತೆಯಿಂದ ಮಾಗಡಿ ರಸ್ತೆ ವರೆಗೆ ನೈಸ್ ರಸ್ತೆಯನ್ನು ಸರ್ಕಾರ ತಕ್ಷಣವೇ ವಶಕ್ಕೆ ಪಡೆಯಬೇಕು ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಈ ಹಿಂದೆ ಇದೇ ವಿಷಯದ ಕುರಿತು ಪ್ರಶ್ನೆ ಎತ್ತಿದಾಗ ತನಿಖೆಗೆ ಆದೇಶ ನೀಡಲಾಗಿದ್ದರೂ, ನೈಸ್ ರಸ್ತೆಯ ಸೇತುವೆಗಳ ಸ್ಥಿತಿಗೆ ಸಂಬಂಧಿಸಿದಂತೆ…