ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್ – Kannada News | Kundapura Shivamogga Bus Catches Fire at Hulikal Ghat; All 20+ Passengers Safe
ಶಿವಮೊಗ್ಗ ಫೆ.28: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್ಸಿನ…