ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!
2026ರ ಅಂಡರ್-19 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi). ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಕೇವಲ 80 ಎಸೆತಗಳನ್ನು ಎದುರಿಸಿದ ವೈಭವ್ 15 ಭರ್ಜರಿ ಸಿಕ್ಸ್ ಹಾಗೂ 15 ಫೋರ್ಗಳೊಂದಿಗೆ 175 ರನ್ ಚಚ್ಚಿದ್ದರು. ಈ ಸ್ಫೋಟಕ ಶತಕದ ನೆರವಿನಿಂದಾಗಿ ಟೀಮ್ ಇಂಡಿಯಾ 50…