ಬೈಕ್ಗೆ ಲಾರಿ ಡಿಕ್ಕಿ: ಹಿಟ್ ಆ್ಯಂಡ್ ರನ್ಗೆ ಮೂವರು ಯುವಕರು ಬಲಿ
ರಾಯಚೂರು, ಫೆಬ್ರವರಿ 28: ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ…