ಬೆಂಗಳೂರಿನಲ್ಲಿ ಪಾಸ್‌ಪೋರ್ಟ್ ದಾಖಲೆ ಪರಿಶೀಲನೆಗೆ ಹೊಸ ಮಾರ್ಗಸೂಚಿ – Kannada News | New Passport Verification Guidelines in Bengaluru: Body Worn Cameras Mandatory, Police Commissioner Issues Strict SOP
ಬೆಂಗಳೂರು, ಫೆಬ್ರವರಿ 27: ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ (Passport Verification) ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಬೆಂಗಳೂರು (Bangalore) ನಗರ ಪೊಲೀಸರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ನಿಯಮಗಳನ್ನು ಡಿಜಿ ಹಾಗೂ ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರಕಟಿಸಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಬಾಡಿ-ವೋರ್ನ್ ಕ್ಯಾಮೆರಾ (Body Worn Camera) ಧರಿಸುವುದು ಕಡ್ಡಾಯವಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ…