ಪಾಕ್ ಉಗ್ರರ ಹಿಟ್​ಲಿಸ್ಟ್​ನಲ್ಲಿ ಬಂಗಾಳದ ಸಿಎಂ; ಜಂತರ್ ಮಂತರ್ ಪ್ರತಿಭಟನೆಯೊಳಗೆ ನುಸುಳಲು ಯತ್ನಿಸಿತ್ತು ಜೈಶ್ – Kannada News | Pakistan Linked JeM terror group Plot To Target west Bengal CM, Honey Trap Ministers Son

ನವದೆಹಲಿ, ಆಗಸ್ಟ್ 1: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನೀಟ್ (NEET-UG) ಪರೀಕ್ಷೆಯ ಅಕ್ರಮಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ದುರುಪಯೋಗಪಡಿಸಿಕೊಳ್ಳಲು ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಏಜೆಂಟ್ ಮೊಹಮ್ಮದ್ ಹಮೀಮ್ ಮಂಡಲ್ ಯೋಜನೆ ರೂಪಿಸಿದ್ದ ಎಂಬ ಸಂಗತಿ ಬಯಲಾಗಿದೆ. ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆ (STF) ಈ ವಾರದ ಆರಂಭದಲ್ಲಿ ಬರ್ಧಮಾನ್‌ನಿಂದ ಹಮೀಮ್ ಮಂಡಲ್‌ನನ್ನು ಬಂಧಿಸಿತ್ತು. ಆತ ಪೊಲೀಸ್ ಸಮವಸ್ತ್ರವನ್ನು ಪಡೆದುಕೊಂಡು ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಯೋಜಿಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಸಂಚು:

ವಿಶೇಷ ಕಾರ್ಯಪಡೆಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಗೌರವ್ ಶರ್ಮಾ ಮಾತನಾಡಿ, ಹಮೀಮ್ ಮಂಡಲ್ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಗುರಿಯಾಗಿಸಲು ಯೋಜಿಸಿದ್ದ ಎಂದಿದ್ದಾರೆ. “ಹೇಗಾದರೂ ಮಾಡಿ ಪೊಲೀಸ್ ಸಮವಸ್ತ್ರವನ್ನು ಪಡೆದುಕೊಂಡು ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಯೋಜನೆ ಇತ್ತು. ಇದಲ್ಲದೆ, ಹಲವಾರು ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಗುರಿಯಾಗಿಸಲು ಯೋಜಿಸಲಾಗಿತ್ತು. ಆ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕೂಡ ಇದ್ದರು” ಎಂದು ಗೌರವ್ ಶರ್ಮಾ ಕೊಲ್ಕತ್ತಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಒಕೆಯ ದೌರ್ಜನ್ಯಗಳಿಗೆ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಿ’: ಅಂತಾರಾಷ್ಟ್ರೀಯ ಸಮುದಾಯಕ್ಕೆ ಭಾರತ ಆಗ್ರಹ

ಹಮೀಮ್ ಮಂಡಲ್ ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್‌ಐ (ISI)ನೊಂದಿಗೆ ಸಂಪರ್ಕದಲ್ಲಿದ್ದ. ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗಳ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಇತರ ಬಿಜೆಪಿ ನಾಯಕರನ್ನು ಗುರಿಯಾಗಿಸಲು ಮಂಡಲ್ ಸಂಚು ರೂಪಿಸಿದ್ದ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಆತ ರಾಜಕಾರಣಿಗಳಿಗೆ ಹನಿ-ಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಲು ಯೋಜಿಸಿದ್ದ ಎಂದಿದ್ದಾರೆ.

ಶುಕ್ರವಾರ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಿಂದ ಬಂಧಿಸಲ್ಪಟ್ಟ ಅರ್ಪಿತಾ ಸರ್ಕಾರ್ ಜೊತೆಗೂಡಿ ಮಂಡಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಬ್ಬರೂ 4 ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ನಂತರ ಪ್ರೀತಿಯಲ್ಲಿದ್ದರು. ಹಮೀಮ್ ಮಂಡಲ್ ತನ್ನ ಶಂಕಿತ ಹ್ಯಾಂಡ್ಲರ್‌ಗಳನ್ನು ಮೊದಲು ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕಿಸಿ, ನಂತರ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಸಂಭಾಷಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕರಾವಳಿ’ ಬಿಡುಗಡೆ ಆಗಿ ಹಿಟ್ ಆಗಿದೆ, ಗುರುದತ್ ಮುಂದಿನ ಪ್ಲ್ಯಾನ್ ಏನು? – Kannada News | After Karavali what is the plan, Director Gurudutt shares his vision

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿ ಹಿಟ್ ಸಹ ಆಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಿನಿಮಾ ಅನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಕರಾವಳಿ’ ಸಿನಿಮಾವನ್ನು ಯುವ ನಿರ್ದೇಶಕ ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ. ಇದು ಅವರ ಎರಡನೇ ಸಿನಿಮಾ. ‘ಕರಾವಳಿ’ ಸಿನಿಮಾ ಹಿಟ್ ಆಗಿದೆ, ಗುರುದತ್ ಅವರ ಮುಂದಿನ ಪ್ಲ್ಯಾನ್ ಏನು? ಯಾವ ರೀತಿಯ ಸಿನಿಮಾ ಅವರು ಮುಂದೆ ಮಾಡಲಿದ್ದಾರೆ. ಯಾರೊಟ್ಟಿಗೆ ಅವರು ಕೆಲಸ ಮಾಡಲಿದ್ದಾರೆ? ಟಿವಿ9 ಜೊತೆಗೆ ಅವರ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

CWG 2026: 20ನೇ ವಯಸ್ಸಿನಲ್ಲಿ ಬಂಗಾರಕ್ಕೆ ಮುತ್ತಿಟ್ಟ ಬಾಕ್ಸರ್ ಪ್ರಿಯಾ ಘಾಂಗ್ಹಾಸ್

Source link

ಭಾರೀ ಮಳೆಯಿಂದ ಉಕ್ಕಿ ಹರಿದ ತಮಿಳುನಾಡಿನ ಗುಂಡಾರ್ ಡ್ಯಾಂ ನೋಡಲು ಜನಸಾಗರ – Kannada News | Tamil Nadu Gundar Dam overflows after heavy rainfall watch video

ಚೆನ್ನೈ, ಆಗಸ್ಟ್ 1: ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಸೆಂಗೊಟ್ಟೈ ಬಳಿಯಿರುವ ಗುಂಡಾರ್ ಆಣೆಕಟ್ಟು ಭಾರಿ ಮಳೆಯಿಂದಾಗಿ ಭರ್ತಿಯಾಗಿ ಹರಿಯುತ್ತಿದ್ದು, ಡ್ಯಾಂನ ಸೌಂದರ್ಯ ಇಮ್ಮಡಿಗೊಂಡಿದೆ. ಈ ಅಣೆಕಟ್ಟನ್ನು ನೋಡಲು ಬರುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ. ಗುಂಡಾರ್ ಆಣೆಕಟ್ಟು ಭಾರತದ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ಇರುವ ಒಂದು ಸುಂದರವಾದ, ಮಧ್ಯಮ ಗಾತ್ರದ ಜಲಾಶಯವಾಗಿದೆ. 1983ರಲ್ಲಿ ನಿರ್ಮಿಸಲಾದ ಈ ಡ್ಯಾಂ ಸ್ಥಳೀಯ ಕೃಷಿ ಭೂಮಿಗೆ ಪ್ರಮುಖ ನೀರಾವರಿ ಮೂಲವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪಿಕ್ನಿಕ್, ಪ್ರಕೃತಿ ನಡಿಗೆ ಮತ್ತು ಬೋಟಿಂಗ್‌ಗಾಗಿ ಜನಪ್ರಿಯ ಪರಿಸರ ಪ್ರವಾಸೋದ್ಯಮ ತಾಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾವೇರಿಯಲ್ಲಿ ಅಮಾನವೀಯ ಕೃತ್ಯ: 9ಕ್ಕೂ ಹೆಚ್ಚು ಶ್ವಾನಗಳನ್ನ ಹತ್ಯೆಗೈದು ವಾಮಾಚಾರ ಮಾಡಿದ ದುಷ್ಕರ್ಮಿಗಳು! – Kannada News | Miscreants kill over nine dogs and perform black magic rituals

ಪ್ರಾತಿನಿಧಿಕ ಚಿತ್ರImage Credit source: Getty images

ಹಾವೇರಿ, ಆಗಸ್ಟ್​ 01: ಕೋಳಿ ಅಥವಾ ಕೋಳಿಯ ಮೊಟ್ಟೆಯನ್ನ ಬಳಸಿ ವಾಮಾಚಾರ (Black magic) ಮಾಡುವುದನ್ನ ನೋಡಿದ್ದೇವೆ. ಆದರೆ ಹಾವೇರಿ (haveri) ಜಿಲ್ಲೆಯ ಅದೊಂದು ಗ್ರಾಮದ ಬಳಿ 9ಕ್ಕೂ ಹೆಚ್ಚು ಶ್ವಾನಗಳನ್ನು ಹತ್ಯೆ ಮಾಡಿ ವಾಮಾಚಾರ ಮಾಡಲಾಗಿದೆ. ಈ ವಿಚಿತ್ರ ಘಟನೆಯಿಂದ ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಅಷ್ಟೇ ಅಲ್ಲದೆ ದುಷ್ಕರ್ಮಿಗಳ ಪತ್ತೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಡೆದಿದ್ದೇನು?

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಮಂಟಗಣಿ, ಕಳಸೂರು, ಹತ್ತಿಮತ್ತೂರು ಹಾಗೂ ಕಲ್ಲಕೋಟಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ಶ್ವಾನಗಳ ಮೃತದೇಹಗಳು ಪತ್ತೆಯಾಗಿದ್ದು, ಅವುಗಳ ಮೇಲೆ ವಾಮಾಚಾರ ಮಾಡಿದ್ದಾರೆ. ಶ್ವಾನಗಳ ಬಾಯಿಗೆ ದಾರದಿಂದ ಕಟ್ಟಲಾಗಿದ್ದು, ಕೋಳಿಯ ರೆಕ್ಕೆಗಳು ಹಾಗೂ ಕುಂಕುಮ ಹಚ್ಚಿ ವಾಮಾಚಾರ ನಡೆಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ಐದು ಹೆಣ್ಣು ಶ್ವಾನ, ನಾಲ್ಕು ಗಂಡು ಶ್ವಾನಗಳನ್ನ ಹತ್ಯೆಗೈದು ವಾಮಾಚಾರ ಮಾಡಿದ್ದಾರೆ. ಜಮೀನುಗಳಿಗೆ ತೆರಳುವ ಮೂರು ಪ್ರಮುಖ ರಸ್ತೆಗಳ ಪಕ್ಕದಲ್ಲೇ ಈ ಕೃತ್ಯ ಎಸಗಿರುವುದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ

ಜಮೀನಿಗೆ ತೆರಳಿದ ರೈತರು ಮತ್ತು ಸಾರ್ವಜನಿಕರು ವಾಮಾಚಾರ ನೋಡಿ ಆಘಾತಕ್ಕೊಳಗಾಗಿದ್ದಾರೆ. ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಮಾನವೀಯವಾಗಿ ಶ್ವಾನಗಳನ್ನು ಹತ್ಯೆ ಮಾಡಿ ವಾಮಾಚಾರ ನಡೆಸಲಾಗಿದ್ದು, ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ರೀಲ್ಸ್​​ ಹುಚ್ಚಿಗೆ ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್​​ ಮಾಡಲು ಬಂದ ಮಗಳು!

ಸದ್ಯ ಈ ವಿಚಿತ್ರ ಘಟನೆಯಿಂದ ಗ್ರಾಮಸ್ಥರು ಮಾತ್ರ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯ ಎಸಗಿದವರನ್ನು ಶೀಘ್ರ ಪತ್ತೆ ಮಾಡಿ ಬಂಧಿಸುವಂತೆ ಸ್ಥಳೀಯರು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

CWG 2026: 51 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ಬಾಕ್ಸರ್ ಸಾಕ್ಷಿ ಚೌಧರಿ – Kannada News | Sakshi Chaudhary Secures CWG Gold: India’s Boxing Sensation Shines in 51kg Final

ಸಾಕ್ಷಿ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 2015 ರಲ್ಲಿ ನಡೆದಿದ್ದ AIBA ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ, 2017 ರಲ್ಲಿ ನಡೆದಿದ್ದ ವಿಶ್ವ ಯುವ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ, 2018 ರಲ್ಲಿ ನಡೆದಿದ್ದ ವಿಶ್ವ ಯುವ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ, 2021ರಲ್ಲಿ ನಡೆದಿದ್ದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚು, 2025 ರಲ್ಲಿ ನಡೆದಿದ್ದ ವಿಶ್ವ ಬಾಕ್ಸಿಂಗ್ ಕಪ್​ನಲ್ಲಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ ವಿಶ್ವ ಬಾಕ್ಸಿಂಗ್ ಕಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದು, 8 ಬಾರಿ ರಾಷ್ಟ್ರೀಯ ಚಾಂಪಿಯನ್ ಕೂಡ ಆಗಿದ್ದಾರೆ(PC-PTI).

Source link

ಬಹಿರಂಗವಾಗಿ ಯುದ್ಧದ ಬೆದರಿಕೆ ಹಾಕುತ್ತಿರುವ ಅಮೆರಿಕ ರಹಸ್ಯವಾಗಿ ಸಂಧಾನ ಬಯಸುತ್ತಿದೆ; ಇರಾನ್‌ ಆರೋಪ – Kannada News | Donald Trump Wants Talks Secretly But Threatens War openly Iran Accuses US Of Playing Double Game

ಟೆಹ್ರಾನ್, ಆಗಸ್ಟ್ 1: ಅಮೆರಿಕವು ಇರಾನ್‌ನ ಗುರಿಗಳ ಮೇಲೆ ಮತ್ತೆ ಹೊಸದಾಗಿ ಮಿಲಿಟರಿ ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚಾಗಿದ್ದು, ಉದ್ವಿಗ್ನತೆ ಗಗನಕ್ಕೇರಿದೆ. ಈ ನಡುವೆ, ಅಮೆರಿಕ ಒಂದು ಕಡೆ ಬಹಿರಂಗವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರೆ, ಮತ್ತೊಂದೆಡೆ ರಹಸ್ಯವಾಗಿ ಇರಾನ್ (Iran War) ಜೊತೆ ಸಂಧಾನದ ಮಾತುಕತೆಗೆ ಪ್ರಯತ್ನಿಸುತ್ತಿದೆ ಎಂದು ಇರಾನ್ ಗಂಭೀರ ಆರೋಪ ಮಾಡಿದೆ. ಇರಾನ್‌ನ ಸಂಸದ ಹಸನ್ ಘಷ್ಘವಿ ಅಮೆರಿಕದ ವಿರುದ್ಧ ಈ ಆರೋಪ ಮಾಡಿದ್ದು, ವಾಷಿಂಗ್ಟನ್ ಮತ್ತಷ್ಟು ಮಿಲಿಟರಿ ದಾಳಿಯ ಬೆದರಿಕೆಗಳನ್ನು ಒಡ್ಡುವ ಮೂಲಕ ಟೆಹ್ರಾನ್ ಮೇಲೆ ತೀವ್ರ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

“ಅಮೆರಿಕ ಮಾಧ್ಯಮಗಳಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸುವ ಮಾತುಗಳನ್ನಾಡುತ್ತಿದೆ. ಆದರೆ, ಇರುವ ರಹಸ್ಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂಧಾನ ನಡೆಸುವಂತೆ ಮನವಿ ಮಾಡುತ್ತಿದೆ. ಇಂತಹ ತಂತ್ರಗಳಿಂದ ಇರಾನ್ ಅನ್ನು ವಂಚಿಸಲು ಸಾಧ್ಯವಿಲ್ಲ” ಎಂದು ಇರಾನ್ ಸಂಸದ ಹಸನ್ ಘಷ್ಘವಿ ಪ್ರತಿಕ್ರಿಯಿಸಿದ್ದಾರೆ. ವಾಷಿಂಗ್ಟನ್ ಮಿಲಿಟರಿ ದಾಳಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಅಥವಾ ಸಂಧಾನವನ್ನು ಆಯ್ಕೆ ಮಾಡಿಕೊಳ್ಳಬೇಕು. ಅದಕ್ಕೆ ಒಂದೇ ದಾರಿಯಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಇರಾನ್ ರೂಪಿಸಿರುವ ನಿಯಮ ಹಾಗೂ ಪ್ರಸ್ತಾವನೆಗಳನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದು ಘಷ್ಘವಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮೆಲಾನಿಯಾರನ್ನು ಎಲ್ಲಿ ಕೊಲ್ಲಬೇಕು?: ಟ್ರಂಪ್ ಪತ್ನಿ, ಮಗನಿಗೆ ಕೊಲೆ ಬೆದರಿಕೆ ಹಾಕಿದ ಇರಾನ್, ಭದ್ರತೆ ತೀವ್ರ ಹೆಚ್ಚಳ

ಟ್ರಂಪ್ ಹೊಸ ದಾಳಿಯ ಬೆದರಿಕೆ:

ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಮಾತುಕತೆಗಳ ನಡುವೆಯೂ, ಇರಾನ್ ವಿರುದ್ಧ ಮತ್ತೆ ಹೊಸ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಬೆನ್ನಲ್ಲೇ ಇರಾನ್‌ನಿಂದ ಈ ಹೇಳಿಕೆ ಬಂದಿದೆ. ಈ ವಾರಾಂತ್ಯದಲ್ಲಿಯೇ ಅಮೆರಿಕದಿಂದ ಹೊಸ ಸುತ್ತಿನ ದಾಳಿಗಳು ನಡೆಯಬಹುದು ಎಂದು ವರದಿಗಳು ಸೂಚಿಸಿವೆ. ಇರಾನ್ ಶರಣಾಗಿ ಕದನ ವಿರಾಮದ ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮಾಡಲು, ಅದರ ಮೇಲೆ ಮತ್ತೊಂದು ಹಂತದ ಬೃಹತ್ ದಾಳಿ ನಡೆಸಲು ಅಮೆರಿಕ ಸೇನೆಗೆ ಟ್ರಂಪ್ ಸೂಚಿಸಿದ್ದಾರೆ ಎಂದು ‘ದಿ ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ.

ಇದನ್ನೂ ಓದಿ: ಮಾತುಕತೆ ವಿಫಲವಾದರೆ ಇರಾನ್ ವಿರುದ್ಧ ಮತ್ತೆ ಕಠಿಣ ಮಿಲಿಟರಿ ದಾಳಿ, ಇರಾನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ

ಜಾಗತಿಕ ಮಾರುಕಟ್ಟೆ ಮತ್ತು ಅಮೆರಿಕದ ಅರ್ಥವ್ಯವಸ್ಥೆಯ ಮೇಲೆ ಆಗಬಹುದಾದ ತೀವ್ರ ಪರಿಣಾಮವನ್ನು ತಪ್ಪಿಸಲು ಸೋಮವಾರ ಹಣಕಾಸು ಮಾರುಕಟ್ಟೆಗಳು ಬಾಗಿಲು ತೆರೆಯುವ ಮುನ್ನವೇ ಈ ಮಿಲಿಟರಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ಇಸ್ರೇಲ್‌ಗೂ ಈ ಯೋಜನೆಯ ಮಾಹಿತಿ ನೀಡಲಾಗಿದ್ದು, ಅಮೆರಿಕದೊಂದಿಗೆ ಸಮನ್ವಯ ಸಾಧಿಸುತ್ತಿದೆ. ಆದರೆ, ದಾಳಿಗೆ ಟ್ರಂಪ್ ಇನ್ನೂ ಅಂತಿಮ ಆದೇಶ ನೀಡಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ರಾಜ್ಯದಲ್ಲಿ ರಕ್ತದ ಕೊರತೆಗೆ ಬ್ರೇಕ್: 20 ಕೋಟಿ ರೂ. ವೆಚ್ಚದಲ್ಲಿ 4 ಪ್ರಾದೇಶಿಕ ರಕ್ತ ನಿಧಿ ಕೇಂದ್ರ ಸ್ಥಾಪನೆ – Kannada News | Free Blood for BPL/APL in Government Hospitals: Karnatakas Latest Health Initiative

ಬೆಂಗಳೂರು, ಆ.1: ಕರ್ನಾಟಕದಲ್ಲಿ ರಕ್ತದ ಕೊರತೆ ನೀಗಿಸಲು ಮತ್ತು ರಕ್ತದಾನವನ್ನು ಪ್ರೋತ್ಸಾಹಿಸಲು ಆರೋಗ್ಯ ಸಚಿವ ಯು. ಟಿ. ಖಾದರ್ ಅವರು ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಯುವಜನರು ಮತ್ತು ಸಂಘ ಸಂಸ್ಥೆಗಳನ್ನು ಉತ್ತೇಜಿಸಲಾಗುವುದು. ರಕ್ತದ ಕೊರತೆಯಿಂದಾಗಿ ಯಾವುದೇ ವ್ಯಕ್ತಿ ಅಥವಾ ಕುಟುಂಬ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ಪ್ರಮುಖ ಕಾಳಜಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿರುವ ರಕ್ತ ಬ್ಯಾಂಕ್‌ಗಳನ್ನು ಬಲಪಡಿಸಲಾಗುವುದು. ಇದರ ಜೊತೆಗೆ, ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಬಳ್ಳಾರಿಯ ಭೀಮ್ಸ್ ಮತ್ತು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಾಲ್ಕು ಪ್ರಾದೇಶಿಕ ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಕೇಂದ್ರಗಳು ಸುತ್ತಮುತ್ತಲಿನ ಜಿಲ್ಲೆಗಳ ರಕ್ತದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡಲಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ರಕ್ತ ನೀಡಲಾಗುತ್ತಿದೆ. ಇದೀಗ ಎಪಿಎಲ್ ಕಾರ್ಡುದಾರರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ನೀಡುವ ಕುರಿತು ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಪೂರ್ತಿ ರಕ್ತಕ್ಕೆ 1550 ರೂಪಾಯಿ, ಪ್ಲೇಟ್ಲೆಟ್ ಮತ್ತು ಪ್ಲಾಸ್ಮಾಕ್ಕೆ 400 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಡಿಎಚ್‌ಒ ಕಚೇರಿಗೆ ದೂರು ನೀಡಲು ಸಚಿವರು ಕರೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರಾಮಾಯಣ’: ಸೀತೆಯ ಪಾತ್ರದ ಅವಕಾಶ ಬಂದಿದ್ದು ಕನ್ನಡದ ನಟಿಗೆ – Kannada News | Srinidhi Shetty also auditioned for Ramayana movie Sita character

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ, ಪ್ರಸ್ತುತ ಭಾರತೀಯ ಚಿತ್ರರಂಗದ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಎರಡೂ ಭಾಗಗಳಿಗೆ ಸೇರಿ 4000 ಕೋಟಿ ಖರ್ಚು ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಭಾರಿ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿರುವುದು ಟ್ರೈಲರ್​​ನಿಂದ ಖಾತ್ರಿ ಆಗುತ್ತಿದೆ. ಟ್ರೈಲರ್ ನೋಡಿದವರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಸೀತೆಯ ಪಾತ್ರ ನಿರ್ವಹಿಸಿರುವ ಸಾಯಿ ಪಲ್ಲವಿ ಬಗ್ಗೆ ಭಿನ್ನ-ಭಿನ್ನ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಕೆಲವರು ಸಾಯಿ ಪಲ್ಲವಿ ಸೂಕ್ತ ಆಯ್ಕೆ ಎಂದರೆ, ಇನ್ನು ಕೆಲವರು ಅಲ್ಲ ಎನ್ನುತ್ತಿದ್ದಾರೆ. ಅಂದಹಾಗೆ ‘ರಾಮಾಯಣ’ದಲ್ಲಿ ಸೀತೆ ಪಾತ್ರ ಮಾಡುವ ಅವಕಾಶ ಕನ್ನಡದ ನಟಿಗೆ ಬಂದಿತ್ತು.

ಸಾಯಿ ಪಲ್ಲವಿ, ‘ರಾಮಾಯಣ’ ಸಿನಿಮಾನಲ್ಲಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಇದೇ ಪಾತ್ರ ನಿರ್ವಹಿಸುವ ಅವಕಾಶ ಕನ್ನಡದ ನಟಿ ಶ್ರೀನಿಧಿ ಶೆಟ್ಟಿಗೆ ಸಹ ಒದಗಿ ಬಂದಿತ್ತು. ಆದರೆ ಅವರೇನು ಪಾತ್ರವನ್ನು ರಿಜೆಕ್ಟ್ ಮಾಡಲಿಲ್ಲ ಆದರೆ ಅವರಿಗೆ ಅದೃಷ್ಟ ಕೈಕೊಟ್ಟಿತು. ಅವರೇ ಹಿಂದೊಮ್ಮೆ ಹೇಳಿಕೊಂಡಂತೆ ಶ್ರೀನಿಧಿ ಶೆಟ್ಟಿ ಅವರು ‘ರಾಮಾಯಣ’ ಸಿನಿಮಾದ ಸೀತೆಯ ಪಾತ್ರಕ್ಕಾಗಿ ಆಡಿಷನ್ ನೀಡಿದ್ದರಂತೆ. ಆದರೆ ಯಾವ ಕಾರಣಕ್ಕೋ ಏನೋ ಪಾತ್ರ ಅವರಿಗೆ ಸಿಕ್ಕಿಲ್ಲ, ಬದಲಿಗೆ ಸಾಯಿ ಪಲ್ಲವಿ ಅವರ ಪಾಲಾಗಿದೆ.

ಶ್ರೀನಿಧಿ ಶೆಟ್ಟಿ ಸಹ ಬಹಳ ಒಳ್ಳೆಯ ನಟಿ ಮತ್ತು ಸುಂದರಿ ಸಹ. ಸಪೂರ ದೇಹದ, ಕೋಲು ಮುಖದ ಅವರು ಖಂಡಿತ ಸೀತೆಯ ಪಾತ್ರಕ್ಕೆ ಚೆನ್ನಾಗಿ ಒಪ್ಪುತ್ತಿದ್ದರು. ಆದರೆ ಅದೃಷ್ಟ ಅವರ ಪರ ಇರಲಿಲ್ಲ. ಪಾತ್ರ ಸಾಯಿ ಪಲ್ಲವಿ ಪಾಲಾಗಿದೆ. ಸಾಯಿ ಪಲ್ಲವಿ ಸಹ ಟ್ರೈಲರ್​​ನಲ್ಲಿ ಅದ್ಭುತವಾಗಿ ಕಾಣುತ್ತಿದ್ದಾರೆ. ಆದರೆ ಕೆಲವರು ಸಾಯಿ ಪಲ್ಲವಿ ಅವರ ಆಯ್ಕೆಯ ಬಗ್ಗೆ ಚಕಾರ ಎತ್ತಿದ್ದಾರೆ. ಅವರ ಗುಂಗುರು ಕೂದಲಿನ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ರಾಮಾಯಣ ಟ್ರೇಲರ್ ರಿಲೀಸ್ ಬಳಿಕ ಟ್ರೋಲ್ ಆದ ಸಾಯಿ ಪಲ್ಲವಿ; ಕಾರಣ ಏನು?

‘ರಾಮಾಯಣ’ ಸಿನಿಮಾವು ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ರಣ್​​ಬೀರ್ ಕಪೂರ್ ರಾಮನಾಗಿ, ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರಕುಲ್ ಶೂರ್ಪನಕಿಯಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತರಾದ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಅವರುಗಳು ಸಂಗೀತ ನೀಡಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:35 pm, Sat, 1 August 26

Source link

ತಮಿಳು, ಹಿಂದಿ ಬಳಿಕ ತೆಲುಗಿಗೆ ಡಬ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ – Kannada News | Kannada movie Second case of Seetharam now available in Telugu also

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂಬರ್ 18’ ಸಿನಿಮಾ ದೊಡ್ಡ ಯಶಸ್ಸು ಗಳಿಸಿತು. ವಿಜಯ್ ರಾಘವೇಂದ್ರ ಅವರ ನಟನೆ, ಸಿನಿಮಾದಲ್ಲಿದ್ದ ಸಸ್ಪೆನ್ಸ್ ಎಲ್ಲವೂ ಸಹ ಪ್ರೇಕ್ಷಕರನ್ನು ಸೆಳೆದಿತ್ತು. ಚಿತ್ರಮಂದಿರದಲ್ಲಿ ಸಾಧಾರಣ ಹಿಟ್ ಆದರೂ ಬಳಿಕ ಒಟಿಟಿಯಲ್ಲಿ ಸಿನಿಮಾಕ್ಕೆ ದೊಡ್ಡ ಯಶಸ್ಸು ದೊರಕಿತ್ತು. ಅದೇ ಸಿನಿಮಾದ ಮುಂದುವರೆದ ಭಾಗ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾಕ್ಕೂ ಒಟಿಟಿಯಲ್ಲಿ ಭರ್ಜರಿ ಪ್ರತಿಕ್ರಿಯೆ ದೊರಕುತ್ತಿದೆ. ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೆ ಸಿನಿಮಾ ಅನ್ನು ತೆಲುಗಿಗೆ ಡಬ್ ಮಾಡಲಾಗಿದೆ.

‘ಸೆಕೆಂಡ್ ಕೇಸ್ ಆರ್ಫ ಸೀತಾರಾಮ್’ ಸಿನಿಮಾ ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಕೇವಲ ಕನ್ನಡ ಭಾಷೆಯಲ್ಲಿ ಮಾತ್ರವೇ ರಿಲೀಸ್ ಆಗಿತ್ತು. ಆ ನಂತರ ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಬಿಡುಗಡೆ ಆಯ್ತು. ಆಗ ಕನ್ನಡದ ಜೊತೆಗೆ ತಮಿಳು ಮತ್ತು ಹಿಂದಿ ಭಾಷೆಗಳಲ್ಲೂ ಸಿನಿಮಾ ಲಭ್ಯವಿತ್ತು. ಅಮೆಜಾನ್​​​ನಲ್ಲಿ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾದ ಬಳಿಕ ಇದೀಗ ಸಿನಿಮಾ ಅನ್ನು ತೆಲುಗಿಗೂ ಡಬ್ ಮಾಡಲಾಗಿದೆ.

ಇಷ್ಟು ದಿನ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಅಮೆಜಾನ್ ಪ್ರೈಂನಲ್ಲಿ ಲಭ್ಯವಿತ್ತು, ಆದರೆ ಈಗ ತೆಲುಗು ಭಾಷೆಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ತೆಲುಗು ಪ್ರೇಕ್ಷಕರು ಸಸ್ಪೆನ್ಸ್ ಥ್ರಿಲ್ಲರ್, ಕ್ರೈಂ ಥ್ರಿಲ್ಲರ್ ಸಿನಿಮಾಗಳನ್ನು ಹೆಚ್ಚು ವೀಕ್ಷಿಸುತ್ತಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ನಡೆಯುವ ಕ್ರೈಂ ಥ್ರಿಲ್ಲರ್ ಸಿನಿಮಾಗಳು ತೆಲುಗು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗುತ್ತದೆ. ಇದೇ ಕಾರಣಕ್ಕೆ ಈಗ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ತಿಂಗಳುಗಳ ನಂತರ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಲಾಗಿದೆ.

ಇದನ್ನೂ ಓದಿ:‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು

‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾನಲ್ಲಿ ವಿಜಯ್ ರಾಘವೇಂದ್ರ ನಾಯಕ. ಗೋಪಾಲ್ ದೇಶಪಾಂಡೆ, ಸಾಗರ್ ಪುರಾಣಿಕ್, ಉಷಾ ಬಂಢಾರಿ ಇನ್ನೂ ಹಲವಾರು ಕಲಾವಿದರು ನಟಿಸಿದ್ದಾರೆ. ಸಿನಿಮಾ ಅನ್ನು ದೇವಿಶ್ರೀ ಪ್ರಸಾದ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣವೂ ಅವರದ್ದೆ. ವಿಜಯ್ ರಾಘವೇಂದ್ರ ಅವರ ವೃತ್ತಿ ಜೀವನಕ್ಕೆ ಹೊಸ ತಿರುವು ನೀಡಿದ ಸಿನಿಮಾ ಇದೆನ್ನಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version