MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್ – Kannada News | Desert Vipers won their maiden ILT20 title
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡಕ್ಕೆ ಸೋಲುಣಿಸಿ ಡೆಸರ್ಟ್ ವೈಪರ್ಸ್ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ ಪರ ನಾಯಕ ಸ್ಯಾಮ್ ಕರನ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಅರ್ಧಶತಕದ…