ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ
ಖ್ಯಾತ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ (Badshah) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ…