ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar manjra river in bidar faces crisis illegal sand mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ…

Read More

Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ – Kannada News | Office Desk Vastu: Avoid These 5 Things for Success and Prosperity

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ಯಶಸ್ಸನ್ನು ಬಯಸುತ್ತಾರೆ, ಆದರೆ ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ, ಅಪೇಕ್ಷಿತ ಫಲಿತಾಂಶಗಳು ಅಥವಾ ಪ್ರಗತಿಯನ್ನು ಸಾಧಿಸಲಾಗುವುದಿಲ್ಲ, ಇದು ನಿರಾಶೆಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರವು ಕಚೇರಿ ಕೇವಲ ಕೆಲಸ ಮಾಡುವ ಸ್ಥಳವಲ್ಲ, ಆದರೆ ವ್ಯಕ್ತಿಯ ವೃತ್ತಿಪರ ಶಕ್ತಿ ಮತ್ತು ಉತ್ಪಾದಕತೆಯ ಕೇಂದ್ರವಾಗಿದೆ ಎಂದು ಹೇಳುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಕಚೇರಿ ಮೇಜಿನ ಮೇಲೆ ಇಡುವುದರಿಂದ ಪ್ರಗತಿ, ಆರ್ಥಿಕ ಲಾಭ ಮತ್ತು ಮಾನಸಿಕ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವಾಸ್ತುವಿನ ಆಧಾರದ…

Read More

ಬಿಗ್ ಬಾಸ್ ಫಿನಾಲೆ ಯಾವಾಗ? ಇನ್ನೂ ಎಷ್ಟು ಎಲಿಮಿನೇಷನ್ ನಡೆಯುತ್ತೆ? – Kannada News | Bigg Boss Kannada 12 Finale: Date, Eliminations, Winner name and Prize Money Revealed

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹಂತ ತಲುಪಿದೆ. ಕಳೆದ ಕೆಲವು ವಾರಗಳಿಂದ ಈ ಶೋ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬರುತ್ತಿದೆ. ಈಗ ಶೋ ಕೊನೆ ಆಗುವ ಹಂತ ತಲುಪಿದೆ. ಜನವರಿ 17 ಹಾಗೂ 18ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಅದಕ್ಕೂ ಮೊದಲು ಎಷ್ಟು ಎಲಿಮಿನೇಷನ್ ನಡೆಯುತ್ತದೆ? ಫಿನಾಲೆ ಯಾವ ರೀತಿಯಲ್ಲಿ ನಡೆಯುತ್ತದೆ ಎಂಬ ಬಗ್ಗೆ ಇಲ್ಲಿದೆ ವಿವರ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಈಗ 15ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ದೊಡ್ಮನೆಯಲ್ಲಿ…

Read More

ಭಕ್ತರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಇರುವುದಿಲ್ಲ – Kannada News

ಕೊಲ್ಲೂರು, ಜೂ.11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ (ಜೂನ್ 12, ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಣೆಯನ್ನು ಹೊರಡಿಸಿದೆ….

Read More

11 ದಿನಕ್ಕೆ 47 ಸಿನಿಮಾ ಸಹಿ ಹಾಕಿದ ನಟ; ನಂತರ ಆಸ್ಪತ್ರೆ ಬಿಲ್ ಕಟ್ಟಲೂ ದುಡ್ಡಿರಲಿಲ್ಲ – Kannada News

1990ರಲ್ಲಿ ಬಿಡುಗಡೆಯಾದ ‘ಆಶಿಕಿ’ ಚಿತ್ರದ ಮೂಲಕ ನಟ ರಾಹುಲ್ ರಾಯ್ ಒಂದೇ ರಾತ್ರಿಯಲ್ಲಿ ಬಾಲಿವುಡ್‌ನ ಸೂಪರ್‌ಸ್ಟಾರ್ ಆಗಿ ಹೊರಹೊಮ್ಮಿದರು. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿ ದೊಡ್ಡ ಮ್ಯೂಸಿಕಲ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗುವ ಮೂಲಕ, ಅವರನ್ನು ದೇಶದ ಯುವಕರ ದಿಕ್ಸೂಚಿಯನ್ನಾಗಿ ಮಾಡಿತು. ರಾಹುಲ್ ರಾಯ್ ಅವರ ಕ್ರೇಜ್ ಎಷ್ಟಿತ್ತೆಂದರೆ, ಅಭಿಮಾನಿಗಳು ತಮ್ಮ ಮಲಗುವ ಕೋಣೆಗಳಲ್ಲಿ ಅವರ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದರು. ಈ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಅವರು ಕೇವಲ 11 ದಿನಗಳಲ್ಲಿ ಬರೋಬ್ಬರಿ 47 ಸಿನಿಮಾಗಳಿಗೆ ಸಹಿ ಹಾಕುವ ಮೂಲಕ…

Read More

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ – Kannada News | Dhruvanth overacting in front of Ashwini Gowda in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್​ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ…

Read More

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ರಾಮನಗರ, (ಮಾರ್ಚ್ 31): ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 80 ವರ್ಷದ ಪಾರ್ವತಮ್ಮ ಮೃತದೇಹದ ಹತ್ತಿರ ಕಪಿರಾಯ ಕುಳಿತುಕೊಂಡು ಮನುಷ್ಯರ ರೀತಿ ಮುಖಕ್ಕೆ ಮುಖ ಕೊಡುತ್ತ ಕಣ್ಣೀರು ಹಾಕಿದ್ದಾನೆ. ಈ ದೃಶ್ಯ ನೋಡುಗರ ಕಣ್ಣಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು. ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನ…

Read More

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ – Kannada News | Mysuru Sculptor Arun Yogiraj Carved the Statue of Late Shamanur Shivashankarappa

ಮೈಸೂರು, ಡಿಸೆಂಬರ್​ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್…

Read More

WPL 2026: ಡಬ್ಲ್ಯುಪಿಎಲ್​ನಿಂದ ಹೊರಬಿದ್ದ ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್

2026 ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 9 ರಿಂದ ಆರಂಭವಾಗಿದೆ. ಆದರೆ ಟೂರ್ನಿ ಆರಂಭದ ದಿನವೇ ಗುಜರಾತ್ ಜೈಂಟ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಇದು ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದ ಕಾರಣದಿಂದಾಗಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹೊರಬಿದ್ದಿದ್ದಾರೆ. ಈ ಹಿಂದೆ ನಡೆದಿದ್ದ ಡಬ್ಲ್ಯುಪಿಎಲ್ ಮಿನಿ ಹರಾಜಿನಲ್ಲಿ ಗುಜರಾತ್ ಜೈಂಟ್ಸ್ ತಂಡವು…

Read More