ನಕಲಿ ಪ್ರಶ್ನೆಪತ್ರಿಕೆ ಹಾವಳಿ: ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB – Kannada News | KSEAB Alerts Students Against Fake 2nd PUC Question Papers
ಬೆಂಗಳೂರು, ಫೆಬ್ರವರಿ 26: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೌಂಟ್ಡೌನ್ ನಡುವೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಂಚುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರನ್ನು ಪತ್ತೆಹಚ್ಚಲು ಸೈಬರ್ ಪೊಲೀಸರಿಗೆ ದೂರು ನೀಡೋದಾಗಿಯೂ ತಿಳಿಸಿದ್ದಾರೆ. ಕರ್ನಾಟಕ ಬೋರ್ಡ್ SSLC ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದರೆ,…