ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ – Kannada News | Pakistan ISI backed terror network busted in Delhi 7 arrested

ನವದೆಹಲಿ, ಜೂನ್ 16: ದೇಶದ ಭದ್ರತಾ ಸಂಸ್ಥೆಗಳ ನಿರಂತರ ನಿಗಾ ಮತ್ತು ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೆಹಲಿಯಲ್ಲಿ (Delhi) ಸಂಭವಿಸಬೇಕಿದ್ದ ಭಾರಿ ದುರಂತವೊಂದು ತಪ್ಪಿದೆ. ಪಾಕಿಸ್ತಾನದ ನೆರವಿನಿಂದ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಅಂತಾರಾಷ್ಟ್ರೀಯ ಉಗ್ರ ಜಾಲದ 7 ಜನ ಸಕ್ರಿಯ ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಬ್ಬಗಳ ಸಂದರ್ಭದಲ್ಲಿ ದೆಹಲಿ ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದೆಹಲಿಯ ವಿವಿಧ ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ವಿಶೇಷ ಪೊಲೀಸ್ ಪಡೆಗಳು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಉಗ್ರರ ಅಡಗುದಾಣಗಳಿಂದ ಆಘಾತಕಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರಿ ಪ್ರಮಾಣದ ಜೀವಂತ ಗುಂಡುಗಳು, ವಿವಿಧ ರೀತಿಯ ಸ್ಫೋಟಕ ಸಾಮಗ್ರಿಗಳು ಮತ್ತು ಸುಧಾರಿತ ತಂತ್ರಜ್ಞಾನದ ಸಂವಹನ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಆಯುಧಗಳನ್ನು ಗಡಿ ಭಾಗದ ಮೂಲಕ ಸಾಗಿಸಿ, ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲೆಂದೇ ತಲುಪಿಸಲಾಗಿತ್ತು ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ವೃದ್ಧೆಗೂ ಇಲ್ಲ ಭದ್ರತೆ; ಕಣ್ಣು ಕಾಣದ 70 ವರ್ಷದ ದೆಹಲಿಯ ಮಹಿಳೆ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನ

ಪೊಲೀಸ್ ತನಿಖೆಯ ಪ್ರಕಾರ, ಬಂಧಿತ ಆರೋಪಿಗಳು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಹಾಗೂ ಅಲ್ಲಿನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಇವರಿಗೆ ಎನ್‌ಕ್ರಿಪ್ಟೆಡ್ ಸೋಶಿಯಲ್ ಮೀಡಿಯಾ ಆಪ್‌ಗಳ (ಉದಾಹರಣೆಗೆ ಟೆಲಿಗ್ರಾಂ, ಸಿಗ್ನಲ್) ಮೂಲಕ ಪಾಕಿಸ್ತಾನದಿಂದಲೇ ಬಾಂಬ್ ತಯಾರಿಕೆ ಮತ್ತು ವಿಧ್ವಂಸಕ ಕೃತ್ಯಗಳ ತರಬೇತಿ ನೀಡಲಾಗಿತ್ತು.

ಈ ಜಾಲವನ್ನು ಸಕ್ರಿಯವಾಗಿಡಲು ಹವಾಲಾ ಚಾನೆಲ್‌ಗಳ ಮೂಲಕ ಮತ್ತು ಕ್ರಿಪ್ಟೋಕರೆನ್ಸಿ ಬಳಸಿ ಪಾಕಿಸ್ತಾನದಿಂದ ಭಾರಿ ಪ್ರಮಾಣದ ಹಣ ಹರಿದುಬಂದಿರುವುದನ್ನು ಬ್ಯಾಂಕ್ ಖಾತೆಗಳ ಪರಿಶೀಲನೆಯಿಂದ ಪತ್ತೆಹಚ್ಚಲಾಗಿದೆ. ಈ ಉಗ್ರ ಜಾಲ ಪತ್ತೆಯಾದ ಬೆನ್ನಲ್ಲೇ ನವದೆಹಲಿ ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ರೈಲ್ವೆ ನಿಲ್ದಾಣಗಳು, ಮೆಟ್ರೋ ಸ್ಟೇಷನ್‌ಗಳು, ವಿಮಾನ ನಿಲ್ದಾಣ ಹಾಗೂ ಮಾಲ್‌ಗಳಂತಹ ಜನನಿಬಿಡ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೋರ್ಟ್ ತೀರ್ಪು ಬರೋ ಮುನ್ನವೇ ಮಡಿವಾಳ ಬಾಂಬ್ ಸ್ಫೋಟ ಕೇಸ್‌ನ ಶಂಕಿತ ಉಗ್ರ ಸಾವು

ಬಂಧಿತ 7 ಮಂದಿ ಉಗ್ರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇವರ ಹಿಂದೆ ದೇಶದೊಳಗೆ ಬೇರೆ ಯಾರಾದರೂ ಸ್ಥಳೀಯ ಸಹಚರರು ಇದ್ದಾರೆಯೇ ಎಂಬ ನಿಟ್ಟಿನಲ್ಲಿ ತನಿಖೆ ತೀವ್ರಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 2ನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Netherlands Women’s T20 WC: Match Preview, Squads and Live Stream Details

2026 ರ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) 10ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ (India vs Netherlands) ಮಹಿಳಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಲೀಗ್​ನಲ್ಲಿ ಎರಡು ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಹೀಗಾಗಿ ಹರ್ಮನ್‌ಪ್ರೀತ್ ಪಡೆ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧದ ಸೋಲಿನಿಂದ ಹೊರಬಂದಿರುವ ನೆದರ್ಲ್ಯಾಂಡ್ಸ್, ತನ್ನ ಗೆಲುವಿನ ಖಾತೆಯನ್ನು ತೆರೆಯುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಜೂನ್ 17 ರ ಬುಧವಾರದಂದು ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು

ಉಭಯ ತಂಡಗಳು

ನೆದರ್ಲ್ಯಾಂಡ್ಸ್ ಮಹಿಳಾ ತಂಡ: ಬಾಬೆಟ್ ಡಿ ಲೀಡೆ (ನಾಯಕ), ಕ್ಯಾರೊಲಿನ್ ಡಿ ಲ್ಯಾಂಗೆ, ಫ್ರೆಡೆರಿಕ್ ಓವರ್‌ಡಿಜ್ಕ್, ಹನ್ನಾ ಲ್ಯಾಂಡ್‌ಹೀರ್, ಹೀದರ್ ಸೆಗರ್ಸ್, ಐರಿಸ್ ಜ್ವಿಲ್ಲಿಂಗ್, ಇಸಾಬೆಲ್ಲೆ ವ್ಯಾನ್ ಡೆರ್ ವೊನಿಂಗ್, ಲಾರಾ ಲೀಮ್‌ಹುಯಿಸ್, ಮಿರ್ತೆ ವ್ಯಾನ್ ಡೆನ್ ರಾಡ್, ಫೆಬೆ ಮೊಲ್ಕೆನ್‌ಬೋರ್, ರಾಬಿನ್ ರಿಜ್ಕೆರ್ಯಾ, ರೊಸಾಲಿ ಕ್ವೆರೆನಾ, ರೊಸಾಲೀ ಕ್ವೆರ್ರೆನಾ ಕಾಲಿಸ್.

ಭಾರತೀಯ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೇಯಾಂಕ ಪಾಟೀಲ್, ರಾಧಾ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:36 pm, Tue, 16 June 26

Source link

ಅಂಬಾನಿ ನೀಡಿದ 2.2 ಕೋಟಿ ರೂಪಾಯಿ ಬೆಲೆಯ ಬ್ರೇಸ್​ಲೆಟ್ ಧರಿಸಿ ಮಿಂಚಿದ ರಿಯಾನಾ – Kannada News | Global singer Rihanna shows off Ambani gifted Jewelry in viral video

ಜಾಗತಿಕ ಮ್ಯೂಸಿಕ್ ಐಕಾನ್ ರಿಯಾನಾ ಮತ್ತು ಭಾರತದ ಶ್ರೀಮಂತ ಉದ್ಯಮಿ ಅಂಬಾನಿ (Mukesh Ambani) ಕುಟುಂಬದ ನಡುವಿನ ಸ್ನೇಹ ಈಗ ಮತ್ತೆ ಸುದ್ದಿಯಲ್ಲಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈನ ಅಂಬಾನಿ ನಿವಾಸಕ್ಕೆ ಭೇಟಿ ನೀಡಿದ್ದ ರಿಯಾನಾ ಅವರಿಗೆ, ಅಂಬಾನಿ ಕುಟುಂಬದವರು ಅತ್ಯಂತ ಬೆಲೆಬಾಳುವ ವಜ್ರದ ಬ್ರೇಸ್ಲೆಟ್ ಉಡುಗೊರೆಯಾಗಿ ನೀಡಿದ್ದರು. ಆ ಬಗ್ಗೆ ಈಗ ರಿಯಾನಾ (Rihanna) ಅವರು ಮಾತನಾಡಿದ್ದಾರೆ. ವಜ್ರದ ಬ್ರೇಸ್ಲೆಟ್ ಬೆಲೆ ಎಷ್ಟು ಎಂಬುದು ತಿಳಿದು ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಅದರ ಬೆಲೆ ಬರೋಬ್ಬರಿ 2.2 ಕೋಟಿ ರೂಪಾಯಿ!

ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ರಿಯಾನಾ ಈ ಸುಂದರವಾದ ಬ್ರೇಸ್ಲೆಟ್ ಅನ್ನು ಅಭಿಮಾನಿಗಳಿಗೆ ತೋರಿಸಿದ್ದಾರೆ. ‘ದಿ ಪೀಪಲ್ ಗ್ಯಾಲರಿ’ ಎಂಬ ಇನ್‌ಸ್ಟಾಗ್ರಾಮ್ ಪೇಜ್ ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ರಿಯಾನಾ ಅವರು ತಮ್ಮ ಅಂದಿನ ಫ್ಯಾಷನ್ ಮತ್ತು ಉಡುಪಿನ ಬಗ್ಗೆ ವಿವರಿಸುತ್ತಿದ್ದರು. ಡಬಲ್-ಡೆನಿಮ್ ಔಟ್‌ಫಿಟ್ ಧರಿಸಿದ್ದ ಅವರು, ತಮ್ಮ ಕೈಯಲ್ಲಿದ್ದ ವಜ್ರದ ಬ್ರೇಸ್ಲೆಟ್ ಅನ್ನು ಕ್ಯಾಮೆರಾ ಹತ್ತಿರ ತಂದು, ‘ಇದು ಭಾರತದ ಅಂಬಾನಿ ಕುಟುಂಬದವರು ನೀಡಿದ್ದು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಸೆಲೆಬ್ರಿಟಿ ಜ್ಯುವೆಲ್ಲರಿ ಎಕ್ಸ್‌ಪರ್ಟ್ ಪ್ರಿಯಾಂಶು ಗೋಯಲ್ ಅವರ ಪ್ರಕಾರ, ಈ ವಜ್ರದ ಟೆನ್ನಿಸ್ ಬ್ರೇಸ್ಲೆಟ್​ನ ಅಂದಾಜು ಮೊತ್ತ ಸುಮಾರು 2.2 ಕೋಟಿ ರೂಪಾಯಿಗಳು. ಇದು ಅತ್ಯಂತ ಸರಳ, ಸುಂದರ ಮತ್ತು ಕಾಲಾತೀತ ವಿನ್ಯಾಸವನ್ನು ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಿಯಾನಾ ಮತ್ತು ಅಂಬಾನಿ ಕುಟುಂಬದ ನಡುವಿನ ಒಡನಾಟಕ್ಕೆ ಈ ಉಡುಗೊರೆಯೇ ಸಾಕ್ಷಿಯಾಗಿದೆ.

ರಿಯಾನಾ ವೈರಲ್ ವಿಡಿಯೋ:

ಈ ವಿಡಿಯೋದಲ್ಲಿ ರಿಯಾನಾ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ಹಂಚಿಕೊಂಡಿದ್ದಾರೆ. ತಾವು ಧರಿಸಿರುವ ಮೇಕಪ್ ಮತ್ತು ಕೇಶವಿನ್ಯಾಸವನ್ನು ಯಾವುದೇ ಗ್ಲಾಮ್ ಟೀಮ್ ಸಹಾಯವಿಲ್ಲದೆ ತಾವೇ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಅವರು ತಮ್ಮದೇ ಸ್ವಂತ ಬ್ರ್ಯಾಂಡ್ ಆದ ‘ಫೆಂಟಿ ಬ್ಯೂಟಿ’ ಉತ್ಪನ್ನಗಳನ್ನು ಬಳಸಿದ್ದಾರೆ.

ಇದನ್ನೂ ಓದಿ: 6ನೇ ವರ್ಷವೂ ಸಂಬಳ ಬೇಡ ಎಂದ ಮುಕೇಶ್ ಅಂಬಾನಿ; ಏಷ್ಯಾದ ಅತಿ ಶ್ರೀಮಂತ ಉದ್ಯಮಿಗೆ ಆದಾಯ ಎಲ್ಲಿಂದ?

ರಿಯಾನಾ ಅವರು ಏಪ್ರಿಲ್ ತಿಂಗಳಲ್ಲಿ ತಮ್ಮ ಬ್ಯೂಟಿ ಬ್ರ್ಯಾಂಡ್ ಕೆಲಸದ ನಿಮಿತ್ತ ಮುಂಬೈಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರು ಅಂಬಾನಿ ನಿವಾಸದಲ್ಲಿ ಆರತಿ ಬೆಳಗಿ, ಭಾರತೀಯ ಸಂಪ್ರದಾಯದಂತೆ ಸಂಭ್ರಮಿಸಿದ್ದರು. 2024ರಲ್ಲಿ ಜಾಮ್‌ನಗರದಲ್ಲಿ ನಡೆದ ಅಂಬಾನಿ ಕುಟುಂಬದ ಕಾರ್ಯಕ್ರಮದಲ್ಲಿ ರಿಯಾನಾ ಅವರ ಪ್ರದರ್ಶನ ಇಡೀ ವಿಶ್ವದ ಗಮನ ಸೆಳೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ – Kannada News | World Day to Combat Desertification and Drought 2026: What is the purpose of the World Day for the Prevention of Desertification and Drought?

ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ Image Credit source: vecteezy

ಅರಣ್ಯ ನಾಶ, ನಗರೀಕರಣದಂತಹ ಮಾನವನ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆ (Climate change), ಜಾಗತಿಕ ತಾಪಮಾನದ ಕಾರಣದಿಂದಾಗಿ ಭೂಮಿ ಬರಡಾಗುತ್ತಿದ್ದು, ಫಲವತ್ತತೆ ಅವನತಿಯ ಹಂತ ತಲುಪುತ್ತಿದೆ. ಬಹಳಷ್ಟು ಪ್ರದೇಶಗಳು ಮರುಭೂಮಿಗಳಾಗಿ ಬದಲಾಗುವ ಅಂಚಿಗೆ ತಲುಪಿವೆ. ಇದಕ್ಕೆ ಉದಾಹರಣೆಯೆಂಬಂತೆ ಮುಂಗಾರು ಆರಂಭವಾಗಿ ಒಂದೆರಡು ವಾರ ಕಳೆದ್ರೂ ಈ ಬಾರಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಡ್ಯಾಮ್‌ಗಳೆಲ್ಲಾ ಬರಿದಾಗುತ್ತಿದ್ದು, ಬರದ ಛಾಯೆ ಮೂಡುತ್ತಿದೆ. ಈ ಬರಗಾಲ ಪರಿಸ್ಥಿತಿ ಜಗತ್ತಿಗೆ ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ, ಬರಗಾಲ ಮತ್ತು ಮರುಭೂಮೀಕರಣದ ಪರಿಣಾಮಗಳನ್ನು ತಡೆಗಟ್ಟಲು ಪ್ರತಿವರ್ಷ ಜೂನ್‌ 17 ರಂದು ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನದ ಇತಿಹಾಸವೇನು?

ಮರುಭೂಮೀಕರಣ ಮತ್ತು ಬರಗಾಲ ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಈ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ 1994 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ಪರಿಸರ ಅವನತಿ ಮತ್ತು ಮರುಭೂಮೀಕರಣವನ್ನು ಎದುರಿಸಲು  ವಿಶ್ವಸಂಸ್ಥೆಯ ಸಮಾವೇಶವನ್ನು (UNCCD) ಅಂಗೀಕರಿಸಿತು. ಆ ದಿನದಂದು ಜೂನ್‌ 17 ರಂದು ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸಲಾಗುವುದು ಎಂದು ಘೋಷಿಸಲಾಯಿತು. ಈ ದಿನವನ್ನು ಮೊದಲು 1995 ರಲ್ಲಿ ಆಚರಿಸಲಾಯಿತು. ಮತ್ತು  ಅಂದಿನಿಂದ ಈ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ವಿಶ್ವ ಪವನ ದಿನಾಚರಣೆಯ ಉದ್ದೇಶವೇನು?

ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನದ ಮಹತ್ವವೇನು?

  • ಮರುಭೂಮೀಕರಣ ಮತ್ತು ಬರಗಾಲದಿಂದಾಗಿ ಜಗತ್ತಿನಲ್ಲಿ ಎಷ್ಟು ಸಮಸ್ಯೆಗಳು ಎದುರಾಗುತ್ತಿವೆ ಮತ್ತು ಅವುಗಳನ್ನು ಹೇಗೆ ನಿಭಾಯಿಸಬಹುದು ಎಂಬುದನ್ನು ಜನರಿಗೆ ಅರ್ಥಮಾಡಿಸಲು ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನದ ಮಹತ್ವವೆಂದರೆ, ಪ್ರಪಂಚದಾದ್ಯಂತ ಭೂ ದುರುಪಯೋಗ, ಮರುಭೂಮಿೀಕರಣ ಮತ್ತು ಬರಗಾಲದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮತ್ತು ಅವುಗಳನ್ನು ಹೇಗೆ ಪರಿಹರಿಸಬಹುದು ಎಂಬುದರ ಕುರಿತು ಜನರಿಗೆ ಶಿಕ್ಷಣ ನೀಡುವುದು. ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಜನರು ಒಟ್ಟಾಗಿ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಇದು ಜಾಗೃತಿ ಮೂಡಿಸುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ – Kannada News | Minister Yathindra Siddaramaiah gets chance to Sit On Stage of CLP Meeting

ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್​ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ ಮಾಡುವುದು ಹೇಗೆ ಎಂದು ಮಾಹಿತಿ ನೀಡಲಾಗುತ್ತಿದೆ.

ಇನ್ನು ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದ್ದು, ಈ ಸಂಬಂಧ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೀಟ್ ಪರೀಕ್ಷೆಗೆ ಮಿಲಿಟರಿ ಮಾದರಿಯ ಭದ್ರತೆ ಬೇಕೇ? ವಿದ್ಯಾರ್ಥಿಗಳ ಮೇಲಿನ ಒತ್ತಡದ ಬಗ್ಗೆ ಅಣ್ಣಾಮಲೈ ಕಳವಳ – Kannada News | Annamalai questions military grade security for NEET retest flags Increase of Exam Stress

ಚೆನ್ನೈ, ಜೂನ್ 16: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ ಪರೀಕ್ಷೆಯ (NEET Exam) ಅಕ್ರಮಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮರುಪರೀಕ್ಷೆಯ ಭದ್ರತಾ ವ್ಯವಸ್ಥೆಯ ವಿರುದ್ಧ ತಮಿಳುನಾಡು ಮಾಜಿ ಬಿಜೆಪಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಧ್ವನಿ ಎತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಜಾರಿಗೆ ತರಲಾದ ಮಿಲಿಟರಿ ಶೈಲಿಯ ಭದ್ರತೆಯು ವಿದ್ಯಾರ್ಥಿಗಳನ್ನು ಅಪರಾಧಿಗಳಂತೆ ನೋಡುವ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಅತಿರೇಕದ ತಪಾಸಣಾ ಕ್ರಮಗಳು ಮತ್ತು ಪರೀಕ್ಷಾ ಕೇಂದ್ರಗಳ ವಾತಾವರಣವು ವಿದ್ಯಾರ್ಥಿಗಳಲ್ಲಿ ಅನಗತ್ಯ ಭಯ ಹಾಗೂ ತೀವ್ರ ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, ಪರೀಕ್ಷೆಯ ಪಾರದರ್ಶಕತೆಯನ್ನು ಕಾಪಾಡುವುದು ಮುಖ್ಯವಾದರೂ, ಅದು ವಿದ್ಯಾರ್ಥಿಗಳ ಮಾನಸಿಕ ನೆಮ್ಮದಿಯನ್ನು ಕದಡುವಂತಿರಬಾರದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಕಿವಿಮಾತು ಹೇಳಿದ್ದಾರೆ. ಪರೀಕ್ಷಾ ಕೇಂದ್ರಗಳ ಹೊರಗೆ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸುವ ವಿಧಾನವನ್ನು ತೀವ್ರವಾಗಿ ಖಂಡಿಸಿದ ಅಣ್ಣಾಮಲೈ, ಇದು ಹದಿಹರೆಯದ ಯುವಜನರ ಮೇಲೆ ಬೀರುತ್ತಿರುವ ನಕಾರಾತ್ಮಕ ಪ್ರಭಾವವನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

ಮಕ್ಕಳು ಯುದ್ಧಭೂಮಿಗೆ ಹೋಗುತ್ತಿಲ್ಲ:

“ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರುತ್ತಿದ್ದಾರೆಯೇ ಹೊರತು ಯಾವುದೇ ಯುದ್ಧಭೂಮಿಗೆ ಹೋಗುತ್ತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತಿರುವ ಮಿಲಿಟರಿ ದರ್ಜೆಯ ಭದ್ರತೆ ಮತ್ತು ಕಠಿಣ ನಿಯಮಗಳು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕವನ್ನು ಉಂಟುಮಾಡುತ್ತಿವೆ. ಶೂ ಬಿಚ್ಚಿಸುವುದು, ಬಟ್ಟೆಗಳ ತಪಾಸಣೆ ಮತ್ತು ಪೋಷಕರನ್ನು ದೂರವಿಡುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತಿದೆ. ಪ್ರಸ್ತುತ ಪರೀಕ್ಷಾ ವ್ಯವಸ್ಥೆಯು ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸುವ ಬದಲು ಅವರ ಒತ್ತಡವನ್ನು ತಾಳುವ ಶಕ್ತಿಯನ್ನು ಪರೀಕ್ಷಿಸುತ್ತಿದೆ.” ಎಂದು ಕೆ. ಅಣ್ಣಾಮಲೈ ಹೇಳಿದ್ದಾರೆ.

ಇದನ್ನೂ ಓದಿ: NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

ಇತ್ತೀಚಿನ ದಿನಗಳಲ್ಲಿ ನೀಟ್ ಪರೀಕ್ಷೆಯ ಭೀತಿ ಹಾಗೂ ಫಲಿತಾಂಶದ ಗೊಂದಲಗಳಿಂದಾಗಿ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಿರುವುದು ಮತ್ತು ಆತ್ಮಹತ್ಯೆಯಂತಹ ಘೋರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಅಣ್ಣಾಮಲೈ ಪ್ರಸ್ತಾಪಿಸಿದರು. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮಾಡುವುದಷ್ಟೇ ಅಲ್ಲ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಮುನ್ನವೇ ಸೂಕ್ತ ಮಾನಸಿಕ ಸಮಾಲೋಚನೆ ಮತ್ತು ಧೈರ್ಯ ತುಂಬುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.

ಪರೀಕ್ಷಾ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಮತ್ತು ತಂತ್ರಜ್ಞಾನವನ್ನು ಬಳಸಿ ಡಿಜಿಟಲ್ ಮಾದರಿಯಲ್ಲಿ ಸುರಕ್ಷಿತವಾಗಿ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಗೊಂದಲಮುಕ್ತ ವಾತಾವರಣ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೈಭವ್ ಸೂರ್ಯವಂಶಿ ನಿರ್ದೋಷಿ; ಶ್ರೀಲಂಕಾದ ಇಬ್ಬರು ಕ್ರಿಕೆಟಿಗರಿಗೆ ದಂಡ ವಿಧಿಸಿದ ರೆಫರಿ – Kannada News | India A vs SL A: Dambulla Cricket Controversy! Two Sri Lanka Players Punished, Sooryavanshi Spared?

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದಿದ್ದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದಲ್ಲಿ ಉಂಟಾಗಿದ್ದ ವಿವಾದದ ಪರಿಣಾಮವಾಗಿ ಇಬ್ಬರು ಆಟಗಾರರಿಗೆ ಮ್ಯಾಚ್ ರೆಫರಿ ಶಿಕ್ಷೆ ವಿಧಿಸಿದ್ದಾರೆ. ಅಚ್ಚರಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಯಾರಿಗೆ ಶಿಕ್ಷೆಯಾಗಬೇಕೆಂಬ ಮಾತುಗಳು ಕೇಳಿಬಂದಿದ್ದವೋ ಅವರಿಗೆ ಯಾವುದೇ ಶಿಕ್ಷೆಯನ್ನು ವಿಧಿಸಲಾಗಿಲ್ಲ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯದ ಕೊನೆಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹಾಗೂ ಭಾರತದ ವೈಭವ್ ಸೂರ್ಯವಂಶಿ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ವಾಗ್ವಾದಕ್ಕೆ ಪ್ರಮುಖ ಕಾರಣೀಕೃತರಾಗಿದ್ದ ಶ್ರೀಲಂಕಾದ ವಿಷೇನ್ ಹಲಂಬಗೆ ಹಾಗೂ ನಿರೋಷನ್ ಡಿಕ್ವೆಲ್ಲಾ ಅವರಿಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಇಬ್ಬರಿಗೆ ಶಿಕ್ಷೆ

ಪಂದ್ಯ ಮುಗಿದ ಒಂದು ದಿನದ ಬಳಿಕ ಇಡೀ ಘಟನೆಯ ಬಗ್ಗೆ ಕುಲಂಕುಶವಾಗಿ ತನಿಖೆ ನಡೆಸಿರುವ ಪಂದ್ಯದ ರೆಫರಿ ಪ್ರದೀಪ್ ಜಯಪ್ರಕಾಶ್‌ದರನ್, ಶ್ರೀಲಂಕಾ ಎ ತಂಡದ ಭಾಗವಾಗಿರುವ ವಿಷೇನ್ ಹಲಂಬಗೆಗೆ ದಂಡ ವಿಧಿಸಿದ್ದಾರೆ. ಇದರರ್ಥ ಇಡೀ ಘಟನೆಯಲ್ಲಿ ವಿಷೇನ್ ಹಲಂಬಗೆ ತಪ್ಪಿತಸ್ಥನೆಂದು ಸಾಭೀತಾಗಿದೆ. ಇವರ ಜೊತೆಗೆ ಲಂಕಾ ತಂಡದ ಹಿರಿಯ ವಿಕೆಟ್ ಕೀಪರ್ ನಿರೋಷನ್ ಡಿಕ್ವೆಲ್ಲಾ ಅವರಿಗೂ ಮ್ಯಾಚ್ ರೆಫರಿ ದಂಡ ವಿಧಿಸಿದ್ದಾರೆ. ಆದರೆ ಡಿಕ್ವೆಲ್ಲಾಗೆ ವಿಧಿಸಿರುವ ಶಿಕ್ಷೆಗೂ, ವೈಭವ್ ಸೂರ್ಯವಂಶಿ ಜೊತೆಗಿನ ಜಗಳಕ್ಕೂ ಯಾವುದೇ ಸಂಬಂಧವಿಲ್ಲ. ಅಂದರೆ ಬೇರೆ ಪ್ರಕರಣದಲ್ಲಿ ಡಿಕ್ವೆಲ್ಲಾಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಪ್ರತಿಕ್ರಿಯಿಸಿದ ಬಿಸಿಸಿಐ

ಇನ್ನು ಉಭಯ ಆಟಗಾರರ ನಡುವಿನ ವಾಗ್ವಾದದ ಸಮಯದಲ್ಲಿ ಎದುರಾಳಿ ತಂಡದ ಆಟಗಾರನನ್ನು ತಳ್ಳಿದ್ದ ವೈಭವ್ ಸೂರ್ಯವಂಶಿಗೆ ಶಿಕ್ಷೆಯಾಗಿದೆಯೇ ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಘಟನೆ ನಡೆದ ಬಳಿಕ ವೈಭವ್​ಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿತ್ತು. ಆದರೆ ಇದುವರೆಗೆ ಆ ರೀತಿಯ ಯಾವುದೇ ಕ್ರಮವನ್ನು ಬಿಸಿಸಿಐ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ವೈಭವ್ ಸೂರ್ಯವಂಶಿ ಅವರ ವಾಗ್ವಾದದ ವಿಷಯಕ್ಕೆ ಸಂಬಂಧಿಸಿದ್ದಂತೆ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿದ್ದು, ವೈಭವ್​ಗೆ ಇತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಬದಲು ಸರಣಿಯತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ.

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಸೈಕಿಯಾ, ‘ಭಾರತ ಎ ತಂಡವು ಪ್ರಮುಖ ಪಂದ್ಯಾವಳಿಯನ್ನು ಆಡುತ್ತಿದೆ, ಇದರಲ್ಲಿ ಭಾರತದ ಹಿರಿಯ ತಂಡಕ್ಕೆ ಸ್ಥಾನ ಪಡೆಯುವ ಎಲ್ಲಾ ಉದಯೋನ್ಮುಖ ಆಟಗಾರರು ಭಾಗವಹಿಸುತ್ತಿದ್ದಾರೆ. ಈ ಆಟಗಾರರು ಪ್ರಮುಖ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ, ಆದ್ದರಿಂದ ಅವರು ಇತರ ಸಮಸ್ಯೆಗಳಿಂದ ವಿಚಲಿತರಾಗುವ ಬದಲು ತಮ್ಮ ಆಟದತ್ತ ಗಮನ ಹರಿಸಬೇಕು’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯು ಜೂನ್ 25ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಮುಖ್ಯಾಂಶಗಳು

  • ಕನ್ನಡಿಗರ ಎಚ್ಚರಿಕೆಗೆ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ
  • ಇದೇ ಜೂನ್ 25ರಂದು ಪರೀಕ್ಷೆಗೆ ಅಧಿಸೂಚನೆ
  • ಈ ಬಾರಿಯೂ ಕನ್ನಡಕ್ಕೆ ಅವಕಾಶ ನೀಡದೇ ಪರೀಕ್ಷೆಗೆ ಮರುದಿನಾಂಕ ನಿಗದಿ
  • ರೈಲ್ವೆ ಇಲಾಖೆ ನಡೆಗೆ ಮತ್ತೆ ಸಿಡಿದೆದ್ದ ಕರವೇ ನಾರಾಯಣಗೌಡ

ಕಳೆದ ಬಾರಿಯೂ ರೈಲ್ವೆ ಬಡ್ತಿ ಪರೀಕ್ಷೆಯಲ್ಲೂ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದ್ರೆ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಇದರಿಂದ ಬೆಂಗಳೂರು, ಹುಬ್ಬಳ್ಳಿ, ಮೈಸೂರಿನಲ್ಲಿ ನಡೆಯುತ್ತಿದ್ದ ಪರೀಕ್ಷಾ ಕೇಂದ್ರಗಳಿಗೆ ಕರವೇ ಕಾರ್ಯಕರ್ತರು ನುಗ್ಗಿದ್ರು, ನಂತರ ರೈಲ್ವೆ ಇಲಾಖೆ ಪರೀಕ್ಷೆಯನ್ನು ಮುಂದೂಡಿದ್ದರು. ಇದೀಗ ರೈಲ್ವೆ ಇಲಾಖೆ ತನ್ನ  ಹಠಮಾರಿತನ ಮುಂದುವರೆಸಿದೆ.

ಇದನ್ನೂ ನೋಡಿ: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ

ನೈರುತ್ಯ ರೈಲ್ವೆಯ ಆಫೀಸ್ ಸೂಪರಿಂಟೆಂಡೆಂಟ್-39ಪೋಸ್ಟ್,ಸೀನಿಯರ್ ಕ್ಲರ್ಕ್- 25 ಮತ್ತು ಇಂಟರ್ಮೀಡಿಯೆಟ್ ಅಪ್ರೆಂಟಿಸ್ ಮೆಕ್ಯಾನಿಕ್ಸ್- 9 ಪೋಸ್ಟ್ ಸೇರಿದಂತೆ ಒಟ್ಟು 73 ಬಡ್ತಿ ಪೋಸ್ಟ್ ಗಾಗಿ ಎಕ್ಸಾಂ ನಡೆಯುತ್ತಿದೆ. ಆದರೆ ನೈರುತ್ಯ ರೈಲ್ವೆ ವಿಭಾಗ ಎಕ್ಸಾಂ ಅನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಬರೆಯಲು ಅವಕಾಶ ನೀಡಿದ್ದಾರೆ. ನೈಋತ್ಯ ರೈಲ್ವೆ ಮುಖ್ಯಸ್ಥರು ಈ ಮೂರು ಸುತ್ತೋಲೆಯ ದೋಷವನ್ನು ಸರಿಪಡಿಸಿ, ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವಂತೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಜೂನ್ 25 ರಂದು ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ನಡೆಸಲು ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ  ಖಡಕ್​ ಆಗಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು, ಕನ್ನಡಿಗರ ಹಕ್ಕುಗಳನ್ನು ಹೊಸಕಿ ಹಾಕುವ ರೈಲ್ವೆ ಇಲಾಖೆಯ ಈ ನಿರ್ಧಾರದ ವಿರುದ್ಧ ಕರವೇ ಉಗ್ರ ಹೋರಾಟ ನಡೆಸಲಿದೆ. ಜೂ. 25ರಂದು ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಂಘಟನೆ ಕಾರ್ಯಕರ್ತರು ಉಗ್ರ ಹೋರಾಟ ನಡೆಸಲಿದ್ದಾರೆ. ಅಲ್ಲಿ ಆಗುವ ಅನಾಹುತಗಳಿಗೆ ಕರವೇ ಜವಾಬ್ದಾರಿಯಲ್ಲ. ರೈಲ್ವೆ ಆಡಳಿತವು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಪರಿಣಾಮಗಳು ತೀವ್ರವಾಗಿರುತ್ತವೆ ಎಂದು ಎಚ್ಚರಿಸಿದ್ದಾರೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಜೂ.4ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಗೂಡ್ಸ್ ಟ್ರೇನ್ ಮ್ಯಾನೇಜರ್ ಹುದ್ದೆಯನ್ನು ಲೆವೆಲ್-5ರಲ್ಲಿ ಶೇ.15 ಎಲ್‌ಡಿಸಿಇ ಕೋಟಾ ಅಡಿಯಲ್ಲಿ ಭರ್ತಿ ಮಾಡಲಾಗುತ್ತಿದೆ. ಅದಕ್ಕಾಗಿ ಜೂ.25ರಂದು ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ) ಪದೋನ್ನತಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಸಿದ್ಧಪಡಿಸಲಾಗುತ್ತಿದ್ದು, ಕನ್ನಡ ಭಾಷೆಗೆ ಅವಕಾಶ ನೀಡಿಲ್ಲ. ಇದು ಕರ್ನಾಟಕದ ಕನ್ನಡಿಗರ ಮೇಲೆ ನಡೆಸುತ್ತಿರುವ ಘೋರ ಅನ್ಯಾಯ ಮತ್ತು ಭಾಷಾ ಹಕ್ಕುಗಳನ್ನು ಕಿತ್ತುಕೊಳ್ಳುವ ದೊಡ್ಡ ಸಂಚಾಗಿದೆ ಎಂದು ನಾರಾಯಣಗೌಡ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲಿ ಈ 7 ಔಷಧೀಯ ಸಸ್ಯಗಳು ಇರಲೇಬೇಕು! ತಪ್ಪದೆ ಬೆಳೆಸಿ ರೋಗಗಳಿಂದ ದೂರವಿರಿ – Kannada News | Best Medicinal Plants For Home That Work Like Natural Remedies

ಪ್ರಕೃತಿ ನೀಡಿರುವ ಅನೇಕ ಸಸ್ಯಗಳಲ್ಲಿ ಔಷಧೀಯ (Medicinal Plants) ಗುಣಗಳು ಅಡಗಿವೆ. ಹಳೆಯ ಕಾಲದಲ್ಲಿ, ಸಣ್ಣಪುಟ್ಟ ಅನಾರೋಗ್ಯಗಳಿಗೆ ಮನೆಯ ಸುತ್ತಮುತ್ತಲಿನ ಸಸ್ಯಗಳನ್ನೇ ಔಷಧಿಯಾಗಿ ಬಳಸಲಾಗುತ್ತಿತ್ತು. ಇಂದಿಗೂ ಕೆಲವು ಸಸ್ಯಗಳನ್ನು ಮನೆಯಲ್ಲೇ ಬೆಳೆಸುವುದರಿಂದ ಆರೋಗ್ಯ ರಕ್ಷಣೆ ಸಾಧ್ಯವಾಗುತ್ತದೆ. ಹಾಗಾದರೆ ಯಾವ ಗಿಡಗಳನ್ನು ಮನೆಯಲ್ಲಿ ಬೆಳೆಸಬೇಕು, ಅದು ಯಾವ ರೋಗಕ್ಕೆ ಮುದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತುಳಸಿ: ಪ್ರತಿ ಭಾರತೀಯರ ಮನೆಯಲ್ಲೂ ಕಾಣುವ ತುಳಸಿ ಸಸ್ಯವನ್ನು “ಔಷಧಿಗಳ ರಾಣಿ” ಎಂದು ಕರೆಯಲಾಗುತ್ತದೆ. ತುಳಸಿ ಎಲೆಗಳ ರಸ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಶೀತ, ಕೆಮ್ಮು ಮತ್ತು ಗಂಟಲು ನೋವಿಗೆ ಇದು ಸಹಕಾರಿಯಾಗಿದೆ.

ಆಲೋವೆರಾ (Aloe Vera): ಅಲೋವೆರಾ ಅಥವಾ ಲೋಳೆಸರ ಚರ್ಮದ ಆರೈಕೆಗೆ ಮಾತ್ರವಲ್ಲ, ಜೀರ್ಣಕ್ರಿಯೆ ಸುಧಾರಿಸಲು ಮತ್ತು ಸಣ್ಣಪುಟ್ಟ ಸುಟ್ಟ ಗಾಯಗಳನ್ನು ಗುಣಪಡಿಸಲು ಸಹ ಉಪಯೋಗವಾಗುತ್ತದೆ.

ಪುದೀನಾ: ಸಾಮಾನ್ಯವಾಗಿ ಪುದೀನಾ ಎಲೆಗಳು ಬಾಯಿಯ ದುರ್ವಾಸನೆ ಕಡಿಮೆ ಮಾಡುತ್ತವೆ. ಜೊತೆಗೆ ಅಜೀರ್ಣ, ಹೊಟ್ಟೆ ಉಬ್ಬರ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿದೆ.

ಕರಿಬೇವು: ಅಡುಗೆಗೆ ಬಳಸುವ ಕರಿಬೇವು ಸುವಾಸನೆ ನೀಡುವುದರ ಜೊತೆಗೆ ಕಣ್ಣಿನ ಆರೋಗ್ಯ ಮತ್ತು ಕೂದಲು ಉದುರುವ ಸಮಸ್ಯೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಲೆಮನ್ ಗ್ರಾಸ್: ಲೆಮನ್ ಗ್ರಾಸ್ ಚಹಾ ಸೇವಿಸಿದರೆ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಇದು ಸಹಕಾರಿ.

ಓಂಕಾಳಿನ ಗಿಡ: ಮಕ್ಕಳಿಗೆ ಹೊಟ್ಟೆನೋವು ಬಂದಾಗ ಓಮದ ಅಥವಾ ಓಂಕಾಳಿನ ಎಲೆಗಳ ರಸ ಅಥವಾ ಪರಿಮಳ ತಕ್ಷಣದ ನೆಮ್ಮದಿ ನೀಡುತ್ತದೆ. ಜೀರ್ಣಕ್ರಿಯೆಗೂ ಇದು ಉತ್ತಮ.

ಅಮೃತಬಳ್ಳಿ (Giloy): ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಅಮೃತಬಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ಜ್ವರ ಮತ್ತು ಮಧುಮೇಹ ನಿಯಂತ್ರಣಕ್ಕೂ ಇದನ್ನು ಬಳಸಲಾಗುತ್ತದೆ.

ಈ ಸಸ್ಯಗಳನ್ನು ಮನೆಯಲ್ಲೇ ಬೆಳೆಸುವುದರಿಂದ ಶುದ್ಧ ಗಾಳಿಯ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನೂ ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ ನಾಯಕರೊಂದಿಗೆ ನಗುತ್ತಾ ಮಾತನಾಡಿದರೆ ಟ್ರಂಪ್ ಅವರಿಂದ ಮಾತ್ರ ಅಂತರ ಕಾಯ್ದುಕೊಂಡರು. ಈ ಘಟನೆ ಎಲ್ಲರ ಗಮನಸೆಳೆದಿದೆ.

ಪ್ರಧಾನಿ ಮೋದಿಯವರೊಂದಿಗೆ ಈ ಐತಿಹಾಸಿಕ ಫೋಟೋದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ, ಜಪಾನ್ ಪ್ರಧಾನಿ ಸನಾ ಇ ಟಕೈಚಿ, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಬ್ರೆಜಿಲ್ ಅಧ್ಯಕ್ಷ ಲುಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಒಟ್ಟಿಗೆ ಕಾಣಿಸಿಕೊಂಡರು.

(Video Source: DD) 

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version