ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ – Kannada News | Karnataka Weather Today: Light Rain in Some Areas, Rising Temperatures

ಬೆಂಗಳೂರು, ಫೆ.26: ಕರ್ನಾಟಕದಲ್ಲಿ ಇಂದು (ಫೆಬ್ರವರಿ 26, 2026) ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 19°C ಇರಲಿದ್ದು, ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ಬಿಸಿಲು ಹೆಚ್ಚಿರಲಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸಿ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ ಕಡೆಯಿಂದ ಬರುವ ಗಾಳಿಯಿಂದಾಗಿ ತೇವಾಂಶ (Humidity) ಹೆಚ್ಚಿರಲಿದ್ದು, ಬೆವರುವಿಕೆ ಮತ್ತು ಉಸಿರುಕಟ್ಟಿದ ವಾತಾವರಣ ಕಂಡುಬರಬಹುದು. ಈ ಭಾಗಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರುತ್ತದೆ.

ಇನ್ನು ಇಂದು ಕಲಬುರಗಿಯಲ್ಲಿ ತೀವ್ರವಾದ ಬಿಸಿಲು ಇರಲಿದೆ. ಮಧ್ಯಾಹ್ನದ ಸಮಯದಲ್ಲಿ ಸೆಖೆ ಹೆಚ್ಚಾಗಿರುತ್ತದೆ.ಗರಿಷ್ಠ ತಾಪಮಾನ 36°C ತಲುಪಬಹುದು, ಕನಿಷ್ಠ ತಾಪಮಾನ 22°C ಇರಲಿದೆ. ಆಕಾಶವು ಬಹುತೇಕ ಸ್ವಚ್ಛವಾಗಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ. ಬೆಳಗಾವಿಯಲ್ಲಿ ಬಿಸಿಲು ಇದ್ದರೂ ಸಹ, ಆಕಾಶವು ಮೋಡದಿಂದ ಕೂಡಿರುತ್ತದೆ.ಬೆಳಗಾವಿಯ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾದರೂ ಆಶ್ಚರ್ಯವಿಲ್ಲ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಮಲೆನಾಡು ಭಾಗದಲ್ಲಿ ಹವಾಮಾನವು ಮಿಶ್ರಫಲವಾಗಿರಲಿದೆ. ಶಿವಮೊಗ್ಗದಲ್ಲಿ ಇಂದು ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ.

ಇದನ್ನೂ ಓದಿ: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಮತ್ತು ಶಿವಮೊಗ್ಗದ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ. ಬೆಳಗಿನ ಜಾವ ತಂಪಾದ ಗಾಳಿ ಇರಲಿದ್ದು, ಮಧ್ಯಾಹ್ನ ಸ್ವಲ್ಪ ಸೆಖೆ ಇರುತ್ತದೆ. ಮೈಸೂರಿನಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಕಡಿಮೆ ಇದ್ದು, ಒಣ ಹವಾಮಾನವಿರುತ್ತದೆ. ಮೈಸೂರಿನಲ್ಲಿ ಇಂದು ಬಿಸಿಲು ಸ್ವಲ್ಪ ಜಾಸ್ತಿ ಇರಲಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗುವುದರಿಂದ ಸಾರ್ವಜನಿಕರಿಗೆ ಸೆಖೆಯ ಅನುಭವವಾಗಲಿದೆ.ಗರಿಷ್ಠ ತಾಪಮಾನ 34°C ವರೆಗೆ ತಲುಪಬಹುದು ಮತ್ತು ಕನಿಷ್ಠ ತಾಪಮಾನ 19°C ಇರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

ಕೃಷ್ಣನ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ತುಳಸಿ ಹಾರವನ್ನು ಸಮರ್ಪಣೆ ಮಾಡಿ. ಒಂದು ವೇಳೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಇರುವಂಥ ಕೃಷ್ಣನ ವಿಗ್ರಹ, ಚಿತ್ರಪಟಕ್ಕೆ ತುಳಸಿ ದಳ, ತುಳಸಿಹಾರವನ್ನು ಅರ್ಪಿಸಿ. ಯಾವುದೇ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆ ನಿವಾರಣೆ ಆಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ವಿಶ್ವಾಸಾರ್ಹತೆ, ನಿಷ್ಠೆ, ಪ್ರಾಮಾಣಿಕತೆಯನ್ನು ಸಾಬೀತು ಮಾಡಬೇಕಾದ ಅನಿವಾರ್ಯ ಸೃಷ್ಟಿ ಅಗಲಿದೆ. ಸಂಗಾತಿಯ ಆರ್ಥಿಕ ವಿಚಾರಗಳಿಗೆ ನಿಮ್ಮ ಬೆಂಬಲ ಹಾಗೂ ಸಹಕಾರ ಅಗತ್ಯವಿದೆ ಎಂಬುದು ಖಾತ್ರಿ ಆಗಲಿದೆ. ಉಪನ್ಯಾಸಕರು- ಮನೆಯಲ್ಲಿಯೇ ಟ್ಯೂಷನ್ ಮಾಡುತ್ತಾ ಆ ಮೂಲಕ ಆದಾಯ ಪಡೆಯುತ್ತಾ ಇರುವವರಿಗೆ ಹಣಕಾಸಿನ ಹರಿವಿನಲ್ಲಿ ಇಳಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಪೂಜಾ ಸಾಮಗ್ರಿಗಳು ಮಾಡಿಸುವುದಕ್ಕೆ- ಖರೀದಿ ಮಾಡುವುದಕ್ಕೆ ಅಥವಾ ದೇವರಮನೆ ರಿನೋವೇಷನ್ ಇಂಥವುಗಳ ಬಗ್ಗೆ ಈ ದಿನ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ. ಮತ್ತೆ ನಿಮ್ಮಲ್ಲಿ ಕೆಲವರು ಮನೆಯ ವಾಸ್ತುವಿನಲ್ಲಿ ಆಗಬೇಕಾದ ಬದಲಾವಣೆಗಳು ಇದ್ದಲ್ಲಿ ಅದನ್ನು ಮಾಡಿಸಲು ಬೇಕಾದಂಥ ವ್ಯಕ್ತಿಗಳನ್ನು ಕರೆಸಿ, ಕೆಲಸದ ಬಗ್ಗೆ ಮಾತುಕತೆ ನಡೆಸಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕೃಷಿ ವಿಜ್ಞಾನಿಗಳಿಗೆ ತಮ್ಮ ಈಗಿನ ಪ್ರಾಜೆಕ್ಟ್ ಜೊತೆಗೆ ಮಹತ್ವಾಕಾಂಕ್ಷೆಯ- ದೊಟ್ಟ ಮಟ್ಟದ- ಪ್ರತಿಷ್ಠಿತ ಸಂಸ್ಥೆಯ ಅನುದಾನದ ಯೋಜನೆಗಳನ್ನು ಮುನ್ನಡೆಸುವಂತೆ ಸೂಚನೆ ಬರಲಿದೆ. ನಿಮ್ಮ ವೃತ್ತಿ ಜೀವನದಲ್ಲಿ ಬಹಳ ಮುಖ್ಯವಾದ ಪ್ರಾಜೆಕ್ಟ್ ಇದಾಗಿರಲಿದೆ ಎಂಬ ಖಾತ್ರಿ ಸಹ ನಿಮಗೆ ಸಿಗಲಿದೆ. ಡೇರಿ ಉತ್ಪನ್ನಗಳ ಮಾರಾಟ- ವಿತರಣೆ- ಉತ್ಪಾದನೆಯಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಹೆಚ್ಚಳ ಮಾಡಿಕೊಳ್ಳುವುದಕ್ಕೆ ನಾನಾ ಅವಕಾಶಗಳು ತೆರೆದುಕೊಳ್ಳಲಿವೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 26ರ ದಿನಭವಿಷ್ಯ

ನೀವೇನಾದರೂ ಹರಕೆ ಹೊತ್ತುಕೊಂಡಿದ್ದು, ಅದನ್ನು ಪೂರ್ಣಗೊಳಿಸದೆ ಹಾಗೇ ಉಳಿಸಿಕೊಂಡಿದ್ದಲ್ಲಿ ಅದನ್ನು ಸಂಪೂರ್ಣ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಇದರಿಂದ ಆರೋಗ್ಯ ಸಮಸ್ಯೆ ನಿವಾರಣೆ, ನಿದ್ದೆಯ ತೊಂದರೆಯಿಂದ ಬಳಲುತ್ತಾ ಇದ್ದಲ್ಲಿ ಅದು ಕೂಡ ಸರಿಹೋಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮಲ್ಲಿ ಯಾರು ಫೋಟೋಗ್ರಾಫರ್ ಇದ್ದೀರಿ, ಸ್ಟುಡಿಯೋಗಳನ್ನು ನಡೆಸುತ್ತಾ ಇದ್ದೀರಿ ಅಂಥವರು ಹೊಸ ತಂತ್ರಜ್ಞಾನಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳುವುದಕ್ಕಾಗಿ ಕೆಲವರ ಸಹಾಯವನ್ನು ಪಡೆದುಕೊಳ್ಳಲು ಮುಂದಾಗಲಿದ್ದೀರಿ. ಬೇಗನೇ ಹಣ ಮಾಡಿಬಿಡಬಹುದು, ಅದಕ್ಕೆ ತಾನು ಐಡಿಯಾಗಳನ್ನು ನೀಡುವುದಾಗಿ ನಿಮ್ಮ ಬಳಿ ಬರುವಂಥ ಹೊಸ ಪರಿಚಯಸ್ಥರಿಂದ ಅಂತರ ಕಾಯ್ದುಕೊಳ್ಳುವುದು ಕ್ಷೇಮ. ಈ ವಿಚಾರದಲ್ಲಿ ನಿಮ್ಮ ಸ್ನೇಹಿತರಿಗೋ ಸಂಬಂಧಿಗಳಿಗೋ ರೆಫರ್ ಕೂಡ ಮಾಡಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಎಲ್ಲಿಯಾದರೂ ಬರಿಗಾಲಲ್ಲಿ ನಡೆದಾಡುವ ಸಂದರ್ಭದಲ್ಲಿ ಎಚ್ಚರಿಕೆಯನ್ನು ವಹಿಸಿ. ನಿಮ್ಮಲ್ಲಿ ಕೆಲವರಿಗೆ ಚೂಪಾದ ಗಾಜು, ಮುಳ್ಳು ಅಥವಾ ಕಲ್ಲು ಚುಚ್ಚಿಕೊಂಡು, ಪಾದದಲ್ಲಿ ತೀವ್ರ ಸ್ವರೂಪದ ಗಾಯ ಆಗುವ ಸಾಧ್ಯತೆ ಇದೆ. ಸದ್ಯಕ್ಕೆ ಬೇಡ ಅಂದುಕೊಂಡಿದ್ದ ಕೆಲವೊಂದರ ನಿಮಿತ್ತವಾಗಿ ಸಾಲ ಪಡೆದುಕೊಳ್ಳುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ತೀವ್ರವಾದ ಹೊಟ್ಟೆನೋವು ಹಾಗೂ ಅದಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಚರ್ಮಕ್ಕೆ ಸಂಬಂಧಿಸಿದ ವ್ಯಾಧಿಗಳಿಂದ ಬಳಲುತ್ತಾ ಇರುವವರಿಗೆ ಪರಿಣಾಮಕಾರಿಯಾದ ಔಷಧೋಪಚಾರ ದೊರೆಯುವ ಮಾಹಿತಿ ಸಿಗಲಿದೆ. ನಿಮಗೆ ಬಹಳ ಆಪ್ತರಾದವರು ತಮ್ಮ ಜೊತೆಗೇ ಕರೆದುಕೊಂಡು ಹೋಗಿ, ವೈದ್ಯರ ಬಳಿ ಚಿಕಿತ್ಸೆಗೆ ಸಹಾಯ ಮಾಡಲಿದ್ದಾರೆ. ಮಾಂಸಾಹಾರ ಸೇವನೆ ಮಾಡುವವರಿದ್ದಲ್ಲಿ ಅತಿಯಾದ ಜಿಡ್ಡು, ಅತಿಯಾದ ಮಸಾಲೆಯುಕ್ತ ಮಾಂಸಹಾರ ಸೇವನೆಯಿಂದ ದೂರ ಇರುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

ಅಶಕ್ತರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಲು ಸಾಧ್ಯವಾದರೆ ಮಾಡಿ. ಕನಿಷ್ಠ ಒಬ್ಬರಿಗಾದರೂ ಈ ರೀತಿ ಮಾಡುವುದರಿಂದ ದೃಷ್ಟಿದೋಷಗಳು ನಿವಾರಣೆ ಆಗುತ್ತವೆ. ಜೊತೆಗೆ ಹೇಳಿಕೊಳ್ಳಲು ಸಾಧ್ಯವಾಗದಂಥ ಅಂಜಿಕೆ- ಹಿಂಜರಿಕೆಗಳು ಇದ್ದಲ್ಲಿ ದೂರವಾಗುತ್ತವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸ್ನೇಹಿತರು- ಸಂಬಂಧಿಗಳ ಮನೆಯಲ್ಲಿ ಆಯೋಜನೆ ಆಗಿರುವ ಕಾರ್ಯಕ್ರಮ- ಸಮಾರಂಭಗಳಿಗೆ ನೆರವು ನೀಡಬೇಕೆಂದು ನಿಮ್ಮಲ್ಲಿ ಕೆಲವರನ್ನು ಜೊತೆಗೆ ಬರುವಂತೆ ಕೇಳಿಕೊಳ್ಳಲಿದ್ದಾರೆ. ಮನಸ್ಸಿಲ್ಲದ ಮನಸ್ಸಿನಲ್ಲಿ ಹೂಂ ಅನ್ನುವ ಮುನ್ನ ಆಲೋಚಿಸುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಇರುವಂಥ ನಿರುತ್ಸಾಹ ಅಥವಾ ಏಕಾಗ್ರತೆ ಇಲ್ಲದಿರುವುದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ದೇವಸ್ಥಾನ- ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ ನಿಮ್ಮಲ್ಲಿ ಕೆಲವರಿಗೆ ಇದೆ. ನಿಮಗೆ ಅಂಥದ್ದೊಂದು ಉದ್ದೇಶ ಇದೆಯೋ ಇಲ್ಲವೋ ಕೊನೆಗೆ ತಮ್ಮ ಜೊತೆಗೆ ಡ್ರೈವಿಂಗ್ ಮಾಡುವುದಕ್ಕೆ ಜನರಲಿಲ್ಲ, ಆದ್ದರಿಂದ ತಮಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡು, ಆ ಮೂಲಕವಾದರೂ ನಿಮಗೆ ಇಂಥದ್ದೊಂದು ಅವಕಾಶ ಸಿಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಈ ದಿನದ ಬಹುಪಾಲು ಸಮಯ ನಿಮಗೊಂದು ನೀರಸತೆ ಕಾಡಲಿದೆ. ಎಂದಿನ ಉತ್ಸಾಹ- ಚಟುವಟಿಕೆಯಲ್ಲಿ ಕೆಲಸ- ಕಾರ್ಯದಲ್ಲಿ ತೊಡಗಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಇನ್ನು ನಿಮ್ಮಲ್ಲಿ ಯಾರು ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುತ್ತೀರೋ ಅಂಥವರಿಗೆ ಈಗ ಮಾಡುತ್ತಿರುವ ಕೆಲಸದ ಜೊತೆಗೆ ಹೊಸ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಸೂಚನೆ ನೀಡಬಹುದು. ಈ ದಿನ ಸಾಧ್ಯವಾದಷ್ಟೂ ಬಿಳಿ ಬಣ್ಣದ ಬಟ್ಟೆಗಳನ್ನು ಹಾಕಿಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ.

ವೃಷಭ ರಾಶಿ:

ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ನಿಮ್ಮ ಊಹೆಯು ಸತ್ಯವಾಗಬಹುದು. ಬಂಧುಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳುವರು. ನಿಮ್ಮ ಮತ್ತೊಂದು ಮುಖದ ಪರಿಚಯವೂ ಆಪ್ತರಿಗೆ ಆಗಲಿದೆ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಸರಿಮಡಿಕೊಳ್ಳಿ. ನಿಮ್ಮ ವಸ್ತುಗಳನ್ನು ಕಳೆದುಕೊಳ್ಳುವ ಸಂಭವವಿದೆ.

ಮಿಥುನ ರಾಶಿ:

ಇಂದು ಮಾಡಲಾಗದ ಕಾರ್ಯವನ್ನು ಮತ್ತೆಂದೋ ಮಾಡುವ ಬದಲು ಅದಕ್ಕಾಗಿ ಇಂದೇ ದಿನವನ್ನು ನಿಶ್ಚಯಿಸಿ. ಹೊಸತನ್ನು ಏನಾದರೂ ಮಾಡುವ ಉದ್ದೇಶ ನಿಮ್ಮಲ್ಲಿರಲಿದೆ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಮಾನಸಿಕ ಒತ್ತಡವು ನಿಮ್ಮ ಕಾರ್ಯವನ್ನು ನಿಧಾನ ಮಾಡುವುದು. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ ನಡೆಸುವ ಸಂದರ್ಭವು ಬರಬಹುದು.

ಕರ್ಕಾಟಕ ರಾಶಿ:

ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ಕುರುಡಾಗಿ ಮುನ್ನುಗ್ಗುವುದು ಬೇಡ. ವಿವಾಹದ ಮಾತುಕತೆಗೆ ವಿಘ್ನಗಳು ಬರಬಹುದು. ಸಮಯವನ್ನು ಬಹಳ ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ. ಸಂಗಾತಿಯಿಂದ ನಿಮಗೆ ಅಪರೂಪದ ವಸ್ತುಗಳು ಸಿಗಬಹುದು. ರಾಜಕೀಯವು ನಿಮಗೆ ಇಷ್ಟವಾಗದು. ಒಂದು ಕೆಲಸವನ್ನು ಮೈ ಮೇಲೆ ಬಿದ್ದು ಮಾಡಿಸಿಕೊಳ್ಳಬೇಕಾಗುವುದು. ನಿಮಗೆ ಆಗುವಷ್ಟೇ ಕೆಲಸವನ್ನು ಮಾಡಿ.

ಸಿಂಹ ರಾಶಿ:

ಸಹೋದರರ ಜೊತೆ ಕಲಹವಾಗಬಹುದು. ಸಂಗಾತಿಯ ಮೌನವು ನಿಮಗೆ ಕಷ್ಟವಾಗಬಹುದು. ಅಧಿಕ ಪ್ರಯಾಣದಿಂದ ಆಯಾಸವಾಗಬಹುದು. ಪ್ರೀತಿಯಲ್ಲಿ ನಿಮಗೆ ನೋವಾಗುವ ಸಾಧ್ಯತೆ ಇದೆ. ಏನೂ ಬೇಡ ಎನಿಸಬಹುದು. ಸಣ್ಣ ಸಣ್ಣ ವಿಚಾರಗಳೂ ದೊಡ್ಡದಾಗಿ ಕಾಣಿಸುವುದು. ಸುರಕ್ಷಿತ ವಾಹನ ಚಾಲನೆಯನ್ನು ಮಾಡಿ. ವಿದ್ಯಾಭ್ಯಾಸವನ್ನು ಮುಗಿಸಿ ಹೊಸ ಉದ್ಯೋಗವನ್ನು ಹುಡುಕುವಿರಿ. ಆಹಾರದ ವ್ಯಾಪಾರದಿಂದ ಲಾಭವಾಗುವುದು. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು.

ಕನ್ಯಾ ರಾಶಿ:

ನಿಮ್ಮ ಉದ್ಯಮದ ಪ್ರಗತಿಯು ನಿಮಗೆ ಖುಷಿಕೊಡುವುದು. ಹಳೆಯ ಹೂಡಿಕೆಗೆ ಪುನಃ ನವೀಕರಣ ಮಾಡಿಕೊಳ್ಳುವಿರಿ. ಸಮಾಧಾನಚಿತ್ತದಿಂದ ನೀವು ಇಂದಿನ ಮಧುರ ಕ್ಷಣಗಳನ್ನು ಆನಂದಿಸುವಿರಿ. ನಿಮ್ಮ ಸಾಹಸಕ್ಕೆ ಯಾರ ಪ್ರೇರಣೆಯೂ ಸಿಗಲಿಕ್ಕಿಲ್ಲ. ಭೂಮಿಯ ವ್ಯವಹಾರದಿಂದ ಅಲ್ಪ ಹಣವು ನಷ್ಟವಾಗುವುದು. ಯಾರನ್ನೋ ನಂಬಿ ಹಣವ್ಯವಹಾರವನ್ನು ಮಾಡಿ ಮೋಸ ಹೋಗುವಿರಿ. ವಿದ್ಯಾಭ್ಯಾಸದ ಹಿನ್ನಡೆಯ ಕಾರಣ ಎಲ್ಲರಿಂದ ಅವಮಾನವಾಗಬಹುದು. ಕೃಷಿಯನ್ನು ಆದಾಯದ ಮೂಲವಾಗಿಸಿಕೊಳ್ಳಬಹುದು. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು.

ತುಲಾ ರಾಶಿ:

ಮಾರಾಟದ ವಿಭಾಗದಲ್ಲಿ ಇರುವವರಿಗೆ ಲಾಭವನ್ನು ಹೆಚ್ಚಿಸಿದ ಕಾರಣಕ್ಕೆ ಪ್ರಶಂಸೆಯು ಸಿಗಲಿದೆ. ಯಾವ ವಿದ್ಯೆಯೂ ಕರಗತ ಆಗದ ಹೊರತೂ ಧೈರ್ಯವನ್ನು ಕೊಡದು. ನಿಮ್ಮನ್ನು ಅವ್ಯವಹಾರಕ್ಕೆ ಸಹೋದ್ಯೋಗಿಗಳು ಪ್ರೇರಿಸಬಹುದು. ಅಪ್ರಯೋಜಕ ಎಂದುಕೊಂಡ ವಿದ್ಯೆಯಿಂದ ಪ್ರಯೋಜನವಾಗುವುದು. ಹಿತಶತ್ರುಗಳನ್ನೇ ನಿಮ್ಮ ಬೆಂಬಲಕ್ಕೆ ಇಟ್ಟುಕೊಳ್ಳುವಿರಿ. ನೀವೇ ಸಾಯಬೇಕು, ಸ್ವರ್ಗಕಾಣಬೇಕು. ರಾಜಕೀಯದವರಿಗೆ ಬೆಂಬಲಿಗರಿಂದ ಒತ್ತಡಗಳು ಬರಬಹುದು.

ವೃಶ್ಚಿಕ ರಾಶಿ:

ಗೆಲುವಿಗೆ ಬಹಳ ಪ್ರಯತ್ನಪಟ್ಟು ಯಶಸ್ವಿಯಾಗುವಿರಿ. ವ್ಯಕ್ತಿತ್ವವನ್ನು ಗಮನಿಸಿಕೊಂಡು ಯಾರ ಬಳಿಯಾದರೂ ಮಾತನಾಡಿ. ನಿಮ್ಮ ಸ್ಥಾನದ ಬಗ್ಗೆ ಭಯ ಉಂಟಾಗಬಹುದು. ಪವಿತ್ರಕ್ಷೇತ್ರಗಳಿಗೆ ತೆರಳುವ ಅವಕಾಶ ಸಿಗಬಹುದು. ತಂದೆಯ ಅಸಮಾಧಾನವನ್ನು ಕುಳಿತು ಬಗೆಹರಿಸಿ. ಪೋಷಕರ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಕಾರ್ಯಕ್ಕೆ ಎಲ್ಲರಿಂದ ಪ್ರಶಂಸೆ ಸಿಕ್ಕರೂ ನಿಮ್ಮ ಕೆಲಸವು ಸಮಾಧಾನ ಕೊಡದು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಜಾಗರೂಕವಾಗಿ ಇರುವುದು.

ಧನು ರಾಶಿ:

ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವಿಚಾರದಲ್ಲಿ ತಜ್ಞರ ಸಂಪರ್ಕ ಮಾಡುವುದು ಉತ್ತಮ. ನಿಮ್ಮ ಇಂದಿನ ಕೆಲಸವನ್ನು ಪೂರ್ಣ ಮಾಡಲು ಬಹಳ ಆತುರದಿಂದ ಇರುವಿರಿ. ವೃತ್ತಿಯ ಜೊತೆ ಉನ್ನತ ಶಿಕ್ಷಣವನ್ನೂ ಮಾಡುವಿರಿ. ಇಂದು ನಿಮ್ಮ ಕುಟುಂಬದ ಸದಸ್ಯರು ನಿಮ್ಮನ್ನು ಬಿಟ್ಟು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವರು. ನಿಮ್ಮ ಸ್ಥಾನಕ್ಕೆ ಗೌರವವಿಲ್ಲದಂತೆ ತೋರಬಹುದು. ನಿಮ್ಮ ಸೋಲನ್ನು ಸುಲಭಕ್ಕೆ ಒಪ್ಪಿಕೊಳ್ಳಲಾರಿರಿ. ಯಾರ ಮೇಲೂ ಸಿಟ್ಟಿನಿಂದ ಮಾತನಾಡುವುದು ಬೇಡ.

ಮಕರ ರಾಶಿ:

ಮೋಸಕ್ಕೆ ಅನೇಕ ಮುಖಗಳಿವೆ ಎಂದು ಗೊತ್ತಾಗುವುದು. ಎಲ್ಲದಕ್ಕೂ ಇನ್ನೊಬ್ಬರನ್ನು ಅವಲಂಬಿಸುವುದು ನಿಮಗೆ ಇಷ್ಟವಾಗದು. ಇದಕ್ಕಾಗಿ ಬೇರೆ ಮಾರ್ಗವನ್ನೂ ಅನ್ವೇಷಿಸುವಿರಿ. ನಿಮ್ಮ ಸಂಗಾತಿಯ ಆರೋಗ್ಯವು ಕ್ಷೀಣಸಲಿದ್ದು ಚಿಂತೆಯೂ ಕಾಡುವುದು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ನಿಮ್ಮ ಅಪರೂಪದ ವ್ಯಕ್ತಿಗಳು ಆಕಸ್ಮಾತ್ತಾಗಿ ಭೇಟಿಯಾಗುವರು. ನಿಮಗೆ ಕೊಟ್ಟ ಕಾರ್ಯವನ್ನು ಮರೆತು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ಕೂಡಿಟ್ಟ ಹಣದಿಂದ ಕೆಲವು ಪ್ರಯೋಜನಗಳು ನಿಮಗೆ ಆಗಲಿವೆ.

ಕುಂಭ ರಾಶಿ:

ನೀವು ಇತರರ ಮನೋಭಾವಕ್ಕೆ ಸ್ಪಂದಿಸಲು ಹೆಚ್ಚು ಉತ್ಸುಕತೆ ಇರಲಿದೆ. ಇಂದು ನಿಮ್ಮ ಮಕ್ಕಳ ಬಗ್ಗೆ ಸಕಾರಾತ್ಮಕ ವಾರ್ತೆಯನ್ನು ಕೇಳುವಿರಿ. ನಿಮ್ಮ ಆದಾಯಕ್ಕೆ ಹೊಡೆತ ಬೀಳಬಹುದು. ವೃತ್ತಿಪರರಾದ ನಿಮಗೆ ಕಛೇರಿಯಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವುದು ಬೇಡ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಏನಾದರೂ ಹೇಳಬಹುದು. ಕೇಳಿ ಸುಮ್ಮನಾಗಿ. ಉತ್ತರದಿಂದ ಮತ್ತೇನಾದರೂ ಆದೀತು. ಸುಲಭವಾಗಿ ಸಿಗುವ ಸಂಪತ್ತಿಗೆ ಆಸೆಪಡುವುದು ಬೇಡ.

ಮೀನ ರಾಶಿ:

ವಿವಾಹದ ವಾತಾವರಣವು ಮನೆಯಲ್ಲಿ ಇದ್ದರೂ ಉದ್ವೇಗಕ್ಕೆ ಒಳಗಾಗದೇ ನೀವೂ ನೆಮ್ಮದಿಯಿಂದ ಓಡಾಡುವಿರಿ. ಚಲಿಸುವ ವಾಹನದಿಂದ ಬೀಳುವ ಸಾಧ್ಯತೆ ಇದೆ. ನಿಷ್ಕಪಟವು ನಿರಾತಂಕ ಸ್ಥಿತಿಯನ್ನು ಕೊಡುವುದು. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ತೈತುಲ, ಸೂರ್ಯೋದಯ – 06 – 43 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭ ಕಾಲ : ರಾಹು 14:06 – 15:34, ಯಮಗಂಡ ಕಾಲ 06:44 – 08:12, ಗುಳಿಕ ಕಾಲ 09:41 – 11:09

-ಲೋಹಿತ ಹೆಬ್ಬಾರ್ – 8762924271 (what’s app only)

Source link

SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ – Kannada News | Dharwad: Teacher cheats student by promising to help him pass SSLC

ಧಾರವಾಡ, ಫೆಬ್ರವರಿ 25: ವಿದ್ಯಾರ್ಥಿಯ (student) ಮುಖ್ಯ ಘಟ್ಟವೇ ಎಸ್​ಎಸ್​ಎಲ್​ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ವಿದ್ಯಾರ್ಥಿಯಿಂದ ಬಂಗಾರ ಪಡೆದು ಇದೀಗ ವಿದ್ಯಾರ್ಥಿ ಜೀವನವನ್ನೇ ಅತಂತ್ರ ಮಾಡಿದ್ದಾನೆ.

ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟವಾಡಿದ ಶಿಕ್ಷಕ

ಹೀಗೆ ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ  ಈತ, ಇದೀಗ ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟ ಆಡಿದ್ದಾನೆ. 10ನೇ ತರಗತಿ ವಿದ್ಯಾರ್ಥಿಯಾಗಿರೋ ನಗರದ ಶಿವನಗರ ನಿವಾಸಿ ಅಭಿಷೇಕ್​ಗೆ ಈ ಬಾರಿಯ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ನಂಬಿಸಿದ್ದಾನೆ. ಪ್ರಶ್ನೆ ಪತ್ರಿಕೆಗಳನ್ನ ಲೀಕ್ ಮಾಡಿ ಕೊಡುತ್ತೇನೆ ಅಂತ ನಂಬಿಸಿ ವಿದ್ಯಾರ್ಥಿಗೆ ಹಣದ ಬೇಡಿಕೆ ಇಟ್ಟಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಅಭಿಷೇಕ್

ನನ್ನ ಮಗನ ಕಾಲೇಜಿನ ಫೀಸ್ ಕಟ್ಟಬೇಕು. ನಿಮ್ಮ ಮನೆಯ ಬಂಗಾರವನ್ನು ತಂದು ಕೊಡು ಅಂತ ಹೇಳಿದ್ದಾನೆ. ಅದಕ್ಕೆ ಮೊದಲು ಒಪ್ಪದ ವಿದ್ಯಾರ್ಥಿ ಬಳಿಕ ಆತನ ಮಾತನ್ನು ನಂಬಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ವಿಡಿಯೋ ಕಾಲ್ ಮೂಲಕ ಚಿನ್ನವನ್ನು ಎಲ್ಲಿ ಇಟ್ಟಿದ್ದಾರೆ ಹುಡುಕು ಎಂದು ಹೇಳಿ ಮನೆಯ ಅಲ್ಮೇರಾದಲ್ಲಿಟ್ಟಿದ್ದ 82 ಗ್ರಾಂ ಬಂಗಾರವನ್ನು ತೆಗೆದುಕೊಂಡು ಹೋಗಿ ಶಿಕ್ಷಕನಿಗೆ ಕೊಟ್ಟಿದ್ದಾನೆ ಅಂತ ವಿದ್ಯಾರ್ಥಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಯಾವಾಗ ಈ ವಿಚಾರ ತಂದೆ-ತಾಯಿಗೆ ಗೊತ್ತಾಯಿತೋ ಆಗ ಹೆದರಿಕೊಂಡ ಅಭಿಷೇಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ

ಇನ್ನು ವಿದ್ಯಾರ್ಥಿಯ ಪೋಷಕರಿಗೆ ಈ ವಿಷಯ ಗೊತ್ತಾಗುತ್ತಲೇ ಶಿಕ್ಷಕ ಉಲ್ಟಾ ಹೊಡೆದಿದ್ದಾನೆ. ನನ್ನ ಬಳಿ ಯಾವುದೇ ಬಂಗಾರ ನೀಡಿಲ್ಲ ಎಂದು ಹೇಳುತ್ತಿದ್ದಾನೆ. ವಿದ್ಯಾರ್ಥಿ ಬಳಿ ಚಿನ್ನ ಪಡೆದು ಬ್ಯಾಂಕ್​ನಲ್ಲಿ ಅಡವಿಟ್ಟು ಬಂದಿರುವ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ತೋರಿಸಿದರೂ ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದಾರೆ ಅನ್ನೋದು ಪೋಷಕರ ಆರೋಪ. ಈ ಬಗ್ಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಕೇಳಿದರೆ, ಪ್ರಕರಣ ದಾಖಲಿಸಲು ಸೂಚನೆ ನೀಡುತ್ತೇನೆ ಅಂತಾ ಹೇಳಿದ್ದಾರೆ.

ದೂರು ನೀಡಿದ ಪೋಷಕರು

ಸದ್ಯಕ್ಕೆ ವಿದ್ಯಾರ್ಥಿಯ ಪೋಷಕರು ಉಪನಗರ ಠಾಣೆಗೆ ದೂರು ನೀಡಿದ್ದಾರೆ. ಆದರೆ ಇದುವರೆಗೂ ಎಫ್​ಐಆರ್​ ದಾಖಲಾಗಿಲ್ಲ. ಒಂದು ವೇಳೆ ಶಿಕ್ಷಕ ಚಿನ್ನವನ್ನು ಪಡೆದಿದ್ದು ನಿಜವಾಗಿದ್ದರೆ, ವಿದ್ಯಾರ್ಥಿಯ ಬಾಳಲ್ಲಿ ಬೆಳಕಾಗಬೇಕಿದ್ದ ಶಿಕ್ಷಕನೇ ವಿಲನ್ ಆಗಿದ್ದಾನೆ ಎನ್ನಬಹುದಾಗಿದೆ. ಪೊಲೀಸರು ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿ, ಸತ್ಯಾಂಶವನ್ನು ಹೊರಗೆ ತರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು? – Kannada News | ED attaches Anil Ambani’s Rs 3,716 Crore Mumbai Home In Money Laundering Case

ಮುಂಬೈ, (ಫೆಬ್ರವರಿ 25): ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಮುಂಬೈನಲ್ಲಿರುವ 3,716 ಮೌಲ್ಯದ ‘ಅಬೋಡ್’ ನಿವಾಸವನ್ನು ಇಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ. ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​​ಕಾಂ) ವಿರುದ್ಧ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದೆ ಎಂಬ ತಿಳಿದುಬಂದಿದೆ.

ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಜಪ್ತಿ ಮಾಡಲಾದ ಆಸ್ತಿಯ ಮೌಲ್ಯ 15,700 ಕೋಟಿ ರೂಪಾಯಿಗೆ ತಲುಪಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಿಲ್ ಅಂಬಾನಿಗೆ ಇನ್ನಷ್ಟು ಕುಣಿಕೆ ಬಿಗಿದ ಇಡಿ; 3,000 ಕೋಟಿ ರೂ ಮೌಲ್ಯದ ವಿವಿಧ ಆಸ್ತಿಗಳು ಮುಟ್ಟುಗೋಲು

ಈ ಜಪ್ತಿ ಆರ್‌ಕಾಮ್‌ನಿಂದ ಹಣಕಾಸು ಅಕ್ರಮಗಳು ಮತ್ತು ಸಾಲದ ಹಣದ ದುರ್ಬಳಕೆ ಆರೋಪಗಳ ಕುರಿತು ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿದೆ. ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳಿಂದ ವಂಚನೆ, ಲಂಚ ಮತ್ತು ಬ್ಯಾಂಕ್ ಸಾಲಗಳ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಎರಡು ಎಫ್‌ಐಆರ್‌ಗಳ ಆಧಾರದಲ್ಲಿ ಇಡಿ ತನಿಖೆ ನಡೆಸುತ್ತಿದೆ.

ಇನ್ನು ಮೂಲಗಳ ಪ್ರಕಾರ,  ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಅವರನ್ನು ಇಡಿ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಅವರನ್ನು ಈ ಹಿಂದೆ ಆಗಸ್ಟ್ 2025 ರಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಆ ವೇಳೆ ಪಿಎಂಎಲ್‌ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿತ್ತು. ಈಗ ಮತ್ತೊಮ್ಮೆ ವಿಚಾರಣೆಗೆ ಒಳಪಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 pm, Wed, 25 February 26

Source link

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ – Kannada News | Modi Modi chants echo in Israel Parliament Knesset welcomes Indian PM with standing ovation

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಹೈಕೋರ್ಟ್ – Kannada News | High Court stays release of The Kerala Story 2 Goes Beyond

ಭಾರಿ ಉತ್ಸಾಹದಲ್ಲಿ ಟೀಸರ್ ಬಿಡುಗಡೆ ಮಾಡಿ, ಮುಖಭಂಗ ಎದುರಿಸಿದ ‘ದಿ ಕೇರಳ ಸ್ಟೋರಿ 2’ (The Kerala Story 2) ಚಿತ್ರತಂಡಕ್ಕೆ ಈಗ ಇನ್ನೊಂದು ಆಘಾತ ಎದುರಾಗಿದೆ. ಈ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ (Kerala High Court) ಸೂಚನೆ ನೀಡಿದೆ. ಫೆಬ್ರವರಿ 27ರಂದು ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಜ್ಜಾಗಿದ್ದರು. ಆದರೆ ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಯಿತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಲು ಹತ್ತಿದರು. ಅದರ ವಿಚಾರಣೆ ನಡೆಯುತ್ತಿದೆ.

‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಆಗಿದೆ. ಈ ಸಿನಿಮಾದಿಂದ ರಾಜ್ಯದಲ್ಲಿ ಕೋಮು ಗಲಭೆ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ಚಿತ್ರದ ವಿರುದ್ಧ ಕೇಸ್ ಹಾಕಲಾಯಿತು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ಚಿತ್ರದ ಬಿಡುಗಡೆಗೆ ಹೈಕೋರ್ಟ್ ತಡೆ ನೀಡಿದೆ.

ಸಿನಿಮಾದ ವಿವಾದಕ್ಕೆ ಸಂಬಂಧಿಸಿದಂತೆ 3 ಅರ್ಜಿಗಳ ವಿಚಾರಣೆ ಬಾಕಿ ಇದೆ. ಆದರೆ ಶುಕ್ರವಾರವೇ ಸಿನಿಮಾ ಬಿಡುಗಡೆ ಆಗಬೇಕಿದೆ, ವಿದೇಶಿ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂದು ಕೋರ್ಟ್ ಗಮನಕ್ಕೆ ತರಲಾಯಿತು. ‘ಎಲ್ಲ ವಾದವನ್ನು ಆಲಿಸಬೇಕಿದೆ. ಅಲ್ಲಿಯ ತನಕ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿ’ ಎಂದು ಜಡ್ಜ್ ಸೂಚನೆ ನೀಡಿದರು.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಊಜಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಲವ್ ಜಿಹಾದ್ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಅದರ ಸೀಕ್ವೆಲ್ ಆಗಿ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಸಿನಿಮಾ ಸಿದ್ಧವಾಗಿದೆ. ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಸೃಷ್ಟಿ ಆಯಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ZIM: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ – Kannada News | New Zealand’s Dominant Win: SL Knocked Out of 2026 T20 World Cup Super 8 by Rachin Ravindra’s Spin

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕನ್ನಡಿಗ ರಚಿನ್ ರವೀಂದ್ರ ಸ್ಪಿನ ಮೋಡಿಗೆ ತತ್ತರಿಸಿ ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

Published On – 10:41 pm, Wed, 25 February 26

Source link

Exit mobile version