ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!
ಬೆಂಗಳೂರು, ಮಾರ್ಚ್ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…