ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ! – Kannada News | Bengaluru Crime: Hasan Saab Busted in Seshadripuram for Failed Bank ATM Heist
ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು. ಇದರ…