Headlines

ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ ಕೋಲಾರಕ್ಕೆ ದೊಡ್ಡ ಸಂಕಷ್ಟ – Kannada News | Kolar Soil Degradation: Solutions to Revive Farming and Farmer Livelihoods

ಕೋಲಾರ, ಫೆ.24: ದೇಶ-ವಿದೇಶಗಳಿಗೆ ಹಣ್ಣು, ತರಕಾರಿ ಮತ್ತು ಹೂವುಗಳನ್ನು ರಫ್ತು ಮಾಡಿ ‘ಕೃಷಿ ಕಣಜ’ ಎನಿಸಿಕೊಂಡಿದ್ದ ಕೋಲಾರ ಜಿಲ್ಲೆಯಲ್ಲಿ ಈಗ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಜಿಲ್ಲೆಯ ಮಣ್ಣು ತನ್ನ ಸಹಜ ಸತ್ವವನ್ನು ಕಳೆದುಕೊಂಡು ವಿಷಯುಕ್ತವಾಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಇಡೀ ಜಿಲ್ಲೆ ಬಂಜರು ಭೂಮಿಯಾಗಲಿದೆ ಎಂದು ಕೃಷಿ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಕೋಲಾರದ ಸುಮಾರು ಒಂದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಮಣ್ಣು ಈಗ ಸತ್ವ ಕಳೆದುಕೊಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಫಲವತ್ತತೆ ಕಳೆದುಕೊಂಡ ಜಿಲ್ಲೆ ಎಂಬ…

Read More

ವಿಟಮಿನ್ ಡಿ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | How to Take Vitamin D Supplements

ಇತ್ತೀಚಿನ ದಿನಗಳಲ್ಲಿ, ವಿಟಮಿನ್ ಡಿ (Vitamin D) ಸಪ್ಲಿಮೆಂಟ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬದಲಾಗುತ್ತಿರುವ ಜೀವನಶೈಲಿ, ಬಿಸಿಲಿಗೆ ಹೋಗದಿರುವುದು ಮತ್ತು ಮನೆ ಅಥವಾ ಕಚೇರಿಯಲ್ಲಿ ದೀರ್ಘಕಾಲ ಇರುವುದೇ ಈ ವಿಟಮಿನ್ ಕೊರತೆಗೆ ಪ್ರಮುಖ ಕಾರಣಗಳಾಗಿವೆ. ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಇದು ಮೂಳೆ ಮತ್ತು ಹಲ್ಲುಗಳನ್ನು ಬಲವಾಗಿಡುತ್ತದೆ. ಅಷ್ಟೇಅಲ್ಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಇದರ ಕೊರತೆಯು ಮೂಳೆ ನೋವು, ಆಯಾಸ, ದೌರ್ಬಲ್ಯ, ಆಗಾಗ ಅನಾರೋಗ್ಯ ಮತ್ತು ಮನಸ್ಥಿತಿ ಬದಲಾವಣೆಗಳಂತಹ ಲಕ್ಷಣಗಳಿಗೆ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದ: ಕೇರಳ ಹೈಕೋರ್ಟ್ ಮಹತ್ವದ ಆದೇಶ – Kannada News | Kerala high court says it will watch The Kerala Story 2 movie before giving order

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್, ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದೆ. ಧರ್ಮಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶ ಸಿನಿಮಾಕ್ಕೆ ಇದೆ…

Read More

IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ – Kannada News | IPL Schedule Split: Elections Force Two Phase Release; BCCI Navigates Challenges

ಆದಾಗ್ಯೂ, ಈ ಬಾರಿ ಬಿಸಿಸಿಐ ಮುಂದೆ ಕೆಲವು ಸವಾಲುಗಳಿವೆ. ಸಾಮಾನ್ಯವಾಗಿ, ಕೋಲ್ಕತ್ತಾದಲ್ಲಿ ಸಮಸ್ಯೆಗಳಿದ್ದರೆ, ಅಸ್ಸಾಂನ ಗುವಾಹಟಿ ಕ್ರೀಡಾಂಗಣವನ್ನು ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ, ಅಸ್ಸಾಂನಲ್ಲಿಯೂ ಚುನಾವಣೆಗಳು ಇರುವುದರಿಂದ ಅದು ಸಾಧ್ಯವಾಗದಿರಬಹುದು. Source link

Read More

ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು – Kannada News | India’s GDP might have grown over 8pc in 3rd Quarter, says SBI report

ನವದೆಹಲಿ, ಫೆಬ್ರುವರಿ 24: ಭಾರತದ ಆರ್ಥಿಕತೆ (Indian Economy) ಈ ವರ್ಷ ಉತ್ತಮ ವೇಗದಲ್ಲೇ ಸಾಗುತ್ತಿರುವಂತಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ಗಳಲ್ಲಿ ಸರಾಸರಿಯಾಗಿ ಶೇ. 8ರಷ್ಟು ಬೆಳವಣಿಗೆ ದಾಖಲಿಸಿದ್ದ ಜಿಡಿಪಿ, ಮೂರನೇ ಕ್ವಾರ್ಟರ್​ನಲ್ಲೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟು ಹಿಗ್ಗಿರಬಹುದು. ಅಮೆರಿಕದ ಟ್ಯಾರಿಫ್ ಸೇರಿದಂತೆ ಜಾಗತಿಕವಾಗಿ ಹಲವು ಅಡೆತಡೆಗಳು ಇದ್ದಾಗ್ಯೂ ಭಾರತದ ಆರ್ಥಿಕತೆ ಉತ್ತಮ ಕ್ಷಮತೆ ತೋರಿದೆ. ಪ್ರಬಲ ಆಂತರಿಕ…

Read More

Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು – Kannada News | Chanakya Niti: According to Chanakya, these factors are the reason for the destruction of the house

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನ, ಕುಟುಂಬ, ಹಣ ಮತ್ತು ಸಮಾಜಕ್ಕೆ ಸಂಬಂಧಿಸಿದ ಅನೇಕ ಆಳವಾದ ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಹಲವು ಸಂಗತಿಗಳ ಬಗ್ಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ, ಅದರಲ್ಲಿ ಮುಖ್ಯವಾಗಿ ಕುಟುಂಬ ಸದಸ್ಯರ ಕೆಲವೊಂದು ವರ್ತನೆಯಿಂದ ಮನೆಯೇ ವಿನಾಶದತ್ತ ತಲುಪುವ ಸಾಧ್ಯತೆ ಇದೆ.  ಆ ವರ್ತನೆಗಳನ್ನು ಸರಿಪಡಿಸುವ ಮೂಲಕ ನೀವು ನಿಮ್ಮ ಕುಟುಂಬವನ್ನು ಆರ್ಥಿಕ ಸಮಸ್ಯೆಗಳಿಂದ ಮಾತ್ರವಲ್ಲದೆ ಮಾನಸಿಕ ಮತ್ತು ಸಾಮಾಜಿಕ ಹಾನಿಯಿಂದಲೂ ರಕ್ಷಿಸಬಹುದು ಎಂದು ಹೇಳಿದ್ದಾರೆ….

Read More

ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ – Kannada News | Rashmika Mandanna Vijay Deverakonda wedding guests to have Japanese food

ಅಭಿಮಾನಿಗಳ ಕಾಯುವಿಕೆ ಕೊನೆಗೂ ಅಂತ್ಯಗೊಂಡಿದೆ. ಹಲವು ವರ್ಷಗಳಿಂದ ತಮ್ಮ ಪ್ರೇಮಕಥೆಯನ್ನು ಗುಟ್ಟಾಗಿ ಇಟ್ಟಿದ್ದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆಯನ್ನು ಅಧಿಕೃತವಾಗಿ ಘೋಷಿಸಿದರು. ರಶ್ಮಿಕಾ ಮತ್ತು ವಿಜಯ್ (Vijay Deverakonda) ಅವರ ವಿವಾಹವು ರಾಜಸ್ಥಾನದ ಉದಯಪುರದ ಖಾಸಗಿ ಹೋಟೆಲ್‌ನಲ್ಲಿ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಲಿದೆ. ಅವರ ವಿವಾಹ ಸ್ಥಳದಲ್ಲಿ ಮೂರು ಹಂತದ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸರು, ಹೈದರಾಬಾದ್‌ನ ವಿಶೇಷ ತಂಡ ಹಾಗೂ ಅಂತಾರಾಷ್ಟ್ರೀಯ ಭದ್ರತೆಯ ನಡುವೆ ರಶ್ಮಿಕಾ,…

Read More

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ – Kannada News | Yash fans express doubts about Toxic movie English version release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ ಈ ಆ್ಯಕ್ಷನ್ ಅಬ್ಬರದ ಸಿನಿಮಾ ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಬಜೆಟ್‌ನ ಚಿತ್ರ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ನೋಡಿದರೆ ಸಿನಿಮಾದಲ್ಲಿ ರಕ್ತಸಿಕ್ತ ದೃಶ್ಯಗಳು ಹೇರಳವಾಗಿವೆ ಎಂಬ ಸುಳಿವು ಸಿಕ್ಕಿದೆ. ಅದರಿಂದ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಆದರೆ, ಸಿನಿಮಾದ ಬಿಡುಗಡೆ ವಿಚಾರದಲ್ಲಿ…

Read More

ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ – Kannada News | Unemployed Youth in Dharwad Demand Action on Vacant Posts, Criticise Government

ಧಾರವಾಡ, ಫೆ.24: ಸರ್ಕಾರಿ ಹುದ್ದೆಗಳ ಭರ್ತಿಗಾಗಿ ನಿರುದ್ಯೋಗಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶ್ರೀನಗರ ವೃತ್ತದಿಂದ ಜುಬಿಲಿ ವೃತ್ತದವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭಟನೆಗೆ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ದೊರೆತಿದ್ದು, ವಿದ್ಯಾರ್ಥಿಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯೊಬ್ಬರು ತಮ್ಮ ನೋವನ್ನು ಹಂಚಿಕೊಳ್ಳುತ್ತಾ, “ನಾನು ಕಳೆದ ಮೂರು ವರ್ಷಗಳಿಂದ ಓದಲು ಬಂದಿದ್ದೇನೆ. ನನ್ನ ತಂದೆ ಇಲ್ಲ. ನನ್ನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ…

Read More

ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ – Kannada News | From Slum To Villa Drugged forced to convert Bhopal Sisters Arrested for Sex Racket

ನವದೆಹಲಿ, ಫೆಬ್ರವರಿ 24: ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿ ಒಂದು ಘಟನೆ ಆಘಾತಕಾರಿ ಅಲೆಗಳನ್ನು ಎಬ್ಬಿಸಿದೆ. ಭೋಪಾಲ್‌ನ (Bhopal) ಇಬ್ಬರು ಸಹೋದರಿಯರನ್ನು ಅತ್ಯಾಚಾರ, ಬಲವಂತದ ಮತಾಂತರ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯೂಟಿಷಿಯನ್ ಮತ್ತು ಮಹಿಳೆಯೊಬ್ಬರು ನೀಡಿದ 2 ಪ್ರತ್ಯೇಕ ದೂರುಗಳಿಂದಾಗಿ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರು ಮತ್ತು ಅವರ ಗ್ಯಾಂಗ್ ನಡೆಸುತ್ತಿದ್ದ ಲೈಂಗಿಕ ಮತ್ತು ಧಾರ್ಮಿಕ ಮತಾಂತರ ಜಾಲ ಬಯಲಾಗಿದೆ. ಛತ್ತೀಸ್‌ಗಢದ 21 ವರ್ಷದ ಮತ್ತು ಭೋಪಾಲ್‌ನ 30…

Read More