ನಾಳೆ ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ – Kannada News | Karnataka Police Recruitment Exam Tomorrow: Priyank Kharge Shares Important Instructions for Candidates
ಬೆಂಗಳೂರು, ಆಗಸ್ಟ್ 01: ನಾಳೆ ನಡೆಯಲಿರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ (Police Constable Recruitment) ಲಿಖಿತ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಶುಭಾಶಯ ತಿಳಿಸಿದ್ದಾರೆ. ನೇಮಕಾತಿ ಪರೀಕ್ಷೆ ಆಯೋಜನೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗಿದ್ದು, ಯುವ ಜನರ ಭವಿಷ್ಯ ಭದ್ರಪಡಿಸಲು ಸಂಪೂರ್ಣ ಪಾರದರ್ಶಕತೆಗೆ ಒತ್ತು ನೀಡಲಾಗಿದೆ. ಯಾವುದೇ ರೀತಿಯ ಅಕ್ರಮದ ಬಗ್ಗೆ ಸುಳಿವಿದ್ದರೆ ನೇರವಾಗಿ ಸಂಪರ್ಕಿಸುವಂತೆ ಉದ್ಯೋಗಾಂಕ್ಷಿಗಳಿಗೆ ಗೃಹ ಸಚಿವರು ಕರೆ ನೀಡಿದ್ದಾರೆ. ಜನಿವಾರ, ಮಾಂಗಲ್ಯಸರ ಧರಿಸಲು ಅನುಮತಿ…