ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash
ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ…