ಗವರ್ನರ್ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬೆಂಗಳೂರು, ಜೂನ್ 1: ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ನಡು ಮಾರ್ಗದಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಇದೇ ವೇಳೆ ಬಳಿ ಬಂದ ಟ್ರಾಫಿಕ್ ಪೊಲೀಸರ ಬಳಿ, ‘ನನ್ನ ಪತ್ನಿ ಗರ್ಭಿಣಿ, ಈಗ ಹೇಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಸಂಚಾರಕ್ಕಾಗಿ ಸುಮಾರು 30 ನಿಮಿಷ ಪೊಲೀಸರು ಟ್ರಾಫಿಕ್ ಬಂದ್ ಮಾಡಿದ್ದರು. ಇದರಿಂದ ವ್ಯಕ್ತಿ ಕೆರಳಿದ್ದರು. ನಂತರ ವ್ಯಕ್ತಿಯನ್ನು ಪೊಲೀಸರು…