ಹಾಸನ: ಪ್ರಧಾನಿ ಮೋದಿ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್ಡಿ ದೇವೇಗೌಡ – Kannada News | Hassan: PM Modi to Inaugurate Mega Dairy; HD Deve Gowda
ಹಾಸನ, ಮೇ 12: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಹಾಲು ಮಹಾಮಂಡಳ (KMF) ವತಿಯಿಂದ 830 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೇರಿ ಕಾಮಗಾರಿ ಅಂತಿಮ ಹಂತ ತಲುಪಿದೆ. ಮಾಜಿ ಪ್ರಧಾನಿ, JDS ವರಿಷ್ಠ ಹೆಚ್.ಡಿ. ದೇವೇಗೌಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರೊಂದಿಗೆ ಮಂಗಳವಾರ ಡೇರಿ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿ. ದೇವೇಗೌಡ, ಜುಲೈ ಮೊದಲ ಅಥವಾ 2ನೇ ವಾರದಲ್ಲಿ ಮೆಗಾ ಡೇರಿ ಉದ್ಘಾಟನೆಗೊಳ್ಳಲಿದ್ದು,…